ಸಾರಾಂಶ
ಮೇಕೆದಾಟು ಯೋಜನೆಗೆ ಸಂಬಂಧಿಸಿ ಕೇಂದ್ರ ಜಲ ಆಯೋಗ (ಸಿಡಬ್ಲ್ಯೂಸಿ)ಕ್ಕೆ ಈ ಹಿಂದೆ ಸಲ್ಲಿಸಲಾಗಿದ್ದ ವಿವರ ಯೋಜನಾ ವರದಿ (ಡಿಪಿಆರ್) ಕುರಿತು ಯಾವುದೇ ನಿರ್ಧಾರ ತೆಗೆದುಕೊಳ್ಳದ ಹಿನ್ನೆಲೆಯಲ್ಲಿ ಪರಿಷ್ಕೃತ ಡಿಪಿಆರ್ ಸಲ್ಲಿಸಲಾಗುವುದು ಎಂದು ಜಲಸಂಪನ್ಮೂಲ ಸಚಿವರೂ ಆಗಿರುವ ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಸ್ಪಷ್ಟಪಡಿಸಿದ್ದಾರೆ.
ಕನ್ನಡಪ್ರಭ ವಾರ್ತೆ ಬೆಂಗಳೂರು
ಮೇಕೆದಾಟು ಯೋಜನೆಗೆ ಸಂಬಂಧಿಸಿ ಕೇಂದ್ರ ಜಲ ಆಯೋಗ (ಸಿಡಬ್ಲ್ಯೂಸಿ)ಕ್ಕೆ ಈ ಹಿಂದೆ ಸಲ್ಲಿಸಲಾಗಿದ್ದ ವಿವರ ಯೋಜನಾ ವರದಿ (ಡಿಪಿಆರ್) ಕುರಿತು ಯಾವುದೇ ನಿರ್ಧಾರ ತೆಗೆದುಕೊಳ್ಳದ ಹಿನ್ನೆಲೆಯಲ್ಲಿ ಪರಿಷ್ಕೃತ ಡಿಪಿಆರ್ ಸಲ್ಲಿಸಲಾಗುವುದು ಎಂದು ಜಲಸಂಪನ್ಮೂಲ ಸಚಿವರೂ ಆಗಿರುವ ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಸ್ಪಷ್ಟಪಡಿಸಿದ್ದಾರೆ.ಮೇಕೆದಾಟು ಯೋಜನೆ ಡಿಪಿಆರ್ ಕುರಿತು ಉಂಟಾಗಿರುವ ಗೊಂದಲದ ಕುರಿತು ಪತ್ರಿಕಾ ಹೇಳಿಕೆ ನೀಡಿರುವ ಡಿ.ಕೆ.ಶಿವಕುಮಾರ್, ಮೇಕೆದಾಟು ಯೋಜನೆಗೆ ಈ ಹಿಂದೆ 2018-19ರ ದರಪಟ್ಟಿ ಆಧರಿಸಿ ಡಿಪಿಆರ್ ಸಿದ್ಧಪಡಿಸಿ 2019ರ ಜ.18ರಂದು ಸಿಡಬ್ಲ್ಯೂಸಿಗೆ ಸಲ್ಲಿಸಲಾಗಿತ್ತು. ಆದರೆ, ಆಡಳಿತಾತ್ಮಕ ಮತ್ತು ಕಾನೂನು ನಿರ್ಬಂಧಗಳಿಂದಾಗಿ ಸಿಡಬ್ಲ್ಯೂಸಿ ಆ ಡಿಪಿಆರ್ ಪರಿಶಿಲನೆಗೆ ತೆಗೆದುಕೊಂಡಿರಲಿಲ್ಲ. ಇದೀಗ ಕಳೆದ ನ. 13ರಂದು ಸುಪ್ರೀಂಕೋರ್ಟ್ ನೀಡಿರುವ ತೀರ್ಪಿನಿಂದ ಡಿಪಿಆರ್ ಅಥವಾ ರಾಜ್ಯದ ಪ್ರಸ್ತಾವನೆಯನ್ನು ಪ್ರಕ್ರಿಯೆಗೊಳಿಸಬಹುದಾಗಿದೆ. ಹೀಗಾಗಿ 2018-19ರ ದರ ಪಟ್ಟಿ ಅನ್ವಯ ಸಿದ್ಧಪಡಿಸಿರುವ ಡಿಪಿಆರ್ ಬದಲಿಗೆ, 2025-26ರ ದರ ಪಟ್ಟಿಯಂತೆ ಪರಿಷ್ಕೃತ ಡಿಪಿಆರ್ ಸಿದ್ಧಪಡಿಸುವ ಅವಶ್ಯಕತೆಯಿದೆ. ಅದನ್ನು ಪರಿಷ್ಕರಿಸಿ ಪರಿಷ್ಕೃತ ಡಿಪಿಆರ್ ಸಲ್ಲಿಸಲಾಗುವುದು ಎಂದು ತಿಳಿಸಿದ್ದಾರೆ.
;Resize=(128,128))
;Resize=(128,128))
;Resize=(128,128))
;Resize=(128,128))