ಸಾರಾಂಶ
ಸೋಂಪುರ ವಿವಿದೋದ್ದೇಶ ಪ್ರಾಥಮಿಕ ಗ್ರಾಮೀಣ ಸಹಕಾರ ಸಂಘದ ಆವರಣದಲ್ಲಿ ನಡೆದ ಐದು ವರ್ಷದ ಆಡಳಿತ ಮಂಡಳಿಯ ಚುನಾವಣೆಯಲ್ಲಿ 12 ನಿರ್ದೇಶಕರು ಹೆಚ್ಚು ಮತ ಪಡೆಯುವ ಮೂಲಕ ಗೆಲುವು ಸಾಧಿಸಿದ್ದಾರೆಂದು ಚುನಾವಣಾಧಿಕಾರಿ ನಾಗರಾಜು.ಎಚ್. ಘೋಷಿಸಿದರು.
ಕನ್ನಡಪ್ರಭ ವಾರ್ತೆ ದಾಬಸ್‍ಪೇಟೆ
ಸೋಂಪುರ ವಿವಿದೋದ್ದೇಶ ಪ್ರಾಥಮಿಕ ಗ್ರಾಮೀಣ ಸಹಕಾರ ಸಂಘದ ಆವರಣದಲ್ಲಿ ನಡೆದ ಐದು ವರ್ಷದ ಆಡಳಿತ ಮಂಡಳಿಯ ಚುನಾವಣೆಯಲ್ಲಿ 12 ನಿರ್ದೇಶಕರು ಹೆಚ್ಚು ಮತ ಪಡೆಯುವ ಮೂಲಕ ಗೆಲುವು ಸಾಧಿಸಿದ್ದಾರೆಂದು ಚುನಾವಣಾಧಿಕಾರಿ ನಾಗರಾಜು.ಎಚ್. ಘೋಷಿಸಿದರು.ಚುನಾವಣೆಯಲ್ಲಿ ಸಾಲಗಾರರ ಕ್ಷೇತ್ರದ ಸಾಮಾನ್ಯ ವರ್ಗದ ಐದು ಸ್ಥಾನಗಳಲ್ಲಿ ಶಶಿಧರ್ 202 ಮತ, ಚಂದ್ರಶೇಖರ್ 184, ರಂಗನಾಥ್.ಸಿ 180, ಮಂಜುನಾಥ್.ಪಿ 178, ಗಂಗರುದ್ರಯ್ಯ 172 ಮತ ಪಡೆದು ವಿಜಯಶಾಲಿಯಾಗಿದ್ದಾರೆ. ಸಾಲಗಾರರಲ್ಲದ ಕ್ಷೇತ್ರದಲ್ಲಿ ಮೋಹನ್ ಕುಮಾರ್.ಎಂ 17 ಮತ, ಸಾಲಗಾರರ ಕ್ಷೇತ್ರದ ಹಿಂದುಳಿದ ವರ್ಗದ 2 ಸ್ಥಾನಗಳಿಗೆ ಕೆಂಪರಾಜು.ಜಿ 204, ನಾರಾಯಣಪ್ಪ ಆರ್.211, ಮಹಿಳಾ ಮೀಸಲು ಕ್ಷೇತ್ರದ 2 ಸ್ಥಾನಗಳಿಗೆ ಚಿಕ್ಕವಾಣಿ 218, ವೇದಾವತಿ 194 ಮತ ಪರಿಶಿಷ್ಟ ಜಾತಿ ಮೀಸಲು ಕ್ಷೇತ್ರದಲ್ಲಿ ಗಂಗರಾಜು 182, ಪ.ಪಂಗಡದ 1 ಸ್ಥಾನಕ್ಕೆ ಕೃಷ್ಣಮೂರ್ತಿ 205 ಮತಗಳನ್ನು ಪಡೆದು ಗೆಲುವು ಸಾಧಿಸಿದ್ದಾರೆ.ಗ್ರಾ.ಪಂ.ಮಾಜಿ ಅಧ್ಯಕ್ಷ ತೀರ್ಥಪ್ರಸಾದ್ ಮಾತನಾಡಿ, ಸುಮಾರು 30 ವರ್ಷಗಳಿಂದ ಸಂಘದಲ್ಲಿ ಚುನಾವಣೆ ನಡೆಯದೇ ಅವಿರೋಧವಾಗಿ ಆಯ್ಕೆಯಾಗುತ್ತಿದ್ದರು ಎಂದರು.ನಿರ್ದೇಶಕ ಮೋಹನ್ ಕುಮಾರ್ ಮಾತನಾಡಿ, ಚುನಾವಣೆಯಲ್ಲಿ ಮೊದಲ ಬಾರಿಗೆ ಗೆಲುವು ಸಾಧಿಸಿದ್ದು, ಎಲ್ಲಾ ನಿರ್ದೇಶಕರು ರಾಜಕೀಯ ಬೆರಸದೇ ಸಂಘದ ಅಭಿವೃದ್ಧಿಗೆ ಒತ್ತು ನೀಡುತ್ತೇವೆ ಎಂದರು.ನಿರ್ದೇಶಕರನ್ನು ಬಿಡಿಸಿಸಿ ಬ್ಯಾಂಕ್ ಮಾಜಿ ಉಪಾಧ್ಯಕ್ಷ ಮಾಚನಹಳ್ಳಿ ಜಯಣ್ಣ, ತಾ.ಪಂ.ಮಾಜಿ ಅಧ್ಯಕ್ಷ ಪುಟ್ಟಗಂಗಯ್ಯ, ಮಾಜಿ ಎಪಿಎಂಸಿ ನಿರ್ದೇಶಕ ಗಂಗಣ್ಣ, ತಾ.ಪಂ.ಮಾಜಿ ಸದಸ್ಯ ನಾಗಭೂಷಣ್, ಶ್ರೀನಿವಾಸ್ ಬಿ.ಎಂ.ಶ್ರೀನಿವಾಸ್, ಕರವೇ ಅಧ್ಯಕ್ಷ ವೀರಸಾಗರ ಮಂಜುನಾಥ್, ಬಿಜೆಪಿ ತಾಲ್ಲೂಕು ಅಧ್ಯಕ್ಷ ಜಗದೀಶ್ ಚೌಧರಿ, ವಿಎಸ್ ಎಸ್ ಎನ್ ಮಾಜಿ ಅಧ್ಯಕ್ಷರುಗಳಾದ ಅಲ್ಪಯ್ಯನಪಾಳ್ಯ ವೆಂಕಟೇಶ್, ಅಶೋಕ್, ಪರಮೇಶ್, ಗ್ರಾ.ಪಂ.ಉಪಾಧ್ಯಕ್ಷ ಬೈರೇಶ್, ಸಂಘದ ಸಿಇಒ ಭಾನುಪ್ರಕಾಶ್ ಅಭಿನಂದಿಸಿ ಶುಭಕೋರಿದರು.