ಸಾರಾಂಶ
ಬಿಜೆಪಿ ಕೇಂದ್ರ ಶಿಸ್ತು ಸಮಿತಿ ಶಾಸಕ ಬಸನಗೌಡ ಪಾಟೀಲ ಯತ್ನಾಳಗೆ ಶೋಕಾಸ್ ನೋಟಿಸ್ ಜಾರಿ ಮಾಡಿದೆ. ಯತ್ನಾಳ ಪರವಾಗಿ ನಾವು ಹೈಕಮಾಂಡ್ ನಾಯಕರ ಭೇಟಿ ಮಾಡುತ್ತೇವೆ ಎಂದು ಮಾಜಿ ಸಚಿವ ಕುಮಾರ ಬಂಗಾರಪ್ಪ ಹೇಳಿದರು.
ಕನ್ನಡಪ್ರಭ ವಾರ್ತೆ ಬೆಳಗಾವಿ
ಬಿಜೆಪಿ ಕೇಂದ್ರ ಶಿಸ್ತು ಸಮಿತಿ ಶಾಸಕ ಬಸನಗೌಡ ಪಾಟೀಲ ಯತ್ನಾಳಗೆ ಶೋಕಾಸ್ ನೋಟಿಸ್ ಜಾರಿ ಮಾಡಿದೆ. ಯತ್ನಾಳ ಪರವಾಗಿ ನಾವು ಹೈಕಮಾಂಡ್ ನಾಯಕರ ಭೇಟಿ ಮಾಡುತ್ತೇವೆ ಎಂದು ಮಾಜಿ ಸಚಿವ ಕುಮಾರ ಬಂಗಾರಪ್ಪ ಹೇಳಿದರು.ನಗರದಲ್ಲಿ ಸೋಮವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ವಕ್ಫ್ ಬೋರ್ಡ್ ಭೂಕಬಳಿಕೆ ವಿಚಾರವಾಗಿ ನಡೆಯುತ್ತಿರುವ ಹೋರಾಟಕ್ಕೆ ಶೋಕಾಸ್ ನೋಟಿಸ್ ನೀಡಿಲ್ಲ ಅನಿಸುತ್ತದೆ. ನಮ್ಮ ರಾಷ್ಟ್ರೀಯ ನಾಯಕರನ್ನು ಭೇಟಿ ಮಾಡಿ ಮನವೊಲಿಸುತ್ತೇವೆ. ಬಿಜೆಪಿ ಸಂಘಟನೆಯಲ್ಲಿ ಶಾಸಕ ಬನಸಗೌಡ ಪಾಟೀಲ ಯತ್ನಾಳ ಅವರ ಪಾತ್ರ ಬಹುಮುಖ್ಯ ಇದೆ. ಈ ಕಾರಣಕ್ಕೆ ನಾವೆಲ್ಲರೂ ಯತ್ನಾಳ ಬೆನ್ನಿಗೆ ನಿಲ್ಲುತ್ತೇವೆ ಎಂದು ಹೇಳಿದರು.