ಸಾರಾಂಶ
ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಡಿಸಿಎಂ ಡಿ.ಕೆ. ಶಿವಕುಮಾರ ಅವರ ನೇತೃತ್ವದಲ್ಲಿ ಜಾರಿಗೆ ತಂದ ಗ್ಯಾರಂಟಿ ಯೋಜನೆಗಳನ್ನು ಜನರಿಗೆ ಸಮರ್ಪಕವಾಗಿ ತಲುಪಿಸುವ ಜತೆಗೆ ರಾಜ್ಯದ ಅಭಿವೃದ್ಧಿ ಮಾಡುತ್ತಿದ್ದೇವೆ.
ಕುಷ್ಟಗಿ:
ಬಿಜೆಪಿ ನಡೆಸುತ್ತಿರುವ ಜನಾಕ್ರೋಶ ಯಾತ್ರೆಯಿಂದ ನಮಗೇನು ನಷ್ಟ ಆಗುವುದಿಲ್ಲ. ಈಗಾಗಲೇ ರಾಜ್ಯದ ಜನರು ಆಕ್ರೋಶಗೊಂಡು ಅವರನ್ನು ಮನೆಗೆ ಕಳಿಸಿದ್ದಾರೆ ಎಂದು ಸಚಿವ ಶಿವರಾಜ ತಂಗಡಗಿ ಹೇಳಿದರು.ತಾಲೂಕಿನ ಕೊರಡಕೇರಾದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸರ್ಕಾರದ ಮೇಲೆ ಅವರ ಯಾತ್ರೆಯಿಂದ ಯಾವುದೇ ಪರಿಣಾಮ ಬೀರುವುದಿಲ್ಲ. ರಾಜ್ಯದ ಜನತೆ ನಮ್ಮ ಪರವಾಗಿದ್ದಾರೆ ಎಂದರು.
ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಡಿಸಿಎಂ ಡಿ.ಕೆ. ಶಿವಕುಮಾರ ಅವರ ನೇತೃತ್ವದಲ್ಲಿ ಜಾರಿಗೆ ತಂದ ಗ್ಯಾರಂಟಿ ಯೋಜನೆಗಳನ್ನು ಜನರಿಗೆ ಸಮರ್ಪಕವಾಗಿ ತಲುಪಿಸುವ ಜತೆಗೆ ರಾಜ್ಯದ ಅಭಿವೃದ್ಧಿ ಮಾಡುತ್ತಿದ್ದೇವೆ ಎಂದು ಹೇಳಿದರು.ಕಾಂತರಾಜು ವರದಿಯನ್ನು ಜಾತಿ ಗಣತಿಯೆಂದು ಬಿಂಬಿಸಬಾರದು. ಜಾತಿಗಣತಿ ಮಾಡುವುದು ಕೇಂದ್ರ ಸರ್ಕಾರ. ನಮ್ಮದು ಆರ್ಥಿಕ, ಶೈಕ್ಷಣಿಕ, ಸಾಮಾಜಿಕ ಸ್ಥಿತಿಗತಿಗಳನ್ನು ರಾಜ್ಯಕ್ಕೆ ತಿಳಿಸುವ ಸಲುವಾಗಿ ಮಾಡಿದ ಒಂದು ಸರ್ವೇ ಅಷ್ಟೇ. ಇದರಿಂದ ಬಡವರಿಗೆ ಹಾಗೂ ಹಿಂದುಳಿದ ಕುಟುಂಬಕ್ಕೆ ಸರ್ಕಾರದ ಯೋಜನೆ ತಲುಪಿಸಲು ಅನುಕೂಲವಾಗಲೆಂದು ಮಾಡುತ್ತಿರುವ ಸರ್ವೇಯಾಗಿದೆ ಎಂದು ಸ್ಪಷ್ಟಪಡಿಸಿದರು.