ಸಾರಾಂಶ
ಕನ್ನಡಪ್ರಭ ವಾರ್ತೆ ಮಡಿಕೇರಿ
ಜಿಲ್ಲೆಯ ಎಲ್ಲಾ ಭಾಗದಲ್ಲೂ ಎಸ್.ಸಿ ಮೋರ್ಚಾದ ಕಾರ್ಯಕರ್ತರನ್ನು ಸಂಘಟಿಸಿ ಪಕ್ಷದ ಬಲವರ್ಧನೆಗೆ ಕೈಜೋಡಿಸಬೇಕು ಎಂದು ಭಾರತೀಯ ಜನತಾ ಪಾರ್ಟಿ ಎಸ್‌ಸಿ ಮೋರ್ಚಾದ ಜಿಲ್ಲಾಧ್ಯಕ್ಷ ಪಿ.ಎಂ.ರವಿ ಮನವಿ ಮಾಡಿದ್ದಾರೆ.ನಗರದ ಪಕ್ಷದ ಜಿಲ್ಲಾ ಕಚೇರಿಯಲ್ಲಿ ಸೋಮವಾರ ನಡೆದ ಭಾರತೀಯ ಜನತಾ ಪಾರ್ಟಿ ಎಸ್.ಸಿ.ಮೋರ್ಚಾದ ಜಿಲ್ಲಾ, ನಗರಮಂಡಲ ಹಾಗೂ ಕಾರ್ಯಕರ್ತರ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿ, ಪರಿಶಿಷ್ಟ ಜಾತಿಯ ಸಮುದಾಯಕ್ಕೆ ಕೇಂದ್ರ ಸರ್ಕಾರದ ಯೋಜನೆಗಳ ಮಾಹಿತಿಯ ಕೊರತೆಯಿದ್ದು, ಯೋಜನೆಗಳ ಬಗ್ಗೆ ಹೆಚ್ಚು ಅರಿವು ಮೂಡಿಸುವ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗುವುದು. ಜತೆಗೆ ಜಿಲ್ಲೆಯ ಎಲ್ಲಾ ಭಾಗದಲ್ಲೂ ಎಸ್.ಸಿ ಮೋರ್ಚಾದ ಕಾರ್ಯಕರ್ತರನ್ನು ಸಂಘಟಿಸಿ ಪಕ್ಷದ ಬಲವರ್ಧನೆಗೆ ಕೈಜೋಡಿಸಬೇಕು ಎಂದು ಮನವಿ ಮಾಡಿದರು.
ಜಿಲ್ಲೆಯ ಜಿಲ್ಲಾ ಸಮಿತಿ ತಾಲೂಕು ಮಂಡಲ ಎಲ್ಲಾ ಸಮಿತಿಯನ್ನು ಬಲಿಷ್ಠಗೊಳಿಸಲು ಕ್ರಮ ಕೈಗೊಳ್ಳಲಾಗುವುದು. ನಿಷ್ಠಾವಂತ ಕಾರ್ಯಕರ್ತರನ್ನು ಪಕ್ಷವು ಗುರುತಿಸುತ್ತಿದ್ದು, ಬಿಜೆಪಿ ಪಕ್ಷದ ಕಾರ್ಯಕರ್ತರು ರಾಷ್ಟ್ರ ಮೊದಲು ಎಂಬ ಸಂದೇಶವನ್ನು ಅರಿತುಕೊಳ್ಳಬೇಕಿದೆ ಎಂದರು.ಭಾರತೀಯ ಜನತಾ ಪಾರ್ಟಿಯ ಎಸ್.ಸಿ ಮೋರ್ಚಾದ ರಾಜ್ಯ ಉಪಾಧ್ಯಕ್ಷ ಜಿ.ಶ್ರೀನಿವಾಸ್ ಮಾತನಾಡಿ, ಪಕ್ಷದ ಕಾರ್ಯಕರ್ತರು ಕಾರ್ಯಪ್ರವೃತ್ತರಾಗಬೇಕು. ಕಾಂಗ್ರೆಸ್ ಸರ್ಕಾರ ಮಾಡಿರುವ ಭ್ರಷ್ಟಾಚಾರದ ಬಗ್ಗೆ ಪ್ರತಿಭಟನೆ ಹೋರಾಟದಲ್ಲಿ ಎಸ್.ಸಿ ಮೋರ್ಚಾವು ಮುಂಚೂಣಿಯಲ್ಲಿ ನಿಲ್ಲಬೇಕೆಂದರು.
ಬೂತ್ ಮಟ್ಟದಲ್ಲಿ ಸಂಘಟನೆಯನ್ನು ಯಾವ ರೀತಿಯಲ್ಲಿ ಮಾಡಬೇಕು ಎಂಬುದರ ಬಗ್ಗೆ ಕಾರ್ಯಕರ್ತರಿಗೆ ಮಾಹಿತಿ ನೀಡಿದರು.ಎಸ್.ಸಿ ಮೋರ್ಚಾದ ವಿರಾಜಪೇಟೆ ಗ್ರಾಮಂತರ ಮಂಡಲ ಅಧ್ಯಕ್ಷ ಅಭಿಜಿತ್, ಜಿಲ್ಲಾ ಉಪಾಧ್ಯಕ್ಷರಾದ ರಾಮಕೃಷ್ಣ, ಪಿ.ಜಿ.ಗಣೇಶ್, ಮಡಿಕೇರಿ ನಗರ ಮಂಡಲ ಅಧ್ಯಕ್ಷ ಮುಕುಂದ ಸೇರಿದಂತೆ ಜಿಲ್ಲಾ, ಮಂಡಲ ಪಧಾದಿಕಾರಿಗಳು ಹಾಗೂ ಕಾರ್ಯಕರ್ತರು ಸಭೆಯಲ್ಲಿ ಪಾಲ್ಗೊಂಡಿದ್ದರು.