ನಾವು ಮಕ್ಕಳ ಜ್ಞಾನ, ಸುಜ್ಞಾನ ಕಲಿಕೆಗೆ ಗಮನ ನೀಡುತ್ತಿಲ್ಲ: ಚೇತನ್ ರಾಮ್

| Published : Feb 05 2024, 01:46 AM IST

ನಾವು ಮಕ್ಕಳ ಜ್ಞಾನ, ಸುಜ್ಞಾನ ಕಲಿಕೆಗೆ ಗಮನ ನೀಡುತ್ತಿಲ್ಲ: ಚೇತನ್ ರಾಮ್
Share this Article
  • FB
  • TW
  • Linkdin
  • Email

ಸಾರಾಂಶ

ವಿದ್ಯಾರ್ಥಿಗಳಲ್ಲಿ ನೈತಿಕ ಪ್ರಜ್ಞೆ ಮಾನವೀಯ ಗುಣಗಳು ಕುಸಿತವಾಗುತ್ತಿದೆ. ಅಂಕಗಳಿಕೆ ಮಾನದಂಡದ ಅಡಿಯಲ್ಲಿ ವ್ಯಕ್ತಿತ್ವ ವಿಕಸನಕ್ಕೆ ಆದ್ಯತೆ ನೀಡದಿದ್ದರೆ ಉತ್ತಮ ಪ್ರಜೆ ಸೃಷ್ಟಿಸಲು ಸಾಧ್ಯವಿಲ್ಲ. ಪಿಯು ಶಿಕ್ಷಣ ವಿದ್ಯಾರ್ಥಿಗಳ ಪಾಲಿಗೆ ಮಹತ್ವರ ಘಟ್ಟವಾಗಿದೆ. ಮಕ್ಕಳಿಗೆ ಭವಿಷ್ಯ ರೂಪಿಸಲು ಉಪನ್ಯಾಸಕರ ಪಾತ್ರ ಹಿರಿದಾಗಿದೆ. ಆದರೆ, ಪಿಯು ಶಿಕ್ಷಣ ತ್ರಿಶಂಕು ಸ್ಥಿತಿ ತಲುಪುತ್ತಿದೆ.

ಕನ್ನಡಪ್ರಭ ವಾರ್ತೆ ಕೆ.ಆರ್.ಪೇಟೆ

ತಂತ್ರಜ್ಞಾನ ಮತ್ತು ವಿಜ್ಞಾನ ಕಲಿಸುವ ನಿಟ್ಟಿನಲ್ಲಿ ನಾವು ಮಕ್ಕಳಿಗೆ ಜ್ಞಾನ ಮತ್ತು ಸುಜ್ಞಾನ ಕಲಿಕೆಗೆ ಗಮನ ನೀಡುತ್ತಿಲ್ಲ ಎಂದು ವ್ಯಕ್ತಿತ್ವ ವಿಕಸನ ತರಬೇತುದಾರ ಚೇತನ್ ರಾಮ್ ಹೇಳಿದರು.

ಪಟ್ಟಣದ ಸಾಹುಕಾರ್ ಚಿಕ್ಕಣ್ಣಗೌಡ ಸಮುದಾಯ ಭವನದಲ್ಲಿ ತಾಲೂಕು ಪದವಿ ಪೂರ್ವ ಕಾಲೇಜು ಉಪನ್ಯಾಸಕರ ಸಂಘ ಆಯೋಜಿಸಿದ್ದ ಶೈಕ್ಷಣಿಕ ಸಮಾವೇಶ, ಪ್ರತಿಭಾ ಪುರಸ್ಕಾರ, ವಯೋನಿವೃತ್ತಿ ಹೊಂದಿದವರಿಗೆ ಬೀಳ್ಕೊಡುಗೆ ಮತ್ತು ಶೇ.100 ರಷ್ಟು ಫಲಿತಾಂಶ ಪಡೆದ ಕಾಲೇಜಿನ ಉಪನ್ಯಾಸಕರಿಗೆ ಸನ್ಮಾನ ಸಮಾರಂಭದಲ್ಲಿ ಮಾತನಾಡಿದರು.

ವಿದ್ಯಾರ್ಥಿಗಳಲ್ಲಿ ನೈತಿಕ ಪ್ರಜ್ಞೆ ಮಾನವೀಯ ಗುಣಗಳು ಕುಸಿತವಾಗುತ್ತಿದೆ. ಅಂಕಗಳಿಕೆ ಮಾನದಂಡದ ಅಡಿಯಲ್ಲಿ ವ್ಯಕ್ತಿತ್ವ ವಿಕಸನಕ್ಕೆ ಆದ್ಯತೆ ನೀಡದಿದ್ದರೆ ಉತ್ತಮ ಪ್ರಜೆ ಸೃಷ್ಟಿಸಲು ಸಾಧ್ಯವಿಲ್ಲ ಎಂದರು.

ವಿಧಾನ ಪರಿಷತ್ತಿನ ಸದಸ್ಯ ಮರಿತಿಬ್ಬೇಗೌಡ ಮಾತನಾಡಿ, ಪಿಯು ಶಿಕ್ಷಣ ವಿದ್ಯಾರ್ಥಿಗಳ ಪಾಲಿಗೆ ಮಹತ್ವರ ಘಟ್ಟವಾಗಿದೆ. ಮಕ್ಕಳಿಗೆ ಭವಿಷ್ಯ ರೂಪಿಸಲು ಉಪನ್ಯಾಸಕರ ಪಾತ್ರ ಹಿರಿದಾಗಿದೆ. ಆದರೆ, ಪಿಯು ಶಿಕ್ಷಣ ತ್ರಿಶಂಕು ಸ್ಥಿತಿ ತಲುಪುತ್ತಿದೆ ಎಂದು ಆತಂಕ ವ್ಯಕ್ತಪಡಿಸಿದರು.

ವಿಧಾನ ಪರಿಷತ್ತಿನ ಮಾಜಿ ಸದಸ್ಯ ಕೆ.ಟಿ.ಶ್ರೀಕಂಠೇಗೌಡ ಮಾತನಾಡಿ, ಪಿಯು ಉಪನ್ಯಾಸಕರ ಸಮಸ್ಯೆ ಬೆಟ್ಟದಷ್ಟಿದೆ. ಬಗೆಹರಿಸಬೇಕಾದ ಸರ್ಕಾರ ಗೋಜಲು ಮಾಡುತ್ತಿದೆಯೇ ವಿನಹಃ ಪ್ರಾಮಾಣಿಕವಾಗಿ ಬಗೆಹರಿಸುವ ಪ್ರಯತ್ನ ನಡೆಸಿಲ್ಲ ಎಂದರು.

ಶಾಸಕ ಎಚ್.ಟಿ.ಮಂಜು ಮಾತನಾಡಿ, ತಾಲೂಕಿನರುವ ಸರ್ಕಾರಿ ಪಿಯು ಕಾಲೇಜಿನ ಸಮಸ್ಯೆ ನಿವಾರಣೆಗೆ ಪ್ರಾಮಾಣಿಕ ಪ್ರಯತ್ನ ನಡೆಸುತ್ತೇನೆ. ಉಪನ್ಯಾಸಕರ ಸಮಸ್ಯೆ ನಿವಾರಣೆಗಾಗಿ ಸದನದಲ್ಲಿ ಪ್ರಸ್ತಾಪ ಮಾಡಿ ಇಲ್ಲಿನ ಪಿಯು ಕಾಲೇಜುಗಳಿಗೆ ಅಗತ್ಯ ಸೌಲಭ್ಯ ಒದಗಿಸುವ ಭರವಸೆ ನೀಡಿದರು.

ಪದವಿ ಪೂರ್ವ ಶಿಕ್ಷಣ ಇಲಾಖೆಯ ಉಪನಿರ್ದೇಶಕ ಚೆಲುವಯ್ಯ, ರಾಜ್ಯ ಆರ್‌ಟಿಒ ಸಂಘದ ರಾಜ್ಯಾಧ್ಯಕ್ಷ ಮಲ್ಲಿಕಾರ್ಜುನ್ ಮತ್ತು ಮನ್ಮುಲ್ ನಿರ್ದೇಶಕ ಡಾಲು ರವಿ ಪ್ರತಿಭಾನ್ವಿತ ಶಿಕ್ಷಕರು ಮತ್ತು ವಿದ್ಯಾರ್ಥಿಗಳನ್ನು ಗೌರವಿಸಿದರು. ರಾಜ್ಯ ಮಟ್ಟದ ಕಸಾಪ ಕೃಷಿ ಪ್ರಶಸ್ತಿ ಪಡೆದ ಪ್ರಗತಿಪರ ಕೃಷಿಕ ಕೆ.ಎಸ್.ಸೋಮಶೇಖರ್, ಹಿರಿಯ ಪತ್ರಕರ್ತ ಎಂ.ಕೆ.ಹರಿಚರಣ ತಿಲಕ್ ಅವರನ್ನು ಸನ್ಮಾನಿಸಲಾಯಿತು.

ಈ ವೇಳೆ ತಾಲೂಕು ಉಪನ್ಯಾಸಕರ ಸಂಘದ ಅಧ್ಯಕ್ಷ ಬಿ.ಎಲ್.ಮಂಜುನಾಥ್, ಬಿಇಒ ಆರ್.ಎಸ್.ಸೀತಾರಾಮು, ಬಡ್ತಿ ಉಪನ್ಯಾಸಕರ ಸಂಘದ ರಾಜ್ಯಾಧ್ಯಕ್ಷ ಡಿ.ಆರ್.ರಮೇಶ್, ರಾಜ್ಯ ಸಹಕಾರ ಮಹಾಮಂಡಳಿ ನಿರ್ದೇಶಕ ಎಸ್.ಎಲ್. ಮೋಹನ್, ಜಿಲ್ಲಾ ಪಿಯು ಪ್ರಾಂಶುಪಾಲರ ಸಂಘದ ಅಧ್ಯಕ್ಷ ಭೈರೇಶ್, ಪ್ರಾಂಶುಪಾಲರಾದ ಡಿ.ಬಿ.ಸತ್ಯ, ಕೆ.ಮೋಹನ್, ಲಿಂಗರಾಜು, ಜಿಲ್ಲಾ ಪಿಯು ಉಪನ್ಯಾಸಕರ ಸಂಘದ ಅಧ್ಯಕ್ಷ ಚನ್ನಕೃಷ್ಣಯ್ಯ, ಜಿಲ್ಲಾ ಕೋಶಾಧ್ಯಕ್ಷೆ ಬಿ.ಎಸ್.ಲತಾ, ಡಿಡಿಪಿಯು ಕಚೇರಿ ಶಾಖಾಧಿಕಾರಿ ರಾಜೇಗೌಡ, ಸರ್ಕಾರಿ ನೌಕರರ ಸಂಘದ ತಾಲೂಕು ಅಧ್ಯಕ್ಷ ಶಿವರಾಮೇಗೌಡ, ಉಪಾಧ್ಯಕ್ಷ ಎಸ್.ಡಿ. ಹರೀಶ್, ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ತಾಲೂಕು ಅಧ್ಯಕ್ಷ ಪದ್ಮೇಶ್, ಪ್ರೌಢ ಶಾಲಾ ಶಿಕ್ಷಕರ ಸಂಘದ ತಾಲೂಕು ಅಧ್ಯಕ್ಷ ಬಸವರಾಜು, ತಾಲೂಕು ಉಪನ್ಯಾಸಕರ ಸಂಘದ ಅಧ್ಯಕ್ಷ ರಾಮಕೃಷ್ಣೇಗೌಡ ಸೇರಿದಂತೆ ಹಲವರು ಇದ್ದರು.