ಸಾರಾಂಶ
ಸತತವಾಗಿ ನನಗೆ ಮೂರು ಚುನಾವಣೆಯಲ್ಲಿ ನಿಮ್ಮ ಅಮೂಲ್ಯವಾದ ಮತವನ್ನು ನೀಡಿ, ನನಗೆ ಆಶಿರ್ವಾದ ಮಾಡಿದ್ದೀರಿ. ಅದಕ್ಕೆ ಅಭಿವೃದ್ಧಿ ಮೂಲಕ ಋಣ ತೀರಿಸುವೆ ನಮ್ಮ ಕೊಪ್ಪಳ ಕ್ಷೇತ್ರವನ್ನು ರಾಜ್ಯದಲ್ಲಿಯೇ ಮಾದರಿ ಕ್ಷೇತ್ರವನ್ನಾಗಿ ನಿರ್ಮಾಣ ಮಾಡುತ್ತೇನೆ ಎಂದು ಶಾಸಕ ರಾಘವೇಂದ್ರ ಹಿಟ್ನಾಳ ಹೇಳಿದ್ದಾರೆ.
ಕೊಪ್ಪಳ: ಕ್ಷೇತ್ರದ ಅಭಿವೃದ್ಧಿಯೇ ನನ್ನ ಮುಖ್ಯಧ್ಯೇಯವಾಗಿದೆ. ಈ ಮೂಲಕ ಮತದಾರರ ಋಣ ತೀರಿಸುವ ಕೆಲಸ ಮಾಡುತ್ತೇನೆ ಎಂದು ಶಾಸಕ ರಾಘವೇಂದ್ರ ಹಿಟ್ನಾಳ ಹೇಳಿದ್ದಾರೆ.ಅಳವಂಡಿ ಜಿಪಂ ವ್ಯಾಪ್ತಿಯ ನೀರಲಗಿ, ಮತ್ತೂರು, ತಿಗರಿ, ಹನಕುಂಟಿ, ಬೋಚನಹಳ್ಳಿ, ಬೈರಾಪುರ, ಬೆಟಗೇರಿ, ಮೊರನಾಳ ಗ್ರಾಮಗಳಲ್ಲಿ ಅಂದಾಜು ಮೊತ್ತ ₹9.94 ಕೋಟಿ ಮೊತ್ತದಲ್ಲಿ ಸಿಸಿ ರಸ್ತೆ ಚರಂಡಿ ನಿರ್ಮಾಣ, ಶಾಲಾ ಕೊಠಡಿಗಳ ನಿರ್ಮಾಣ ಹಾಗೂ ಸ್ಮಾರ್ಟ್ ಕ್ಲಾಸ್ ನಿರ್ಮಾಣದ ಕಾಮಗಾರಿಗೆ ಅಡಿಗಲ್ಲು ನೆರವೇರಿಸಿ ಮಾತನಾಡಿದರು.
ಸತತವಾಗಿ ನನಗೆ ಮೂರು ಚುನಾವಣೆಯಲ್ಲಿ ನಿಮ್ಮ ಅಮೂಲ್ಯವಾದ ಮತವನ್ನು ನೀಡಿ, ನನಗೆ ಆಶಿರ್ವಾದ ಮಾಡಿದ್ದೀರಿ. ಅದಕ್ಕೆ ಅಭಿವೃದ್ಧಿ ಮೂಲಕ ಋಣ ತೀರಿಸುವ ಪ್ರಾಮಾಣಿಕ ಕೆಲಸ ಮಾಡಿ ನಮ್ಮ ಕೊಪ್ಪಳ ಕ್ಷೇತ್ರವನ್ನು ರಾಜ್ಯದಲ್ಲಿಯೇ ಮಾದರಿ ಕ್ಷೇತ್ರವನ್ನಾಗಿ ನಿರ್ಮಾಣ ಮಾಡುತ್ತೇನೆ ಎಂದರು.
ಕಲ್ಯಾಣ ಕರ್ನಾಟಕ ಪ್ರದೇಶಾಭಿವೃದ್ಧಿ ಯೋಜನೆಯಡಿ ಕ್ಷೇತ್ರಕ್ಕೆ ₹90 ಕೋಟಿ ಅನುದಾನ ಮಂಜೂರು ಆಗಿದೆ. ಕ್ಷೇತ್ರದ ಪ್ರತಿ ಗ್ರಾಮಕ್ಕೂ ಸರಿ ಸಮನಾಗಿ ಅನುದಾನ ಹಂಚಿಕೆ ಮಾಡಿ ರಸ್ತೆಗಳ ಅಭಿವೃದ್ಧಿ, ಚರಂಡಿ ನಿರ್ಮಾಣ, ಶಾಲಾ ಕೊಠಡಿಗಳ ಅಭಿವೃದ್ಧಿ ಹಾಗೂ ಸ್ಮಾರ್ಟ್ ಕ್ಲಾಸ್ ನಿರ್ಮಾಣದ ಕಾಮಗಾರಿಗಳನ್ನು ಈ ಅನುದಾನದಲ್ಲಿ ಕೈಗೆತ್ತಿಕೊಂಡಿದ್ದೇವೆ ಎಂದರು.
ಈ ಸಂದರ್ಭದಲ್ಲಿ ಜಿಪಂ ಮಾಜಿ ಅಧ್ಯಕ್ಷ ಎಸ್.ಬಿ. ನಾಗರಳ್ಳಿ, ಭರಮಪ್ಪ ಹಟ್ಟಿ, ಹನುಮಗೌಡ ಹಂಗನಕಟ್ಟಿ, ಗ್ರಾಮೀಣ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಕೃಷ್ಣರಡ್ಡಿ ಗಲಬಿ, ಎಸ್.ಸಿ ಘಟಕದ ಜಿಲ್ಲಾ ಅಧ್ಯಕ್ಷ ಗಾಳೆಪ್ಪ ಪೂಜಾರ್, ಮುಖಂಡರಾದ ಬಾಲಚಂದ್ರನ್ ಮುನಿರಾಬಾದ್, ವೆಂಕನಗೌಡ್ರು ಹಿರೇಗೌಡ್ರು, ಭೀಮಣ್ಣ ಬೋಚನಹಳ್ಳಿ, ತೋಟಪ್ಪ ಸಿಂಟ್ರ, ಬಸಣ್ಣ ನೀರಲಗಿ, ಕನಕರಾಜ ಹನಕುಂಟಿ, ಗವಿಸಿದ್ದನಗೌಡ ಮುದ್ದಾಬಳ್ಳಿ, ಶಿವಣ್ಣ ಮೋರನಾಳ, ಕಾವೇರಿ ಭಾಗ್ಯನಗರ, ಪದ್ಮಾವತಿ ಕಂಬಳಿ, ಪರಶುರಾಮ್ ಕೆರೆಹಳ್ಳಿ, ತಹಸೀಲ್ದಾರ್ ವಿಠ್ಠಲ್ ಚೌಗಲೇ, ತಾಪಂ ಇಒ ಡುಂದೇಶ ತುರಾದಿ, ನಗರಸಭೆ ಸ್ಥಾಯಿ ಸಮಿತಿ ಅಧ್ಯಕ್ಷ ಅಕ್ಬರ್ ಪಲ್ಟಾನ ಸೇರಿದಂತೆ ಹಲವರು ಉಪಸ್ಥಿತರಿದ್ದರು.