ಜನರ ಅಭಿಪ್ರಾಯ ಸಂಗ್ರಹಿಸಿ ಅಭ್ಯರ್ಥಿಗಳ ಆಯ್ಕೆ ಮಾಡುತ್ತೇವೆ: ಸಚಿವ ದಿನೇಶ್ ಗುಂಡೂರಾವ್

| Published : Jun 23 2024, 02:05 AM IST

ಜನರ ಅಭಿಪ್ರಾಯ ಸಂಗ್ರಹಿಸಿ ಅಭ್ಯರ್ಥಿಗಳ ಆಯ್ಕೆ ಮಾಡುತ್ತೇವೆ: ಸಚಿವ ದಿನೇಶ್ ಗುಂಡೂರಾವ್
Share this Article
  • FB
  • TW
  • Linkdin
  • Email

ಸಾರಾಂಶ

ಚುನಾವಣೆ ಬಂದಾಗ ತಂತ್ರಗಾರಿಕೆ ಸಾಮಾನ್ಯ. ಉಪ ಚುನಾವಣೆಗೆ ತಂತ್ರಗಾರಿಕೆ ಮಾಡುತ್ತೇವೆ. ಎಲ್ಲೆಲ್ಲಿ ಬೈ ಎಲೆಕ್ಷನ್ ನಡೆಯುತ್ತಿದೆಯೋ ಅಲ್ಲಿಗೆ ಉಸ್ತುವಾರಿಗಳನ್ನು ನೇಮಕ ಮಾಡಲಾಗಿದೆ. ಅವರು ಕ್ಷೇತ್ರದ ಮತದಾರರ ಅಭಿಪ್ರಾಯ ಸಂಗ್ರಹ ಮಾಡುತ್ತಾರೆ.

ಕನ್ನಡಪ್ರಭ ವಾರ್ತೆ ಮೈಸೂರು

ರಾಜ್ಯದ ಉಪ ಚುನಾವಣೆ ಮೂರು ಕ್ಷೇತ್ರಗಳಲ್ಲಿ ನಡೆಯುತ್ತಿದೆ. ಮೂರು ಕ್ಷೇತ್ರಗಳನ್ನೂ ಗೆಲ್ಲಲೇಬೇಕೆಂಬುದು ನಮ್ಮ ಗುರಿಯಾಗಿದೆ. ಗೆಲ್ಲುವ ಅಭ್ಯರ್ಥಿಗಳು ಯಾರು ಎಂಬುದು ಇಲ್ಲಿ ಮುಖ್ಯವಲ್ಲ. ಜನರ ಅಭಿಪ್ರಾಯ ಸಂಗ್ರಹಿಸಿ ಅಭ್ಯರ್ಥಿಗಳನ್ನು ಆಯ್ಕೆ ಮಾಡುತ್ತೇವೆ ಎಂದು ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ತಿಳಿಸಿದರು.

ಶನಿವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಚುನಾವಣೆ ಬಂದಾಗ ತಂತ್ರಗಾರಿಕೆ ಸಾಮಾನ್ಯ. ಉಪ ಚುನಾವಣೆಗೆ ತಂತ್ರಗಾರಿಕೆ ಮಾಡುತ್ತೇವೆ. ಎಲ್ಲೆಲ್ಲಿ ಬೈ ಎಲೆಕ್ಷನ್ ನಡೆಯುತ್ತಿದೆಯೋ ಅಲ್ಲಿಗೆ ಉಸ್ತುವಾರಿಗಳನ್ನು ನೇಮಕ ಮಾಡಲಾಗಿದೆ. ಅವರು ಕ್ಷೇತ್ರದ ಮತದಾರರ ಅಭಿಪ್ರಾಯ ಸಂಗ್ರಹ ಮಾಡುತ್ತಾರೆ ಎಂದು ಹೇಳಿದರು.

ಡಿ.ಕೆ.ಶಿವಕುಮಾರ್‌ಗೆ ಈಗ ಚನ್ನಪಟ್ಟಣ ನೆನಪಾಯಿತಾ? ಎಂಬ ಎಚ್.ಡಿ. ಕುಮಾರಸ್ವಾಮಿ ಹೇಳಿಕೆಗೆ ಪ್ರತಿಕ್ರಿಯಿಸಿದ ಅವರು, ಬೆಂಗಳೂರು ಗ್ರಾಮಾಂತರ ಕ್ಷೇತ್ರದಲ್ಲಿ ಡಿ.ಕೆ. ಸುರೇಶ್ ಸಂಸದರಾಗಿದ್ದರು. ಬೆಂಗಳೂರು ಗ್ರಾಮಾಂತರ ಕ್ಷೇತ್ರವನ್ನು ತುಂಬಾ ಚೆನ್ನಾಗಿ ಅಭಿವೃದ್ಧಿ ಮಾಡಿದ್ದಾರೆ. ಕುಮಾರಸ್ವಾಮಿ ಆರೋಪಗಳಿಗೆ, ಟೀಕೆಗಳಿಗೆ ಪ್ರತಿಕ್ರಿಯೆ ನೀಡೋದಿಲ್ಲ ಎಂದರು.

ಎಂಎಲ್ಸಿ ಸೂರಜ್ ರೇವಣ್ಣ ವಿರುದ್ಧ ಲೈಂಗಿಕ ದೌರ್ಜನ್ಯ ಪ್ರಕರಣ ದಾಖಲು ವಿಚಾರಕ್ಕೆ ಪ್ರತಿಕ್ರಿಯಿಸಿದ ಅವರು, ನಾನು ಪತ್ರಿಕೆಯಲ್ಲಿ ಬಂದಿರುವ ಸುದ್ದಿ ನೋಡಿದ್ದೇನೆ. ಯಾರೋ ಹೋಗಿ ದೂರು ಕೊಟ್ಟಿದ್ದಾರಂತೆ. ಪತ್ರಿಕೆ ಸುದ್ದಿ ನೋಡಿ ಪ್ರತಿಕ್ರಿಯೆ ಕೊಡಲಾಗುತ್ತಾ? ಕಾನೂನು ಇದೆ, ಅದರ ಪ್ರಕಾರ ಶಿಕ್ಷೆ ಆಗುತ್ತದೆ ಎಂದು ಹೇಳಿದರು.ಈಗ ಮಳೆಗಾಲ ಆಗಿರುವುದರಿಂದ ಡೆಂಘೀ ಪ್ರಕರಣಗಳು ಹೆಚ್ಚುತ್ತಿವೆ: ದಿನೇಶ್ ಗುಂಡೂರಾವ್ಮೈಸೂರು: ಈಗ ಮಳೆಗಾಲ ಆಗಿರುವುದರಿಂದ ಡೆಂಘೀ ಪ್ರಕರಣಗಳು ಹೆಚ್ಚುತ್ತಿವೆ. ಚಿಕ್ಕಮಗಳೂರು ಸೇರಿದಂತೆ ಕೆಲವು ಜಿಲ್ಲೆಗಳಲ್ಲಿ ಡೆಂಘೀ ಪ್ರಕರಣಗಳು ವರದಿಯಾಗಿವೆ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವ ದಿನೇಶ್ ಗುಂಡೂರಾವ್ ತಿಳಿಸಿದರು.ಮೈಸೂರಿನಲ್ಲಿ ಶನಿವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಡೆಂಘೀ ಪೀಡಿತರ ಸಾವಿನ ಪ್ರಮಾಣ ಕಡಿಮೆಯಿದೆ. ಡೆಂಘೀ ನಿಯಂತ್ರಣಕ್ಕೆ ಮುಂಜಾಗ್ರತಾ ಕ್ರಮಗಳನ್ನು ಕೈಗೊಳ್ಳಲಾಗಿದೆ. ಜನರು ಕೂಡ ಈ ಬಗ್ಗೆ ಮುನ್ನೆಚ್ಚರಿಕೆ ವಹಿಸಬೇಕು ಎಂದರು. ಸೊಳ್ಳೆಗಳ ಮೂಲಕ ಡೆಂಘೀ ಹರಡುತ್ತಿದೆ. ನೀರು ನಿಂತರೆ ಸೊಳ್ಳೆಗಳು ಹೆಚ್ಚಾಗುತ್ತವೆ. ಹೀಗಾಗಿ, ಮನೆಗಳ ಮುಂದೆ ನೀರು ನಿಲ್ಲದಂತೆ ಜನರು ನೋಡಿಕೊಳ್ಳಬೇಕು. ಸೊಳ್ಳೆಗಳು ಉತ್ಪತ್ತಿಯಾಗದಂತೆ ನಿಗಾ ವಹಿಸಬೇಕು ಎಂದು ಅವರು ಹೇಳಿದರು.