ಬಿ.ಎನ್. ಉಷಾ ಅವರು ವೇಟ್ ಲಿಫ್ಟಿಂಗ್ ಕ್ರೀಡಾಪಟು ಆಗಿದ್ದು, ಇಂಗ್ಲೆಂಡ್‌ನಲ್ಲಿ ನಡೆದ ಕಾಮನ್‌ವೆಲ್ತ್ ಗೇಮ್ಸ್‌ನಲ್ಲಿ ೬ನೇ ಸ್ಥಾನ, ಸಿಂಗಾಪುರದಲ್ಲಿ ನಡೆದ ವೇಟ್ ಲಿಫ್ಟಿಂಗ್ ಸ್ಪರ್ಧೆಯಲ್ಲಿ ಚಿನ್ನದ ಪದಕ, ಸೀನಿಯರ್ ನ್ಯಾಷನಲ್ ವೇಟ್ ಲಿಫ್ಟಿಂಗ್‌ನಲ್ಲಿ ೩ ಚಿನ್ನ ಮತ್ತು ೩ ಕಂಚಿನ ಪದಕಗಳು, ನ್ಯಾಷನಲ್ ಗೇಮ್ಸ್‌ನಲ್ಲಿ ೨ ಬೆಳ್ಳಿ, ರಾಜ್ಯ ಮಟ್ಟದ ವೇಟ್ ಲಿಫ್ಟಿಂಗ್ ಚಾಂಪಿಯನ್‌ಷಿಪ್‌ನಲ್ಲಿ ೪ ಚಿನ್ನ ಮತ್ತು ೧ ಬೆಳ್ಳಿ, ಆಲ್ ಇಂಡಿಯಾ ಇಂಟರ್‌ ಯೂನಿವರ್ಸಿಟಿ ಸ್ಪರ್ಧೆಯಲ್ಲಿ ಚಿನ್ನದ ಪದಕ ಹಾಗೂ ೨೦೨೩ರಲ್ಲಿ ಕರ್ನಾಟಕ ಒಲಿಂಪಿಕ್ ಸಂಸ್ಥೆ ನೀಡುವ ಕೆಒಎ ಪ್ರಶಸ್ತಿಗೆ ಭಾಜನರಾಗಿದ್ದಾರೆ.

ಕನ್ನಡಪ್ರಭ ವಾರ್ತೆ ಹಾಸನ

ಜಿಲ್ಲೆಯ ಅರಕಲಗೂಡು ತಾಲೂಕು ಕೊಣನೂರು ಹೋಬಳಿ ಬನ್ನೂರು ಗ್ರಾಮದ ರೈತಾಪಿ ಕುಟುಂಬದ ಬಿ.ಎನ್. ಉಷಾ ಅವರು ೨೦೨೩ನೇ ಸಾಲಿನ ಏಕಲವ್ಯ ಪ್ರಶಸ್ತಿಗೆ ಭಾಜನರಾಗುವ ಮೂಲಕ ಜಿಲ್ಲೆಗೆ ಕೀರ್ತಿ ತಂದಿದ್ದಾರೆ.

ಬನ್ನೂರು ಗ್ರಾಮದ ನಟೇಶ್ ಕುಮಾರ್ ಮತ್ತು ವನಜಾಕ್ಷಿ ದಂಪತಿಯ ಪುತ್ರಿ, ಅಂತಾರಾಷ್ಟ್ರೀಯ ವೇಟ್ ಲಿಫ್ಟಿಂಗ್ ಕ್ರೀಡಾಪಟು ಬಿ.ಎನ್. ಉಷಾ ಅವರಿಗೆ ಬೆಂಗಳೂರಿನಲ್ಲಿ ಡಿ.೧ ರಂದು ಸಂಜೆ ನಡೆದ ಸಮಾರಂಭದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ೨೦೨೩ನೇ ಸಾಲಿನ ಏಕಲವ್ಯ ಪ್ರಶಸ್ತಿ ಪ್ರದಾನ ಮಾಡಿದರು.ಬಿ.ಎನ್. ಉಷಾ ಅವರು ವೇಟ್ ಲಿಫ್ಟಿಂಗ್ ಕ್ರೀಡಾಪಟು ಆಗಿದ್ದು, ಇಂಗ್ಲೆಂಡ್‌ನಲ್ಲಿ ನಡೆದ ಕಾಮನ್‌ವೆಲ್ತ್ ಗೇಮ್ಸ್‌ನಲ್ಲಿ ೬ನೇ ಸ್ಥಾನ, ಸಿಂಗಾಪುರದಲ್ಲಿ ನಡೆದ ವೇಟ್ ಲಿಫ್ಟಿಂಗ್ ಸ್ಪರ್ಧೆಯಲ್ಲಿ ಚಿನ್ನದ ಪದಕ, ಸೀನಿಯರ್ ನ್ಯಾಷನಲ್ ವೇಟ್ ಲಿಫ್ಟಿಂಗ್‌ನಲ್ಲಿ ೩ ಚಿನ್ನ ಮತ್ತು ೩ ಕಂಚಿನ ಪದಕಗಳು, ನ್ಯಾಷನಲ್ ಗೇಮ್ಸ್‌ನಲ್ಲಿ ೨ ಬೆಳ್ಳಿ, ರಾಜ್ಯ ಮಟ್ಟದ ವೇಟ್ ಲಿಫ್ಟಿಂಗ್ ಚಾಂಪಿಯನ್‌ಷಿಪ್‌ನಲ್ಲಿ ೪ ಚಿನ್ನ ಮತ್ತು ೧ ಬೆಳ್ಳಿ, ಆಲ್ ಇಂಡಿಯಾ ಇಂಟರ್‌ ಯೂನಿವರ್ಸಿಟಿ ಸ್ಪರ್ಧೆಯಲ್ಲಿ ಚಿನ್ನದ ಪದಕ ಹಾಗೂ ೨೦೨೩ರಲ್ಲಿ ಕರ್ನಾಟಕ ಒಲಿಂಪಿಕ್ ಸಂಸ್ಥೆ ನೀಡುವ ಕೆಒಎ ಪ್ರಶಸ್ತಿಗೆ ಭಾಜನರಾಗಿದ್ದಾರೆ.ಮೂಡಬಿದರೆಯ ಆಳ್ವಾಸ್ ಶಿಕ್ಷಣ ಸಂಸ್ಥೆಯಲ್ಲಿ ವಿದ್ಯಾಭ್ಯಾಸ ಮಾಡಿರುವ ಬಿ.ಎನ್. ಉಷಾ ಅವರು ಈಗ ಕೇಂದ್ರ ಸರ್ಕಾರಿ ಸೇವೆಯಲ್ಲಿದ್ದಾರೆ.