ಸಂಗನಬಸವ ಶಾಲೆಯಲ್ಲಿ ಸರಸ್ವತಿ ಪೂಜೆ ಮೂಲಕ ಸ್ವಾಗತ

| Published : Jun 17 2024, 01:43 AM IST

ಸಾರಾಂಶ

ತಾಲೂಕಿನ ಕವಲಗಿಯ ಸಂಗನಬಸವ ವಸತಿ ಪದವಿ ಪೂರ್ವಕಾಲೇಜು ಹಾಗೂ ಸಂಗನಬಸವ ಅಂತಾರಾಷ್ಟ್ರೀಯ ವಸತಿ ಶಾಲೆಯಲ್ಲಿ 2024-25ನೇ ಶೈಕ್ಷಣಿಕ ವರ್ಷದ ಪ್ರಥಮ ಪಿ.ಯು.ಸಿ. ಮತ್ತು ಶಾಲಾ ವಿದ್ಯಾರ್ಥಿಗಳಿಗೆ ಸರಸ್ವತಿ ದೇವಿಯ ವಿಜೃಂಭಣೆಯ ಪೂಜೆಯೊಂದಿಗೆ ಶ್ರೀ ಸಿದ್ಧೇಶ್ವರ ಸಂಸ್ಥೆಯ ಚೇರಮನ್ ಬಸಯ್ಯ ಹೀರೇಮಠ ಹಾಗೂ ಶೈಲಜಾ ಬಸನಗೌಡ ಪಾಟೀಲ್ ಯತ್ನಾಳ ಮತ್ತು ಸಂಸ್ಥೆಯ ಎಲ್ಲ ಪದಾಧಿಕಾರಿಗಳ ಸಮ್ಮುಖದಲ್ಲಿ ಸ್ವಾಗತ ಕೋರಲಾಯಿತು.

ಕನ್ನಡಪ್ರಭ ವಾರ್ತೆ ವಿಜಯಪುರ

ತಾಲೂಕಿನ ಕವಲಗಿಯ ಸಂಗನಬಸವ ವಸತಿ ಪದವಿ ಪೂರ್ವಕಾಲೇಜು ಹಾಗೂ ಸಂಗನಬಸವ ಅಂತಾರಾಷ್ಟ್ರೀಯ ವಸತಿ ಶಾಲೆಯಲ್ಲಿ 2024-25ನೇ ಶೈಕ್ಷಣಿಕ ವರ್ಷದ ಪ್ರಥಮ ಪಿ.ಯು.ಸಿ. ಮತ್ತು ಶಾಲಾ ವಿದ್ಯಾರ್ಥಿಗಳಿಗೆ ಸರಸ್ವತಿ ದೇವಿಯ ವಿಜೃಂಭಣೆಯ ಪೂಜೆಯೊಂದಿಗೆ ಶ್ರೀ ಸಿದ್ಧೇಶ್ವರ ಸಂಸ್ಥೆಯ ಚೇರಮನ್‌ ಬಸಯ್ಯ ಹೀರೇಮಠ ಹಾಗೂ ಶೈಲಜಾ ಬಸನಗೌಡ ಪಾಟೀಲ್ ಯತ್ನಾಳ ಮತ್ತು ಸಂಸ್ಥೆಯ ಎಲ್ಲ ಪದಾಧಿಕಾರಿಗಳ ಸಮ್ಮುಖದಲ್ಲಿ ಸ್ವಾಗತ ಕೋರಲಾಯಿತು.

ಶೈಲಜಾ ಬಸನಗೌಡ ಪಾಟೀಲ್ ಅವರು ಶೈಕ್ಷಣಿಕ ವರ್ಷದ ಎಲ್ಲ ವಿದ್ಯಾರ್ಥಿಗಳಿಗೆ ಹಾಗೂ ಎಲ್ಲ ಶಿಕ್ಷಕರಿಗೆ ಶುಭ ಹಾರೈಸಿದರು.

ಸಂಸ್ಥೆಯ ಚೇರಮನ್‌ ಬಸಯ್ಯ ಹೀರೇಮಠ ಮಾತನಾಡಿ, ಎಲ್ಲ ಮಕ್ಕಳಿಗೆ ಹೊಸ ಶೈಕ್ಷಣಿಕ ವರ್ಷಕ್ಕೆ ಶುಭ ಹಾರೈಸಿ, ನಮ್ಮ ಸಂಸ್ಥೆ ಅಡಿಯಲ್ಲಿ ಸುಮಾರು ಶಾಲಾ ಕಾಲೇಜುಗಳು ಕಾರ್ಯ ನಿರ್ವಹಿಸುತ್ತಿದ್ದು, ನಗರ ಶಾಸಕ ಬಸನಗೌಡ ಪಾಟೀಲ್ ಯತ್ನಾಳ ಅವರು ಕೇಂದ್ರ ಮಂತ್ರಿಯಾಗಿದ್ದಾಗ, ಆಗಿನ ಪ್ರಧಾನಮಂತ್ರಿ ವಾಜಪೇಯಿ ಅವರ ಹೆಸರಲ್ಲಿ ಶಾಲೆಯೊಂದನ್ನು ತೆರೆದಿದ್ದಾರೆ ಎಂದು ನೆನಪಿಸಿದರು.

ಸಂಸ್ಥೆಯ ಉಪಾಧ್ಯಕ್ಷ ಸಂಗನಬಸಪ್ಪ ಸಜ್ಜನ ಮಾತನಾಡಿ, ನಮ್ಮ ಹೆಮ್ಮೆಯ ಇಬ್ಬರು ಪಾಚಾರ್ಯರ ಮಾರ್ಗದರ್ಶನದಲ್ಲಿ ಎಲ್ಲ ಶಿಕ್ಷಕರು ಹಾಗೂ ಪ್ರಿಯ ವಿದ್ಯಾರ್ಥಿಗಳು ಭಾವಿ ಭವಿಷ್ಯವನ್ನು ರೂಪಿಸಿಕೊಳ್ಳುತ್ತಿದ್ದಾರೆ ಎಂದರು.

ಕಾಲೇಜಿನ ಪ್ರಾಚಾರ್ಯ ಪ್ರೊ.ಹೇಮಂತಕೃಷ್ಣ ಮಾತನಾಡಿ, ಸಿದ್ಧೇಶ್ವರ ಸಂಸ್ಥೆಯ ಎಲ್ಲಾ ಅಂಗಸಂಸ್ಥೆಗಳ ಸವಿಸ್ತಾರ ಮಾಹಿತಿಯನ್ನು ನೀಡಿ, ವಿದ್ಯಾರ್ಥಿಗಳಿಗೆ ಶುಭ ಹಾರೈಸಿದರು. ಅದೇ ರೀತಿ ಸಂಗನಬಸವ ಅಂತಾರಾಷ್ಟ್ರೀಯ ವಸತಿ ಶಾಲೆಯ ಪ್ರಾಚಾರ್ಯೆ ಶರ್ಮಿಳಾ ಹೇಮಂತ್ ಮಾತನಾಡಿ, ಹೇಗೆ ಮಕ್ಕಳ ಸರ್ವತೋಮುಖ ಬೆಳವಣಿಗೆ ಸಾಧಿಸಿದ್ದೇವೆ ಎಂದು ಅಂಕಿ ಅಂಶಗಳೊಂದಿಗೆ ಮಾಹಿತಿ ನೀಡಿದರು.

ಕಾರ್ಯಕ್ರಮದಲ್ಲಿ ಶಿಕ್ಷಕ ಗುರುದೇವ ಹೋಳಿ, ವೈಶಾಲಿ ಶಿಲಿನ್, ಸೌಂದರ್ಯ ಹೀರೇಮಠ ಹಾಗೂ ಕಾಲೇಜಿನ ಎಲ್ಲಾ ಸಿಬ್ಬಂದಿ ವರ್ಗದವರು ಭಾಗವಹಿಸಿದ್ದರು.