ಫಯಾಜ್‌ ಜೈಲಿಂದ ಹೊರಬಂದಲ್ಲಿ ನಾವೇ ಶಿಕ್ಷಿಸುತ್ತೇವೆ

| Published : Apr 24 2024, 02:19 AM IST

ಫಯಾಜ್‌ ಜೈಲಿಂದ ಹೊರಬಂದಲ್ಲಿ ನಾವೇ ಶಿಕ್ಷಿಸುತ್ತೇವೆ
Share this Article
  • FB
  • TW
  • Linkdin
  • Email

ಸಾರಾಂಶ

ಲವ್ ಜಿಹಾದ್ ನಿಯಂತ್ರಿಸಲು ಶ್ರೀರಾಮಸೇನೆ ವಿಶೇಷ ತಂಡ ರಚಿಸಿ, ಪ್ರತಿಯೊಂದು ಕಾಲೇಜಿನ ಕ್ಲಾಸ್ ರೂಮ್‌ನಲ್ಲಿ ತಂಡದ ಸದಸ್ಯರು ಇರುವಂತೆ ಮಾಡಲಿದೆ.

ಹುಬ್ಬಳ್ಳಿ:

ನೇಹಾ ಕೊಲೆ ಪ್ರಕರಣದ ಆರೋಪಿ ಫಯಾಜ್ ಸಿಐಡಿ ತನಿಖೆಯಿಂದ ನಿರ್ದೋಷಿ ಎಂದು ಹೊರಬಂದಲ್ಲಿ ಅವನಿಗೆ ನಾವೇ ತಕ್ಕ ಶಿಕ್ಷೆ ವಿಧಿಸುತ್ತೇವೆ. ಈ ಶಿಕ್ಷೆ ಹೇಗಿರಲಿದೆ ಎಂದರೆ ಇಂತಹ ಕೃತ್ಯಕ್ಕೆ ಕೈಹಾಕುವವರಿಗೆ ಭಯಹುಟ್ಟಿಸಲಿದೆ ಎಂದು ಶ್ರೀರಾಮಸೇನೆ ರಾಷ್ಟ್ರೀಯ ಅಧ್ಯಕ್ಷ ಪ್ರಮೋದ ಮುತಾಲಿಕ್ ಹೇಳಿದರು.

ನೇಹಾಳ ನಿವಾಸಕ್ಕೆ ಮಂಗಳವಾರ ಭೇಟಿ ನೀಡಿ ಸಾಂತ್ವನ ಹೇಳಿದ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಪ್ರಕರಣದ ತನಿಖೆ ಸಿಐಡಿಗೆ ಒಪ್ಪಿಸಿರುವುದು ಸ್ವಾಗತಾರ್ಹ. ಆದರೆ, ರಾಜ್ಯ ಸರ್ಕಾರ ಒತ್ತಡ ಹೇರಿ ತನಿಖೆಯ ದಿಕ್ಕು ತಪ್ಪಿಸಿದರೆ ಅದಕ್ಕೆ ತಕ್ಕ ಪಾಠ ಅನುಭವಿಸಬೇಕಾಗುತ್ತದೆ. ಆರೋಪಿಗೆ ಸೂಕ್ತ ಶಿಕ್ಷೆ ಆಗಲೇ ಬೇಕು. ಒಂದು ವೇಳೆ ನಿರ್ದೋಷಿಯಾಗಿ ಹೊರ ಬಂದಲ್ಲಿ ನಾವೇ ಅವನನ್ನು ಹಿಡಿದು ಶಿಕ್ಷೆ ವಿಧಿಸಿ ಜೈಲಿಗೆ ಹೋಗಲು ಸಿದ್ಧರಿರುವುದಾಗಿ ಎಚ್ಚರಿಕೆ ನೀಡಿದರು.

ವಿಶೇಷ ತಂಡ ರಚನೆ:

ಲವ್ ಜಿಹಾದ್ ನಿಯಂತ್ರಿಸಲು ಶ್ರೀರಾಮಸೇನೆ ವಿಶೇಷ ತಂಡ ರಚಿಸಿ, ಪ್ರತಿಯೊಂದು ಕಾಲೇಜಿನ ಕ್ಲಾಸ್ ರೂಮ್‌ನಲ್ಲಿ ತಂಡದ ಸದಸ್ಯರು ಇರುವಂತೆ ಮಾಡಲಿದೆ. ಒಂದು ವಾರದಲ್ಲಿ ಸಹಾಯವಾಣಿ ಆರಂಭಿಸಲಾಗುತ್ತಿದೆ. ಮಹಿಳೆಯರಿಗೆ ವಿಶೇಷ ತರಬೇತಿಯನ್ನು ಸಹ ನೀಡಲಿದೆ ಎಂದರು. ಫತ್ವಾ ಹೊರಡಿಸಲಿ

ನೇಹಾ ಕೊಲೆ ಪ್ರಕರಣ ಕಾಂಗ್ರೆಸ್‌ಗೆ ವ್ಯತಿರಿಕ್ತ ಪರಿಣಾಮ ಉಂಟು ಮಾಡುತ್ತಿದ್ದು, ಇದನ್ನು ಸರಿಪಡಿಸಲು ಮುಸಲ್ಮಾನರಿಂದ ಸಾಂತ್ವನ, ಪ್ರತಿಭಟನೆ ಮಾಡಿಸಲಾಗುತ್ತಿದೆ. ಅಂಜುಮನ್ ಸಂಸ್ಥೆಯವರಿಗೆ ಅಷ್ಟೊಂದು ಕಳಕಳಿಯಿದ್ದರೆ, ಫಯಾಜ್ ಕುಟುಂಬಕ್ಕೆ ಬಹಿಷ್ಕಾರ ಹಾಕಬೇಕಿತ್ತು. ಈಗಲೂ ಕಾಲ ಮಿಂಚಿಲ್ಲ, ಹಿಂದೂ ಹುಡುಗಿಯರನ್ನು ಪ್ರೀತಿಸಿದರೆ ಬಹಿಷ್ಕಾರ ಹಾಕುತ್ತೇವೆ, ಲವ್ ಜಿಹಾದ್ ನಡೆಸಿದರೆ ಸ್ಮಶಾನದಲ್ಲಿ ಜಾಗ ನೀಡುವುದಿಲ್ಲ, ವ್ಯಾಪಾರಕ್ಕೆ ಅವಕಾಶ ನೀಡುವುದಿಲ್ಲ ಎಂದು ಫತ್ವಾ ಹೊರಡಿಸಲಿ. ಅದನ್ನು ಬಿಟ್ಟು ನಾಟಕ ಮಾಡುವುದು ಬೇಡ ಎಂದು ಆಕ್ರೋಶ ವ್ಯಕ್ತಪಡಿಸಿದರು.