ಪಿಯು ವಿದ್ಯಾರ್ಥಿಗಳಿಗೆ ಸಿಇಟಿ ಪರೀಕ್ಷೆಯ ಅರ್ಜಿಗಳನ್ನು ತುಂಬುವಲ್ಲಿ ಆಗುತ್ತಿರುವ ತೊಂದರೆಗಳನ್ನು ನಿವಾರಿಸಿ ಅವರಿಗೆ ಮಾರ್ಗದರ್ಶನ ಮಾಡುವ ಕಾರ್ಯವನ್ನು ಉಪನ್ಯಾಸಕರು ಮಾಡಬೇಕು ಎಂದು ಪ್ರಭಾರಿ ಪ್ರಾಚಾರ್ಯ ಮಂಜುನಾಥ ಕೊಕ್ಕರಗುಂದಿ ಹೇಳಿದರು.

ಲಕ್ಷ್ಮೇಶ್ವರ: ಪಿಯು ವಿದ್ಯಾರ್ಥಿಗಳಿಗೆ ಸಿಇಟಿ ಪರೀಕ್ಷೆಯ ಅರ್ಜಿಗಳನ್ನು ತುಂಬುವಲ್ಲಿ ಆಗುತ್ತಿರುವ ತೊಂದರೆಗಳನ್ನು ನಿವಾರಿಸಿ ಅವರಿಗೆ ಮಾರ್ಗದರ್ಶನ ಮಾಡುವ ಕಾರ್ಯವನ್ನು ಉಪನ್ಯಾಸಕರು ಮಾಡಬೇಕು ಎಂದು ಪ್ರಭಾರಿ ಪ್ರಾಚಾರ್ಯ ಮಂಜುನಾಥ ಕೊಕ್ಕರಗುಂದಿ ಹೇಳಿದರು. 

ಪಟ್ಟಣದ ಅಂದಾನೆಪ್ಪ ಮಾನ್ವಿ ಸರ್ಕಾರಿ ಪಿಯು ಕಾಲೇಜಿನಲ್ಲಿ ಶುಕ್ರವಾರ ಕರ್ನಾಟಕ ಪರೀಕ್ಷಾ ಪ್ರಾಧೀಕಾರ ಹಾಗೂ ಶಾಲಾ ಶಿಕ್ಷಣ ಇಲಾಖೆಗಳ ಸಹಯೋಗದಲ್ಲಿ ಪಿಯು ವಿದ್ಯಾರ್ಥಿಗಳಿಗೆ ಸಿಇಟಿ ವಿದ್ಯಾರ್ಥಿ ಮಿತ್ರ ಕಾರ್ಯಾಗಾರವನ್ನು ಉದ್ಘಾಟಿಸಿ ಮಾತನಾಡಿದರು. 

ಪಿಯು ಕಾಲೇಜಿನಲ್ಲಿ ವಿಜ್ಞಾನ ವಿಷಯ ಅಭ್ಯಾಸ ಮಾಡುತ್ತಿರುವ ವಿದ್ಯಾರ್ಥಿಗಳಿಗೆ ಸಿಇಟಿ ಪರೀಕ್ಷಾ ಅರ್ಜಿ ತುಂಬುವಲ್ಲಿ ಸಾಕಷ್ಟು ತೊಂದರೆ ಎದುರಿಸುತ್ತಿದ್ದು ಅಂತಹ ವಿದ್ಯಾರ್ಥಿಗಳಿಗೆ ಮಾರ್ಗದರ್ಶನ ನೀಡುವ ಮೂಲಕ ಅವರಲ್ಲಿದ್ದ ಭಯ ನಿವಾರಣೆ ಮಾಡಿ ಅವರಿಗೆ ಎಲ್ಲ ರೀತಿ ಸಹಾಯ ಸಹಕಾರ ನೀಡುವ ಕಾರ್ಯ ಮಾಡುವುದು ಈ ಕಾರ್ಯಾಗಾರದ ಉದ್ದೇಶವಾಗಿದ್ದು ವಿದ್ಯಾರ್ಥಿಗಳು ಇದರ ಸದುಪಯೋಗ ಪಡಿಸಿಕೊಳ್ಳಬೇಕು ಎಂದು ಹೇಳಿದರು.

 ಈ ವೇಳೆ ಉಪನ್ಯಾಸಕ ರಮೇಶ ಹಳೆರಿತ್ತಿ ಮಾತನಾಡಿ, ವಿದ್ಯಾರ್ಥಿಗಳು ಸಿಇಟಿ ಆನ್‌ಲೈನ್ ಅರ್ಜಿ ತುಂಬುವ ವೇಳೆ ವಿಜ್ಞಾನ ಶಿಕ್ಷಕರು ಸಹಾಯ ಮಾಡಿ ಅವರಿಗೆ ಮಾರ್ಗದರ್ಶನ ನೀಡಬೇಕು ಎಂದು ಹೇಳಿದರು. ಕಾರ್ಯಕ್ರಮದ ಸಂಪನ್ಮೂಲ ವ್ಯಕ್ತಿ ಭಾಗ್ಯಲಕ್ಷ್ಮೀ ಜೆ ಅವರು ವಿದ್ಯಾರ್ಥಿಗಳು ಸಿಇಟಿ ಅರ್ಜಿ ತುಂಬುವ ವಿಧಾನದ ಕುರಿತು ಸವಿಸ್ತಾರವಾಗಿ ವಿವರಿಸಿದರು. 

ಈ ವೇಳೆ ಲಕ್ಷ್ಮೇಶ್ವರ ಹಾಗೂ ಶಿರಹಟ್ಟಿ ತಾಲೂಕಿನ ವಿಜ್ಞಾನ ಉಪನ್ಯಾಸಕರು ಇದ್ದರು.ಆರ್.ಎಂ. ಬಡಿಗೇರ ಸ್ವಾಗತಿಸಿದರು. ನಾಗಪ್ಪ ಸಾತಪೂತೆ ಕಾರ್ಯಕ್ರಮ ನಿರೂಪಿಸಿದರು. ವಿನಾಯಕ ವೇತಾಳ ವಂದಿಸಿದರು.