ಸಾರಾಂಶ
ಕಾಂಗ್ರೆಸ್ ಪಕ್ಷದ ಆಂತರಿಕ ವಿಚಾರಗಳನ್ನು ನಮ್ಮಲ್ಲೇ ಬಗೆಹರಿಸುತ್ತೇವೆ ಎಂದು ಆರೋಗ್ಯ ಸಚಿವ, ದ.ಕ. ಜಿಲ್ಲಾ ಉಸ್ತುವಾರಿ ಸಚಿವ ದಿನೇಶ್ ಗುಂಡೂರಾವ್ ಹೇಳಿದ್ದಾರೆ.
ಕನ್ನಡಪ್ರಭ ವಾರ್ತೆ ಮಂಗಳೂರು
ಕಾಂಗ್ರೆಸ್ ರಾಜ್ಯ ಉಸ್ತುವಾರಿ ರಣದೀಪ್ ಸುರ್ಜೆವಾಲಾ ಅವರು ರಾಜ್ಯದ ಎಲ್ಲ ಶಾಸಕರನ್ನು ಭೇಟಿಯಾಗಿ, ಅವರಲ್ಲಿರುವ ಅಭಿಪ್ರಾಯ ಸಂಗ್ರಹಿಸಿ ನಂತರ ಮುಂದಿನ ಕ್ರಮ ಮಾಡುತ್ತಾರೆ. ನಾನೂ ಅವರನ್ನು ಭೇಟಿಯಾಗುತ್ತೇನೆ, ನಮ್ಮ ಆಂತರಿಕ ವಿಚಾರಗಳನ್ನು ನಮ್ಮಲ್ಲೇ ಬಗೆಹರಿಸುತ್ತೇವೆ ಎಂದು ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಹೇಳಿದ್ದಾರೆ.ಮಂಗಳೂರಿನಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ರಾಜಕೀಯವಾಗಿ ಅತ್ಯಂತ ದೊಡ್ಡ ಪಕ್ಷವಾಗಿರುವುದರಿಂದ ಪ್ರತಿಯೊಬ್ಬರ ಅಭಿಪ್ರಾಯ ಬೇರೆ ಬೇರೆ ಇರುತ್ತದೆ. ನಮ್ಮೊಳಗೇ ಅಭಿಪ್ರಾಯ ಭೇದಗಳನ್ನು ಬಗೆಹರಿಸುತ್ತೇವೆ ಎಂದರು.ಬಿ.ಆರ್. ಪಾಟೀಲ್ ಅವರ ಹೇಳಿಕೆ ಕೊಟ್ಟಿದ್ದಾರೆ, ಸಿಎಂ ಅವರಲ್ಲೂ ಮಾತನಾಡಿದ್ದಾರೆ. ಮನೆಯ ಹಂಚಿಕೆ ವಿಚಾರದಲ್ಲಿ ಭ್ರಷ್ಟಾಚಾರ ಆಗಿದ್ದರೆ ಅ ಬಗ್ಗೆ ಮಾಹಿತಿ ಕೊಡಲಿ. ಇಡೀ ದೇಶದಲ್ಲಿಯೇ ಭ್ರಷ್ಟಾಚಾರ ಇದೆ, ಭ್ರಷ್ಟಾಚಾರ ಇಲ್ಲ ಅಂತ ಹೇಳಕ್ಕಾಗಲ್ಲ. ಇದನ್ನು ನಿರ್ಮೂಲನೆಯನ್ನು ನಾವು ಮಾಡಬೇಕು ಎಂದು ದಿನೇಶ್ ಗುಂಡೂರಾವ್ ಹೇಳಿದರು.ಬಿಜೆಪಿ ತಿರುಕನ ಕನಸು:
ಯಾವ ಕ್ರಾಂತಿಯೂ ಆಗಲ್ಲ, ಸರ್ಕಾರ ಸುಭದ್ರವಾಗಿದೆ ಎಂದು ಹೇಳಿದ ಅವರು, ಬಿಜೆಪಿಯವರ ಹೇಳಿಕೆಗಳನ್ನು ಗಮನಿಸಿದ್ದೇನೆ. ಮೂರು ತಿಂಗಳಲ್ಲಿ ಸರ್ಕಾರ ಬಿದ್ದು ಹೋಗುತ್ತದೆ ಎಂದು ಹೇಳುತ್ತಿದ್ದಾರೆ. ಅದು ತಿರುಕನ ಕನಸು, ಜನ ಅವರನ್ನು ಮನೆಗೆ ಕಳುಹಿಸಿದ್ದಾರೆ. ಅವರ ಪಕ್ಷದಲ್ಲಿ ಏನು ಸರಿ ಇದೆ? ನಮ್ಮ ಬಟ್ಟಲಲ್ಲಿ ಸೊಳ್ಳೆ ಇದ್ದರೆ ಅವರ ಬಟ್ಟಲಲ್ಲಿ ಹೆಗ್ಗಣ ಇದೆ. ಅವರನ್ನು ಅವರು ಉಳಿಸುವುದನ್ನು ನೋಡಿಕೊಳ್ಳಲಿ ಎಂದು ಟೀಕಿಸಿದರು.;Resize=(128,128))
;Resize=(128,128))
;Resize=(128,128))
;Resize=(128,128))
;Resize=(128,128))