ಅನರ್ಹರ ಬಿಪಿಎಲ್‌ ಕಾರ್ಡ್‌ ರದ್ದು ಮಾಡುತ್ತೇವೆ : ಮುಖ್ಯಮಂತ್ರಿ ಸಿದ್ದರಾಮಯ್ಯ ಸ್ಪಷ್ಟ

| Published : Nov 18 2024, 12:07 AM IST / Updated: Nov 18 2024, 07:29 AM IST

ಅನರ್ಹರ ಬಿಪಿಎಲ್‌ ಕಾರ್ಡ್‌ ರದ್ದು ಮಾಡುತ್ತೇವೆ : ಮುಖ್ಯಮಂತ್ರಿ ಸಿದ್ದರಾಮಯ್ಯ ಸ್ಪಷ್ಟ
Share this Article
  • FB
  • TW
  • Linkdin
  • Email

ಸಾರಾಂಶ

ಅನರ್ಹರ ಬಿಪಿಎಲ್ ಕಾರ್ಡ್‌ಗಳನ್ನು ಮಾತ್ರ ರದ್ದು ಮಾಡಲಾಗುತ್ತಿದೆ. ಅರ್ಹರ ಕಾರ್ಡ್‌ಗಳಿಗೆ ಯಾವುದೇ ತೊಂದರೆ ಇಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಸ್ಪಷ್ಟಪಡಿಸಿದ್ದಾರೆ.

  ಬಾಗಲಕೋಟೆ : ಅನರ್ಹರ ಬಿಪಿಎಲ್ ಕಾರ್ಡ್‌ಗಳನ್ನು ಮಾತ್ರ ರದ್ದು ಮಾಡಲಾಗುತ್ತಿದೆ. ಅರ್ಹರ ಕಾರ್ಡ್‌ಗಳಿಗೆ ಯಾವುದೇ ತೊಂದರೆ ಇಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಸ್ಪಷ್ಟಪಡಿಸಿದ್ದಾರೆ.

ಬಾಗಲಕೋಟೆಯಲ್ಲಿ ಭಾನುವಾರ ಸುದ್ದಿಗಾರರೊಂದಿಗೆ ಅವರು ಮಾತನಾಡಿದರು. ಬಿಪಿಎಲ್ ಕಾರ್ಡ್‌ಗಳು ರದ್ದಾಗುತ್ತಿವೆ ಎಂಬ ವರದಿಗಳಿವೆಯಲ್ಲ ಎಂಬ ಮಾಧ್ಯಮದವರ ಪ್ರಶ್ನೆಗೆ ಪ್ರತಿಕ್ರಿಯಿಸಿ, ಬಿಪಿಎಲ್ ಕಾರ್ಡ್‌ಗಳು ರದ್ದಾಗುತ್ತಿವೆ ಎನ್ನುವ ಪ್ರಶ್ನೆಯೇ ಪೂರ್ತಿ ತಪ್ಪು. ಅನರ್ಹರ ಕಾರ್ಡ್‌ಗಳನ್ನು ವಾಪಸ್ ಪಡೆಯುವ ಆಲೋಚನೆ ಮಾತ್ರ ನಮ್ಮದು. 

ಈ ಬಗ್ಗೆ ಆಹಾರ ಇಲಾಖೆ ಪರಿಶೀಲನೆ ನಡೆಸುತ್ತಿದೆ. ಈ ಬಗ್ಗೆ ಇನ್ನೂ ಅಂತಿಮ ತೀರ್ಮಾನವಾಗಿಲ್ಲ. ಅನರ್ಹರಿಗೆ ಕೊಡಲ್ಲ, ಅರ್ಹರಿಗೆ ತಪ್ಪಿಸಲ್ಲ ಎಂದು ಸ್ಪಷ್ಟಪಡಿಸಿದರು.ಆದಾಯ ತೆರಿಗೆ ಪಾವತಿಸುವವರು, ಸರ್ಕಾರಿ ನೌಕರರಿಗೂ ಬಿಪಿಎಲ್ ಕಾರ್ಡ್‌ ಕೊಡಬೇಕಾ ಎಂದು ಪ್ರಶ್ನಿಸಿದ ಸಿಎಂ, ಅರ್ಹರು ವಂಚಿತರಾಗಬಾರದು, ಅನರ್ಹರಿಂದ ದುರುಪಯೋಗಬಾರದು ಎನ್ನುವುದಷ್ಟೇ ನಮ್ಮ ಕಾಳಜಿ ಎಂದು ತಿಳಿಸಿದರು.