ಕರ್ನಾಟಕ ಸರ್ಕಾರವು 2026-27 ನೇ ಸಾಲಿನ ಮುಂಗಾರು ಹಂಗಾಮಿನಲ್ಲಿ ಮರು ವಿನ್ಯಾಸಗೊಳಿಸಿದ ಹವಾಮಾನ ಆಧಾರಿತ ಬೆಳೆ ವಿಮಾ ಯೋಜನೆಯನ್ನು ಅನುಷ್ಠಾಗೊಳಿಸಲು ಅಧಿಸೂಚಿಸಿದೆ. ಕೊಡಗು ಜಿಲ್ಲೆಯಲ್ಲಿ ಕಾಳುಮೆಣಸು ಹಾಗೂ ಅಡಿಕೆ ಬೆಳೆಗೆ ವಿಮಾ ಘಟಕ ಅಧಿಸೂಚಿಸಲಾಗಿದೆ.
ಕನ್ನಡಪ್ರಭ ವಾರ್ತೆ ಮಡಿಕೇರಿ
ಕರ್ನಾಟಕ ಸರ್ಕಾರವು 2026-27 ನೇ ಸಾಲಿನ ಮುಂಗಾರು ಹಂಗಾಮಿನಲ್ಲಿ ಮರು ವಿನ್ಯಾಸಗೊಳಿಸಿದ ಹವಾಮಾನ ಆಧಾರಿತ ಬೆಳೆ ವಿಮಾ ಯೋಜನೆಯನ್ನು ಅನುಷ್ಠಾಗೊಳಿಸಲು ಅಧಿಸೂಚಿಸಿದೆ. ಕೊಡಗು ಜಿಲ್ಲೆಯಲ್ಲಿ ಕಾಳುಮೆಣಸು ಹಾಗೂ ಅಡಿಕೆ ಬೆಳೆಗೆ ವಿಮಾ ಘಟಕ ಅಧಿಸೂಚಿಸಲಾಗಿದೆ.ಹವಾಮಾನ ಆಧಾರಿತ ಅಂಶಗಳಾದ ಮಳೆಯ ಪ್ರಮಾಣ, ತಾಪಮಾನ ಮತ್ತಿತರ ಮಾಹಿತಿಯನ್ನು ಸ್ಥಳೀಯವಾಗಿ ಲಭ್ಯವಿರುವ ಟೆಲಿಮೆಟ್ರಿಕ್ ಮಳೆ ಮಾಪನ ಕೇಂದ್ರಗಳಲ್ಲಿ ದಾಖಲಿಸುವ ಅಂಶಗಳ ಆಧಾರದ ಮೇಲೆ ಬೆಳೆ ವಿಮೆ ನಷ್ಟ ತೀರ್ಮಾನಿಸಲಾಗಿದೆ. 2026-27 ನೇ ಸಾಲಿನಲ್ಲಿ ಮುಂಗಾರು ಹಂಗಾಮಿನ ಮರು ವಿನ್ಯಾಸಗೊಳಿಸಲಾದ ಹವಾಮಾನ ಆಧಾರಿತ ಬೆಳೆ ವಿಮೆ ಯೋಜನೆಯಡಿ ಬೆಳೆವಾರು ವಿಮಾ ಮೊತ್ತ ಕಾಳುಮೆಣಸು ಬೆಳೆಗೆ ಒಟ್ಟು 47,000 ರು. ಹಾಗೂ ಅಡಿಕೆ ಬೆಳೆಗೆ 1,28,000 ರು. ಆಗಿರುತ್ತದೆ. ವಿಮಾ ಕಂಪನಿಗೆ ಒಟ್ಟು ವಿಮಾ ಮೊತ್ತಕ್ಕೆ ರೈತರು ಕಾಳುಮೆಣಸು ಬೆಳೆಗೆ ಶೇ.5 ರ ವಿಮಾ ಮೊತ್ತ 2350 ರು. ಹಾಗೂ ಅಡಿಕೆ ಬೆಳೆಗೆ 6400 ರು. ಪ್ರತಿ ಹೆಕ್ಟೇರ್ ಪಾವತಿಸಬೇಕಿದೆ. ವಿಮಾ ನೋಂದಣಿಗೆ ಜು. 31 ಕೊನೆಯ ದಿನವಾಗಿದೆ.
ತೋಟಗಾರಿಕೆ ಬೆಳೆಗಳ ವಿಮಾ, ರೈತರು ಪಾವತಿಸಬೇಕಾದ ವಿಮಾ ಕಂತಿನ ಮೊತ್ತ ಹಾಗೂ ಅನ್ವಯಿಸುವ ಅವಧಿಯ ಕಾಳು ಮೆಣಸು ಪ್ರತಿ ಹೆಕ್ಟೇರ್‌ಗೆ ವಿಮಾ ಮೊತ್ತ (ರು.ಗಳಲ್ಲಿ) 47000, ರೈತರು ಪಾವತಿಸಬೇಕಾಗಿರುವ ಪ್ರೀಮಿಯಂ ಮೊತ್ತ (ಶೇ.5) ರು. 2350 ವಿಮಾ ಅನ್ವಯಿಸುವ ಅವಧಿ 2026 ರ ಆಗಸ್ಟ್, 1 ರಿಂದ 2027 ರ ಜುಲೈ, 31 ರವರೆಗೆ.ಅಡಕೆ ಬೆಳೆ ಪ್ರತಿ ಹೆಕ್ಟೇರ್‌ಗೆ ವಿಮಾ ಮೊತ್ತ 1,28,000 ರು, ರೈತರು ಪಾವತಿಸಬೇಕಾಗಿರುವ ಪ್ರೀಮಿಯಂ ಮೊತ್ತ (ಶೇ.5)6400ವಿಮೆಯು 2026 ರ ಆಗಸ್ಟ್ 1 ರಿಂದ 2027 ರ ಜು. 31 ರವರೆಗೆ ಅನ್ವಯಿಸುತ್ತದೆ.
ಬೆಳೆ ಸಾಲ ಪಡೆದ ಮತ್ತು ಬೆಳೆ ಸಾಲ ಪಡೆಯದ ರೈತರು ವಿಮಾ ಮೊತ್ತವು ಪಾವತಿಸಬೇಕಾದ ವಿಮಾ ಕಂತಿನ ಮೊತ್ತವು ಒಂದೇ ಆಗಿರುತ್ತದೆ.ಜಿಲ್ಲೆಯಲ್ಲಿ ಬೆಳೆ ಸಾಲ ಪಡೆದ ರೈತರು ಹಾಗೂ ಸಾಲ ಪಡೆಯದ ರೈತರು ವಿಮೆ ಯೋಜನೆಯಡಿ ನೋಂದಣಿ ಮಾಡಿಕೊಳ್ಳಬಹುದಾಗಿದೆ. ವಿಮೆ ಮಾಡಿಸಲು ಇಚ್ಚಿಸುವ ರೈತರು ನಿಗದಿತ ಅರ್ಜಿಯೊಂದಿಗೆ ಪಹಣಿ ಪತ್ರ, ಬ್ಯಾಂಕ್ ಖಾತೆ ಪಾಸ್ ಪುಸ್ತಕ, ಆಧಾರ್ ಕಾರ್ಡ್ ನಕಲು ಪ್ರತಿಗಳನ್ನು ಮತ್ತು ಸ್ವಯಂ ಘೋಷಿತ ಬೆಳೆ ವಿವರಗಳನ್ನು ಲಗತ್ತಿಸಿ ತಮ್ಮ ಹತ್ತಿರದ ಬ್ಯಾಂಕ್‍ಗಳಲ್ಲಿ ಅಥವಾ ಬೆಳೆ ಸಾಲ ಪಡೆಯದ ರೈತರು ಮಾತ್ರ ಗ್ರಾಮ ಪಂಚಾಯತ್ ಮಟ್ಟದಲ್ಲಿರುವ ಗ್ರಾಮ ಒನ್ ಕೇಂದ್ರಗಳಲ್ಲಿ ಅಥವಾ ಸಾಮಾನ್ಯ ಸೇವಾ ಕೇಂದ್ರಗಳಲ್ಲಿಯೂ ಸಹ ವಿಮೆ ಯೋಜನೆಯಡಿ ನೋಂದಾಯಿಸಿಕೊಳ್ಳಬಹುದು.
ಮರು ವಿನ್ಯಾಸಗೊಳಿಸಿದ ಹವಾಮಾನ ಆಧಾರಿತ ಬೆಳೆ ವಿಮಾ ಯೋಜನೆಯ ಅನುಷ್ಠಾನಗೊಳಿಸಲು ಕೊಡಗು ಜಿಲ್ಲೆಗೆ ಯುನೈಟೆಡ್ ಇಂಡಿಯಾನ್ ಇನ್ಸುರೆನ್ಸ್ ಕಂಪನಿ ವಿಮಾ ಸಂಸ್ಥೆಯು ಹಂಚಿಕೆಯಾಗಿದೆ.ಹೆಚ್ಚಿನ ಮಾಹಿತಿಗೆ ಸಮೀಪದ ಬ್ಯಾಂಕ್ ಶಾಖೆ, ಯುನೈಟೆಡ್ ಇಂಡಿಯಾ ಇನ್ಸುರೆನ್ಸ್ ಕಂಪನಿ ಮೊ.ನಂ. 9353534871, 9481883708 3) ಹಿರಿಯ ಸಹಾಯಕ ತೋಟಗಾರಿಕೆ ನಿರ್ದೇಶಕರು, ಹಿರಿಯ ಸಹಾಯಕ ತೋಟಗಾರಿಕೆ ನಿರ್ದೇಶಕರು ಮಡಿಕೇರಿ ಮೊ.ನಂ.9448407816, ಸೋಮವಾರಪೇಟೆ ಮೊ.ನಂ. 8762360208, ಹಿರಿಯ ಸಹಾಯಕ ತೋಟಗಾರಿಕೆ ನಿರ್ದೇಶಕರು, ರೈತ ಸಂಪರ್ಕ ಕೇಂದ್ರದ ಸಹಾಯಕ ತೋಟಗಾರಿಕೆ ಪೊನ್ನಂಪೇಟೆ ಮೊ.ನಂ.9448049020 ಅಧಿಕಾರಿಗಳು, ಸಾಮಾನ್ಯ ಸೇವಾ ಕೇಂದ್ರಗಳನ್ನು ಸಂಪರ್ಕಿಸಲು ಕೋರಿದೆ.ತೋಟಗಾರಿಕೆ ಉಪ ನಿರ್ದೇಶಕರು (ಜಿಪಂ), ಮಡಿಕೇರಿ, ಕೊಡಗು ಮೊ.ನಂ. 9448999227 ನ್ನು ಸಂಪರ್ಕಿಸಬಹುದು ಎಂದು ತೋಟಗಾರಿಕೆ ಇಲಾಖೆಯ ಉಪ ನಿರ್ದೇಶಕರಾದ ಶಶಿಧರ ತಿಳಿಸಿದ್ದಾರೆ.