ವಿದ್ಯುತ್ ಬಿಲ್ ಬಾಕಿ ಮನ್ನಾಕ್ಕೆ ಆಗ್ರಹಿಸಿ ನೇಕಾರರರ ಧರಣಿ

| Published : Mar 08 2024, 01:48 AM IST

ವಿದ್ಯುತ್ ಬಿಲ್ ಬಾಕಿ ಮನ್ನಾಕ್ಕೆ ಆಗ್ರಹಿಸಿ ನೇಕಾರರರ ಧರಣಿ
Share this Article
  • FB
  • TW
  • Linkdin
  • Email

ಸಾರಾಂಶ

ನೇಕಾರರ ಬಾಕಿ ವಿದ್ಯುತ್‌ ಬಿಲ್‌ ಮನ್ನಾ ಮಾಡುವಂತೆ ಆಗ್ರಹಿಸಿ ನೇಕಾರರು ಬೆಂಗಳೂರಿನಲ್ಲಿ ಪ್ರತಿಭಟನೆ ನಡೆಸಿದ್ದಾರೆ.

ಕನ್ನಡಪ್ರಭ ವಾರ್ತೆ ಬೆಂಗಳೂರು

ನೇಕಾರರ ವಿದ್ಯುತ್ ಬಿಲ್ ಬಾಕಿ ಹಾಗೂ ಸಾಲ ಮನ್ನಾ ಮಾಡಬೇಕು, ಆತ್ಮಹತ್ಯೆ ಮಾಡಿಕೊಂಡಿರುವ ನೇಕಾರರ ಕುಟುಂಬಕ್ಕೆ ಪರಿಹಾರ ನೀಡಬೇಕು ಎಂಬುದು ಸೇರಿದಂತೆ ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಗುರುವಾರ ನೇಕಾರರು ಸ್ವಾತಂತ್ರ್ಯ ಉದ್ಯಾನದಲ್ಲಿ ಪ್ರತಿಭಟನೆ ನಡೆಸಿದರು.

ತಮಿಳುನಾಡಿನಲ್ಲಿ ಕೈಮಗ್ಗ ಮತ್ತು ಜವಳಿ ಇಲಾಖೆಯ ಮೂಲಕ ಸರಕಾರದ ವಿವಿಧ ಇಲಾಖೆಗಳಿಗೆ ವೃತ್ತಿಪರ ನೇಕಾರರಿಂದ ಬಟ್ಟೆ ಒದಗಿಸುವ ಮೂಲಕ ನಿರಂತರ ಉದ್ಯೋಗ ಒದಗಿಸುತ್ತಿದೆ. ಅದೇ ರೀತಿಯಲ್ಲಿ ಕರ್ನಾಟಕದಲ್ಲೂ ಕೆಎಚ್‌ಡಿಸಿ ಮೂಲಕ ಉದ್ಯೋಗ ಒದಗಿಸಬೇಕು. ಸಹಕಾರಿ ಸಂಘ, ಸಂಸ್ಥೆಗಳು ಮತ್ತು ರಾಷ್ಟ್ರೀಕೃತ ಬ್ಯಾಂಕ್‌ಗಳಿಂದ ಪಡೆದ ಸಂಪೂರ್ಣ ಸಾಲ ಮನ್ನಾ ಮಾಡಬೇಕು. ಕಟ್ಟಡ ಕಾರ್ಮಿಕರ ಮಾದರಿಯಲ್ಲಿ ವೃತ್ತಿಪರ ನೇಕಾರರಿಗೂ ಕಾರ್ಮಿಕ ಸೌಲಭ್ಯಗಳನ್ನು ಒದಗಿಸಬೇಕು ಎಂದು ಪ್ರತಿಭಟನಾಕಾರರು ಒತ್ತಾಯಿಸಿದರು.

ಕರ್ನಾಟಕ ರಾಜ್ಯ ನೇಕಾರರ ಸೇವಾ ಸಂಘದ ಅಧ್ಯಕ್ಷ ಲಿಂಗರಾಜ ಟಿರಕಿ ಮಾತನಾಡಿ, ನೇಕಾರ ಸಮುದಾಯಗಳ ಅಭಿವೃದ್ಧಿ ನಿಗಮ ಸ್ಥಾಪಿಸಿ ₹100 ಕೋಟಿ ಅನುದಾನ ಒದಗಿಸಬೇಕು. ಕೆಲಸದಲ್ಲಿ ನಷ್ಟ ಉಂಟಾಗಿ ಆತ್ಮಹತ್ಯೆ ಮಾಡಿಕೊಂಡಿರುವ 47 ನೇಕಾರರ ಕುಟುಂಬಗಳಿಗೆ ₹10 ಲಕ್ಷ ಪರಿಹಾರ ನೀಡಬೇಕು. ಸುಮಾರು 5 ಲಕ್ಷ ಜನರು ಅವಲಂಬಿತರಾಗಿರುವ ನೇಕಾರ ಉದ್ಯಮ ಕುಸಿತ ಕಾಣುತ್ತಿದ್ದು, ಅದರ ಪುನರುಜ್ಜೀವನಕ್ಕಾಗಿ ₹1,500 ಕೋಟಿ ಅನುದಾನ ನೀಡಬೇಕು ಎಂದು ಸರ್ಕಾರಕ್ಕೆ ಮನವಿ ಮಾಡಿದರು.

ಹೊರಗುತ್ತಿಗೆ ಸಿಬ್ಬಂದಿಗೆ ನೇರವೇತನಕ್ಕೆ ಒತ್ತಾಯಿಸಿ ಧರಣಿಕನ್ನಡಪ್ರಭ ವಾರ್ತೆ ಬೆಂಗಳೂರುಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಹಾಸ್ಟೆಲ್‌ಗಳಲ್ಲಿ ಕಾರ್ಯ ನಿರ್ವಹಿಸುತ್ತಿರುವ ಹೊರ ಗುತ್ತಿಗೆ ಸಿಬ್ಬಂದಿಗಳಿಗೆ ಏಜೆನ್ಸಿ ಬದಲು ಸರ್ಕಾರದಿಂದಲೇ ನೇರವಾಗಿ ವೇತನ ಪಾವತಿಸಬೇಕು ಎಂದು ಒತ್ತಾಯಿಸಿ ಹೊರಗುತ್ತಿಗೆ ಸಿಬ್ಬಂದಿ ಗುರುವಾರ ಪ್ರತಿಭಟನೆ ನಡೆಸಿದರು.ನಗರದ ದೇವರಾಜ ಅರಸು ಭವನದ ಎದುರು ಪ್ರತಿಭಟನೆ ನಡೆಸಿದ ಸಿಬ್ಬಂದಿಗಳು ರಾಜ್ಯದ್ಯಂತ ಸುಮಾರು 5,500 ಸಿಬ್ಬಂದಿ ಕೆಲಸ ಮಾಡುತ್ತಿದ್ದಾರೆ. ಇವರಿಗೆ ಆರೂವರೆ ತಿಂಗಳಿಂದ ವೇತನ ನೀಡಿಲ್ಲ. ಏಜೆನ್ಸಿಗಳು ವೇತನ ನೀಡದೆ ಸತಾಯಿಸುತ್ತಿವೆ ಎಂದು ಪ್ರತಿಭಟನೆ ನೇತೃತ್ವ ವಹಿಸಿದ ರಾಜ್ಯ ಸರ್ಕಾರಿ ಹಾಸ್ಟೇಲ್ ಮತ್ತು ವಸತಿ ಶಾಲಾ ಹೊರಗುತ್ತಿಗೆ ನೌಕರರ ಸಂಘ ಆರೋಪಿಸಿದೆ.ವೇತನ ವಿಳಂಬದಿಂದ ಸಿಬ್ಬಂದಿ ಆರ್ಥಿಕ ಸಂಕಷ್ಟಕ್ಕೆ ಸಿಲುಕಿದ್ದು, ಕೂಡಲೇ ವೇತನ ಪಾವತಿಸಲು ಕ್ರಮ ಕೈಗೊಳ್ಳಬೇಕು. ಅಲ್ಲದೇ, ಮುಂದಿನ ದಿನಗಳಲ್ಲಿ ಸರ್ಕಾರವೇ ನೇರವಾಗಿ ವೇತನ ಪಾವತಿಸಬೇಕು. ಸಿಬ್ಬಂದಿಗೆ ಇಎಸ್‌ಐ, ಪಿಎಫ್ ಸೌಲಭ್ಯ ಇಲ್ಲ. ಅನೇಕ ವರ್ಷಗಳಿಂದ ದುಡಿಯುತ್ತಿರುವವರನ್ನು ಏಕಾಏಕಿ ಕೆಲಸದಿಂದ ತೆಗೆದು ಹಾಕಲಾಗುತ್ತಿದೆ ಎಂದು ಸಿಬ್ಬಂದಿ ನೋವು ತೋಡಿಕೊಂಡರು.ಸ್ಥಳಕ್ಕೆ ಆಗಮಿಸಿದ ಸಚಿವ ಶಿವರಾಜ ತಂಗಡಗಿ ಅವರು, ಶೀಘ್ರದಲ್ಲೇ ಅಧಿಕಾರಿಗಳ ಸಭೆ ಕರೆದು ವೇತನ ಪಾವತಿ ಮತ್ತಿತರ ಸಮಸ್ಯೆಗಳನ್ನು ಪರಿಹರಿಸುವ ಭರವಸೆ ನೀಡಿದರು.