ದೇಶವನ್ನು ಉಳಿಸಲು ನಾವು ಬಿಜೆಪಿ ಕಟ್ಟುತ್ತಿದ್ದೇವೆ: ಕೋಟಾ ಶ್ರೀನಿವಾಸ ಪೂಜಾರಿ

| Published : Nov 10 2024, 01:49 AM IST

ದೇಶವನ್ನು ಉಳಿಸಲು ನಾವು ಬಿಜೆಪಿ ಕಟ್ಟುತ್ತಿದ್ದೇವೆ: ಕೋಟಾ ಶ್ರೀನಿವಾಸ ಪೂಜಾರಿ
Share this Article
  • FB
  • TW
  • Linkdin
  • Email

ಸಾರಾಂಶ

ಚಿಕ್ಕಮಗಳೂರು, ದೇಶ ಉಳಿಸಲು ನಾವು ಬಿಜೆಪಿಯನ್ನು ಕಟ್ಟುತ್ತಿದ್ದೇವೆ ಎಂದು ಯೋಚನೆ ಮಾಡಿದರೆ ನಮ್ಮ ಸೈದ್ಧಾಂತಿಕ ವಿಚಾರಗಳಿಗೆ ಶಕ್ತಿ ಬರುತ್ತದೆ ಎಂದು ಉಡುಪಿ - ಚಿಕ್ಕಮಗಳೂರು ಲೋಕಸಭಾ ಕ್ಷೇತ್ರದ ಸಂಸದ ಕೋಟಾ ಶ್ರೀನಿವಾಸ ಪೂಜಾರಿ ಹೇಳಿದರು.

ಮೂಡಿಗೆರೆ ಕ್ಷೇತ್ರ ವ್ಯಾಪ್ತಿಯ ವಸ್ತಾರೆ ಮಹಾಶಕ್ತಿ ಕೇಂದ್ರ ನೂತನ ಅಧ್ಯಕ್ಷ, ಪದಾಧಿಕಾರಿಗಳ ಜವಾಬ್ದಾರಿ ಸ್ವೀಕಾರ

ಕನ್ನಡಪ್ರಭ ವಾರ್ತೆ ಚಿಕ್ಕಮಗಳೂರು

ದೇಶ ಉಳಿಸಲು ನಾವು ಬಿಜೆಪಿಯನ್ನು ಕಟ್ಟುತ್ತಿದ್ದೇವೆ ಎಂದು ಯೋಚನೆ ಮಾಡಿದರೆ ನಮ್ಮ ಸೈದ್ಧಾಂತಿಕ ವಿಚಾರಗಳಿಗೆ ಶಕ್ತಿ ಬರುತ್ತದೆ ಎಂದು ಉಡುಪಿ - ಚಿಕ್ಕಮಗಳೂರು ಲೋಕಸಭಾ ಕ್ಷೇತ್ರದ ಸಂಸದ ಕೋಟಾ ಶ್ರೀನಿವಾಸ ಪೂಜಾರಿ ಹೇಳಿದರು.

ಶನಿವಾರ ನಡೆದ ಮೂಡಿಗೆರೆ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ವಸ್ತಾರೆ ಮಹಾಶಕ್ತಿ ಕೇಂದ್ರದ ನೂತನ ಅಧ್ಯಕ್ಷ ಮತ್ತು ಪದಾಧಿಕಾರಿಗಳ ಜವಾಬ್ದಾರಿ ಸ್ವೀಕಾರ ಸಮಾರಂಭದಲ್ಲಿ ಭಾಗವಹಿಸಿ ಮಾತನಾಡಿದರು. ಬಹಳ ಜನರು ಬೇರೆ ಬೇರೆ ದೇಶಗಳ ಬಗ್ಗೆ ಹೆಚ್ಚು ಮಾತನಾಡುತ್ತಾರೆ. ಚೀನಾ ನಮಗಿಂತ ಮುಂದಿದೆ ಎನ್ನುವವರಿದ್ದಾರೆ. ಆದರೆ, ಅಲ್ಲಿ ದೇಶದ ಪ್ರಶ್ನೆ ಬಂದಾಗ ಎರಡು ಮಾತನಾಡಲು ಅವಕಾಶವೇ ಇಲ್ಲ. ಆ ಹಿನ್ನೆಲೆಯಲ್ಲಿ ನಮ್ಮ ಭಾರತದ ಬದುಕನ್ನ ನೋಡಬೇಕಾದ ಅಗತ್ಯವಿದೆ ಎಂದರು.

ಒಂದೆಡೆ ಪ್ರಧಾನಿ ನರೇಂದ್ರ ಮೋದಿ ನೇತೃತ್ವದಲ್ಲಿ ಇಡೀ ಕೇಂದ್ರ ಸರ್ಕಾರ ದೇಶಕ್ಕಾಗಿ ಕೆಲಸ ಮಾಡುತ್ತಿದ್ದರೆ, ಕರ್ನಾಟಕದಲ್ಲಿ ಕೆಂಗಲ್ ಹನುಮಂತಯ್ಯನವರು ಕಟ್ಟಿದ ಪ್ರಜಾಪ್ರಭುತ್ವದ ದೇಗುಲ ವಿಧಾನಸೌಧದಲ್ಲಿ ನಿಂತು ಪಾಕಿಸ್ಥಾನಕ್ಕೆ ಜೈ ಎಂದು ಕೂಗುತ್ತಾರೆ ಎಂದು ಯೋಚನೆ ಮಾಡಿದರೆ ನಮ್ಮ ಮುಂದಿನ ತಲೆಮಾರಿನ ಬಗ್ಗೆ ಯೋಚನೆ ಉಂಟಾಗುತ್ತದೆ ಎಂದರು.ದೇಶ ಕಟ್ಟುವ ಒಂದು ಭಾಗವಾಗಿ ನಮ್ಮ ಹಿರಿಯರು ಭಾರತೀಯ ಜನತಾ ಪಕ್ಷ ಕಟ್ಟಿದ್ದಾರೆ. ಇಂದು ಸದಸ್ಯತ್ವ ಅಭಿಯಾನ ನಡೆಯುತ್ತಿದೆ. ಬಿಜೆಪಿ ವಿಚಾರಧಾರೆಯನ್ನು ನಾವು ಗಟ್ಟಿಗೊಳಿಸದೇ ಇದ್ದಲ್ಲಿ, ನಾವೆಲ್ಲರೂ ಮುಕ್ತವಾಗಿ ಪಕ್ಷ ಬೆಂಬಲಿಸದೇ ಇದ್ದಲ್ಲಿ ಮುಂದಿನ ತಲೆಮಾರು ಈ ದೇಶದಲ್ಲಿ ಬದುಕುವುದು ಕಷ್ಟವಿದೆ ಎನ್ನುವ ಅಭಿಪ್ರಾಯ ಸಾಮಾನ್ಯ ಜನರು ವ್ಯಕ್ತ ಪಡಿಸುತ್ತಿದ್ದಾರೆ ಎಂದು ಹೇಳಿದರು.

ವಿಧಾನ ಪರಿಷತ್ ಉಪ ಸಭಾಪತಿ ಎಂ.ಕೆ.ಪ್ರಾಣೇಶ್ ಮಾತನಾಡಿ, ನಮ್ಮ ಮುಂದಿನ ಪೀಳಿಗೆ ಭವಿಷ್ಯ ರೂಪುಗೊಳ್ಳಬೇಕಿದೆ. ನಮ್ಮ ಧರ್ಮ ಕಾಪಾಡಲು ಬಿಜೆಪಿ, ಆರ್‌ಎಸ್‌ಎಸ್, ಬಜರಂಗದಳ, ವಿಶ್ವಹಿಂದೂ ಪರಿಷತ್ ಪಣತೊಟ್ಟು ಹೋರಾಡುತ್ತಿವೆ ಎಂದರು.

ಜಿಲ್ಲಾ ಬಿಜೆಪಿ ಅಧ್ಯಕ್ಷ ಎಂ.ಆರ್. ದೇವರಾಜ ಶೆಟ್ಟಿ ಮಾತನಾಡಿ, ಜಿಲ್ಲೆಯ ಐದೂ ಕ್ಷೇತ್ರದಲ್ಲಿ ನಮ್ಮ ಶಾಸಕರಿದ್ದರು. ಕಳೆದ ಚುನಾವಣೆಯಲ್ಲಿ ಐದೂ ಸ್ಥಾನಗಳನ್ನು ಕಳೆದು ಕೊಂಡಿದ್ದೇವೆ. ಬಿಜೆಪಿಯನ್ನು ಸೋಲಿಸುವ ಶಕ್ತಿ ಕಾಂಗ್ರೆಸ್‌ಗೆ ಇರಲಿಲ್ಲ. ನಮ್ಮ ಪಕ್ಷದ ಕೆಲ ಮುಖಂಡರು ಹಾಗೂ ಕಾರ್ಯಕರ್ತರ ಅಸಮಾಧಾನದಿಂದ ಸೋಲಾಗಿದೆ ಎಂದರು.

ವಸ್ತಾರೆ ಶಕ್ತಿ ಕೇಂದ್ರದ ನೂತನ ಅಧ್ಯಕ್ಷ ಪ್ರಸನ್ನ ಮಾತನಾಡಿದರು. ಕೂದುವಳ್ಳಿ ಅರವಿಂದ್‌ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು. ರೈತ ಮೋರ್ಚಾ ರಾಜ್ಯ ಪ್ರಧಾನ ಕಾರ್ಯದರ್ಶಿ ಕಲ್ಮರಡಪ್ಪ, ಆಲ್ದೂರು ಮಂಡಲಾಧ್ಯಕ್ಷ ರವಿ ಬಸರವಳ್ಳಿ, ಕಾಫಿ ಮಂಡಳಿ ಸದಸ್ಯ ಜಿ.ಕೆ.ಕುಮಾರ್, ದೀಪಕ್‌ ದೋಡ್ಡಯ್ಯ, ಡಾ. ನರೇಂದ್ರ, ರವೀದ್ರ ಬೆಳವಾಡಿ, ಪುಣ್ಯಪಾಲ್, ಎಚ್.ಎಸ್.ಕವೀಶ್, ನಿರಂಜನ್ ಜಸಿಂತಾ ಅನಿಲ್‌ಕುಮಾರ್, ಸಂತೋಷ್‌ ಕೋಟ್ಯಾನ್‌ ಉಪಸ್ಥಿತರಿದ್ದರು. 9 ಕೆಸಿಕೆಎಂ 6ಮೂಡಿಗೆರೆ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ವಸ್ತಾರೆ ಮಹಾ ಶಕ್ತಿ ಕೇಂದ್ರದ ನೂತನ ಅಧ್ಯಕ್ಷ ಮತ್ತು ಪದಾಧಿಕಾರಿಗಳ ಜವಾಬ್ದಾರಿ ಸ್ವೀಕಾರ ಸಮಾರಂಭ ಶನಿವಾರ ನಡೆಯಿತು. ಸಂಸದ ಕೋಟಾ ಶ್ರೀನಿವಾಸ್‌ ಪೂಜಾರಿ, ಬಿಜೆಪಿ ಜಿಲ್ಲಾಧ್ಯಕ್ಷ ದೇವರಾಜ್ ಶೆಟ್ಟಿ, ಕಲ್ಮರಡಪ್ಪ, ದೀಪಕ್‌ ದೊಡ್ಡಯ್ಯ ಇದ್ದರು.