ಜಿಲ್ಲೆಯ ಸಮಗ್ರ ಅಭಿವೃದ್ಧಿಗೆ ಶ್ರಮಿಸಬೇಕು: ಡಿಸಿ

| Published : Sep 19 2025, 01:01 AM IST

ಜಿಲ್ಲೆಯ ಸಮಗ್ರ ಅಭಿವೃದ್ಧಿಗೆ ಶ್ರಮಿಸಬೇಕು: ಡಿಸಿ
Share this Article
  • FB
  • TW
  • Linkdin
  • Email

ಸಾರಾಂಶ

1947, ಆ. 15ರಂದು ಭಾರತಕ್ಕೆ ಸ್ವಾತಂತ್ರ‍್ಯ ದೊರೆಯಿತು. ಆದರೆ, ಈ ಭಾಗದಲ್ಲಿ ಆಡಳಿತ ನಡೆಸುತ್ತಿದ್ದ ಹೈದರಾಬಾದ್ ನಿಜಾಮರು ಸ್ವಾತಂತ್ರ್ಯ ನೀಡದೆ ಆಡಳಿತ ಮುಂದುವರಿಸಿದ್ದರಿಂದ ಈ ಭಾಗದ ಜನರು ಮತ್ತೊಂದು ಹೋರಾಟ ಮಾಡಬೇಕಾಯಿತು.

ಕೊಪ್ಪಳ:

ಜಿಲ್ಲೆಯ ಸಮಗ್ರ ಅಭಿವೃದ್ಧಿಗೆ ನಾವೆಲ್ಲರೂ ಪ್ರಾಮಾಣಿಕವಾಗಿ ಶ್ರಮಿಸಬೇಕಿದೆ ಎಂದು ಜಿಲ್ಲಾಧಿಕಾರಿ ಡಾ. ಸುರೇಶ್ ಬಿ. ಇಟ್ನಾಳ ಹೇಳಿದರು.

ಬುಧವಾರ ಜಿಲ್ಲಾಡಳಿತ ಭವನದ ಆವರಣದಲ್ಲಿ ನಡೆದ 78ನೇ ಕಲ್ಯಾಣ ಕರ್ನಾಟಕ ಉತ್ಸವ ದಿನಾಚರಣೆ ಕಾರ್ಯಕ್ರಮದಲ್ಲಿ ರಾಷ್ಟ್ರ ಧ್ವಜಾರೋಹಣ ನೆರವೇರಿಸಿ ಮಾತನಾಡಿದರು.

1947, ಆ. 15ರಂದು ಭಾರತಕ್ಕೆ ಸ್ವಾತಂತ್ರ‍್ಯ ದೊರೆಯಿತು. ಆದರೆ, ಈ ಭಾಗದಲ್ಲಿ ಆಡಳಿತ ನಡೆಸುತ್ತಿದ್ದ ಹೈದರಾಬಾದ್ ನಿಜಾಮರು ಸ್ವಾತಂತ್ರ್ಯ ನೀಡದೆ ಆಡಳಿತ ಮುಂದುವರಿಸಿದ್ದರಿಂದ ಈ ಭಾಗದ ಜನರು ಮತ್ತೊಂದು ಹೋರಾಟ ಮಾಡಬೇಕಾಯಿತು ಎಂದರು.

ಕಲ್ಯಾಣ ಕರ್ನಾಟಕ ಭಾಗದ ಜನರಿಗೆ ವಾಕ್ ಸ್ವಾತಂತ್ರ‍್ಯ, ಸಂಘಟನಾ ಸ್ವಾತಂತ್ರ‍್ಯ, ಪತ್ರಿಕಾ ಸ್ವಾತಂತ್ರ‍್ಯ ಸಿಕ್ಕಿತು. ಆದರೂ ಸಹ ನಿಜಾಮರ ಆಡಳಿತದ ಫಲವಾಗಿ ಮಾನವ ಅಭಿವೃದ್ಧಿ ಸೂಚ್ಯಾಂಕ, ಶೈಕ್ಷಣಿಕ ಮಟ್ಟ, ಆರೋಗ್ಯ ಮತ್ತು ಮೂಲಭೂತ ಸೌಕರ್ಯಗಳಿಂದ ಹಿಂದುಳಿದಿದ್ದೇವೆ. ಇವುಗಳಿಂದ ಹೊರಬರುವ ನಿಟ್ಟಿನಲ್ಲಿ ಈ ಭಾಗವನ್ನು 371-ಜೆ ವ್ಯಾಪ್ತಿಗೆ ತರಲಾಗಿದೆ. ಕಲ್ಯಾಣ ಕರ್ನಾಟಕ ಪ್ರದೇಶಾಭಿವೃದ್ಧಿ ಮಂಡಳಿ ರಚನೆಯಿಂದ ಈ ಭಾಗದ ಮೂಲಭೂತ ಸೌಕರ್ಯ ಹಾಗೂ ಮಾನವ ಅಭಿವೃದ್ಧಿ ಸೂಚ್ಯಾಂಕವನ್ನು ಉತ್ತಮಗೊಳಿಸುವ ನಿಟ್ಟಿನಲ್ಲಿ ಹಲವು ಕಾರ್ಯಕ್ರಮ ರೂಪಿಸಲಾಗುತ್ತಿದೆ ಎಂದರು.

ಈ ವೇಳೆ ಜಿಪಂ ಸಿಇಒ ವರ್ಣಿತ್ ನೇಗಿ, ಅಪರ ಜಿಲ್ಲಾಧಿಕಾರಿ ಸಿದ್ರಾಮೇಶ್ವರ, ಜಿಪಂ ಉಪ ಕಾರ್ಯದರ್ಶಿ ಟಿ. ಕೃಷ್ಣಮೂರ್ತಿ, ಕೃಷಿ ಇಲಾಖೆ ಜಂಟಿ ನಿರ್ದೇಶಕ ರುದ್ರೇಶಪ್ಪ ಟಿ.ಎಸ್., ಜಿಲ್ಲಾ ನಗರಾಭಿವೃದ್ಧಿ ಕೋಶದ ಯೋಜನಾ ನಿರ್ದೇಶಕ ಮಂಜುನಾಥ ಗುಂಡೂರು, ಭೂದಾಖಲೆ ಇಲಾಖೆಯ ಉಪನಿರ್ದೇಶಕಿ ಭಾಗ್ಯಮ್ಮ ಬಿ., ಜಿಲ್ಲಾ ಹಿಂದುಳಿದ ವರ್ಗಗಳ ಕಲ್ಯಾಣ ಅಧಿಕಾರಿ ನಾಗಮಣಿ, ಡಿಡಿಪಿಯು ಜಗದೀಶ್ ಸೇರಿದಂತೆ ಜಿಲ್ಲಾಮಟ್ಟದ ವಿವಿಧ ಇಲಾಖೆಯ ಅಧಿಕಾರಿ ಮತ್ತು ಸಿಬ್ಬಂದಿ ಉಪಸ್ಥಿತರಿದ್ದರು.