ಪ್ರಚಾರ ವಾಹನಗಳ ಅನುಮತಿಗೆ ವೆಬ್ ಸೈಟ್

| Published : Mar 20 2024, 01:23 AM IST

ಸಾರಾಂಶ

ಸುವಿಧ ಅಂತರ್ಜಾಲ ತಾಣದಲ್ಲಿ ರಾಜಕೀಯ ಪಕ್ಷದವರು ಚುನಾವಣೆಯಲ್ಲಿ ತಮ್ಮ ಪಕ್ಷದ ವತಿಯಿಂದ ಚುನಾವಣಾ ಪ್ರಚಾರಕ್ಕಾಗಿ ಹಾಗೂ ವಾಹನಗಳಿಗೆ ವಿವಿಧ ರೀತಿಯ ಅನುಮತಿಗಳನ್ನು ಸುಲಭವಾಗಿ ಹಾಗೂ ಪ್ರಯಾಸವಿಲ್ಲದೇ ಪಡೆಯಲು ರೂಪಿಸಲಾಗಿದೆ

ಕನ್ನಡಪ್ರಭ ವಾರ್ತೆ ಚಿಕ್ಕಬಳ್ಳಾಪುರ

ಲೋಕಸಭಾ ಸಾರ್ವತ್ರಿಕ ಚುನಾವಣೆ ಹಿನ್ನೆಲೆಯಲ್ಲಿ ಚಿಕ್ಕಬಳ್ಳಾಪುರ ಕ್ಷೇತ್ರದಲ್ಲಿ ಏಪ್ರಿಲ್‌ 26 ರಂದು ಮತದಾನ ನಡೆಯಲಿದೆ. ಚುನಾವಣೆಯನ್ನು ಪಾರದರ್ಶಕವಾಗಿ ನಡೆಸಲು ಚುನಾವಣಾ ಆಯೋಗವು ಸುವಿಧ ಎಂಬ ಅಂತರ್ಜಾಲ ತಾಣವನ್ನು ಅಳವಡಿಸಿದೆ.

ಎಲ್ಲಾ ರಾಜಕೀಯ ಪಕ್ಷದವರು ಹಾಗೂ ಅಭ್ಯರ್ಥಿಗಳು ಮತ್ತು ಸಾರ್ವಜನಿಕರು ಇದರ ಸದುಪಯೋಗವನ್ನು ಪಡೆಯಬಹುದಾಗಿರುತ್ತದೆ ಎಂದು ಈ ಮೂಲಕ ತಿಳಿಯಪಡಿಸಿದೆ.

ಸುವಿಧ ಅಂತರ್ಜಾಲ ತಾಣದಲ್ಲಿ ರಾಜಕೀಯ ಪಕ್ಷದವರು ಚುನಾವಣೆಯಲ್ಲಿ ತಮ್ಮ ಪಕ್ಷದ ವತಿಯಿಂದ ಚುನಾವಣಾ ಪ್ರಚಾರಕ್ಕಾಗಿ ಹಾಗೂ ವಾಹನಗಳಿಗೆ ವಿವಿಧ ರೀತಿಯ ಅನುಮತಿಗಳನ್ನು ಸುಲಭವಾಗಿ ಹಾಗೂ ಪ್ರಯಾಸವಿಲ್ಲದೇ ಪಡೆಯಲು ನಿರ್ಮಿಸಲಾಗಿರುತ್ತದೆ. ಎಂದು ಜಿಲ್ಲಾ ಚುನಾವಣಾಧಿಕಾರಿ ಹಾಗೂ ಜಿಲ್ಲಾಧಿಕಾರಿ ಪಿ.ಎನ್.ರವೀಂದ್ರ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.ಪರವಾನಿಗೆ ಪಡೆದಿರುವ ಬಂದೂಕುಗಳನ್ನು ಪೊಲೀಸ್ ಠಾಣೆಗೆ ಒಪ್ಪಿಸಿಠಾಣೆಗೆ ಬಂದೂಕು ಒಪ್ಪಿಸಿ

ಲೋಕಸಭಾ ಸಾರ್ವತ್ರಿಕ ಚುನಾವಣೆ-2024 ಕ್ಕೆ ಸಂಬಂಧ ಯಾವುದೇ ಅಹಿತಕರ ಘಟನೆ ನಡೆಯದಂತೆ ಮುನ್ನೆಚ್ಚರಿಕೆ ಕ್ರಮವಾಗಿ ಪರವಾನಿಗೆ ಪಡೆದಿರುವ ಬಂದೂಕುಗಳನ್ನು ಸಾರ್ವಜನಿಕರು ಚುನಾವಣೆ ಘೋಷಣೆಯಾದ ದಿನದಿಂದ ಚುನಾವಣೆ ಮುಗಿಯುವವರೆಗೂ ಸಂಬಂಧಪಟ್ಟ ವ್ಯಾಪ್ತಿಯ ಪೊಲೀಸ್ ಠಾಣೆಗೆ ಒಪ್ಪಿಸಬೇಕು. ಒಂದು ವೇಳೆ ಪೊಲೀಸ್ ಠಾಣೆಗೆ ಒಪ್ಪಿಸದಿದ್ದರೆ ಕಾನೂನು ರೀತಿಯ ಕ್ರಮ ಕೈಗೊಳ್ಳಲಾಗುವುದು ಎಂದು ಜಿಲ್ಲಾಧಿಕಾರಿ ಪಿ.ಎನ್.ರವೀಂದ್ರ ತಿಳಿಸಿದ್ದಾರೆ.

ಲೋಕಸಭಾ ಚುನಾವಣೆಗೆ ಸಂಬಂಧಿಸಿದಂತೆ ಯಾವುದೇ ರಾಜಕೀಯ ಪಕ್ಷಗಳು ಜಾಹೀರಾತಿಗಾಗಿ ಮುದ್ರಿಸುವ ಹ್ಯಾಂಡ್ ಬಿಲ್ಸ್ ಮತ್ತು ಪಾಂಪ್ಲೆಟ್ಸ್ ಮುದ್ರಿಸುವಾಗ ಕಡ್ಡಾಯವಾಗಿ ಪ್ರಿಂಟಿಂಗ್ ಪ್ರೆಸ್‌ನ ಹೆಸರು ಮತ್ತು ಪ್ರತಿಗಳ ಸಂಖ್ಯೆಯನ್ನು ನಮೂದಿಸುವುದು ಕಡ್ಡಾಯ. ಮುದ್ರಿಸಲಾದ ಚುನಾವಣಾ ಸಾಮಾಗ್ರಿಯ ಒಂದು ಪ್ರತಿಯನ್ನು ಜಿಲ್ಲಾ ಚುನಾವಣಾಧಿಕಾರಿಗಳಿಂದ ನೇಮಕ ಮಾಡಲಾಗಿರುವ ಎಂ.ಸಿ.ಎಂ.ಸಿ ಅಧಿಕಾರಿಗಳ ತಂಡಕ್ಕೆ ಆಯಾ ದಿನದಂದು ತಕ್ಷಣವೇ ನೀಡಬೇಕೆಂದು ಅವರು ತಿಳಿಸಿದ್ದಾರೆ.