ಪ್ರಥಮ ಪಿಯುಸಿ ವಿದ್ಯಾರ್ಥಿಗಳಿಗೆ ಸ್ವಾಗತ ದಿನದ ಕಾರ್ಯಕ್ರಮ

| Published : Jul 07 2025, 11:48 PM IST

ಪ್ರಥಮ ಪಿಯುಸಿ ವಿದ್ಯಾರ್ಥಿಗಳಿಗೆ ಸ್ವಾಗತ ದಿನದ ಕಾರ್ಯಕ್ರಮ
Share this Article
  • FB
  • TW
  • Linkdin
  • Email

ಸಾರಾಂಶ

ವಿವೇಕಾನಂದ ಪದವಿ ಪೂರ್ವ ಕಾಲೇಜಿನಲ್ಲಿ ಪ್ರಥಮ ಪಿಯುಸಿ ವಿದ್ಯಾರ್ಥಿಗಳಿಗೆ ಸ್ವಾಗತ ದಿನದ ಕಾರ್ಯಕ್ರಮ ನಡೆಯಿತು.

ಕನ್ನಡಪ್ರಭ ವಾರ್ತೆ ಕುಶಾಲನಗರ ಕುಶಾಲನಗರದ ವಿವೇಕಾನಂದ ಪದವಿ ಪೂರ್ವ ಕಾಲೇಜಿನಲ್ಲಿ ಪ್ರಥಮ ಪಿಯುಸಿ ವಿದ್ಯಾರ್ಥಿಗಳಿಗೆ ಸ್ವಾಗತ ದಿನದ ಕಾರ್ಯಕ್ರಮ ನಡೆಯಿತು. ಮುಖ್ಯ ಅತಿಥಿಗಳಾಗಿ ಬೆಂಗಳೂರಿನ ಜೈನ್ ಯುನಿವರ್ಸಿಟಿಯ ಭೌತಶಾಸ್ತ್ರ ಮತ್ತು ಎಲೆಕ್ಟ್ರಾನಿಕ್ಸ್ ವಿಭಾಗದ ಸಹಾಯಕ ಪ್ರಾಧ್ಯಾಪಕರಾದ ಡಾ ಎಂ ಚೇತನ್ ಮಾತನಾಡಿ, ವಿದ್ಯಾರ್ಥಿಗಳು ಜೀವನದಲ್ಲಿ ಗುರಿಯನ್ನು ಇಟ್ಟುಕೊಂಡು ಸಮಾಜದ ಮುಖ್ಯ ವಾಹಿನಿಯಲ್ಲಿ ತೊಡಗಿಸಿಕೊಳ್ಳಬೇಕು. ಮೊಬೈಲನ್ನು ಸಕಾರಾತ್ಮಕವಾಗಿ ಒಳ್ಳೆಯ ಉದ್ದೇಶಕ್ಕಾಗಿ ಮಾತ್ರ ಬಳಸುವಂತೆ ಕಿವಿಮಾತು ಹೇಳಿದರು. ಸ್ವಾಮಿ ವಿವೇಕಾನಂದರ ಧ್ಯೇಯ ವಾಕ್ಯವನ್ನು ಉಲ್ಲೇಖಿಸುತ್ತಾ ವಿದ್ಯಾರ್ಥಿಗಳಲ್ಲಿ ಹುದುಗಿರುವ ಪ್ರತಿಭೆಗಳನ್ನು ಗುರುತಿಸಿ ಅದನ್ನು ಒಂದು ತಪಸ್ಸಿನಂತೆ ರೂಪಿಸಬೇಕೆಂದು ಕರೆ ನೀಡಿದರು.ಗುರು ಹಿರಿಯರು ಪೋಷಕರನ್ನು ಗೌರವದಿಂದ ಕಾಣಬೇಕೆಂದು ಸಲಹೆ ನೀಡಿದರು. ಇದೇ ಸಂದರ್ಭದಲ್ಲಿ ವಿದ್ಯಾರ್ಥಿ ಸಂಘದ ಪದಗ್ರಹಣ ಕಾರ್ಯಕ್ರಮ ನೆರವೇರಿತು. ಕಳೆದ ಶೈಕ್ಷಣಿಕ ಸಾಲಿನಲ್ಲಿ ಉತ್ತಮ ಶ್ರೇಣಿಯನ್ನು ಪಡೆದ ವಿದ್ಯಾರ್ಥಿಗಳನ್ನು ಸನ್ಮಾನಿಸಲಾಯಿತು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಸಂಸ್ಥೆಯ ಅಧ್ಯಕ್ಷರಾದ ಎನ್ ಎನ್ ಶಂಬುಲಿಂಗಪ್ಪ ವಹಿಸಿ ವಿದ್ಯಾರ್ಥಿಗಳು ಉತ್ತಮ ಶಿಕ್ಷಣ ಪಡೆಯುವ ಮೂಲಕ ಪೋಷಕರಿಗೆ ಮತ್ತು ಕಲಿತ ಸಂಸ್ಥೆಗೆ ಖ್ಯಾತಿ ತರುವಂತಾಗಬೇಕು ಎಂದು ಹಿತವಚನ ನೀಡಿದರು. ಕಾಲೇಜಿನ ಪ್ರಾಂಶುಪಾಲೆ ಕ್ಲಾರಾ ರೇಷ್ಮಾ ಸ್ವಾಗತಿಸಿದರು. ನಂತರ ವರ್ಣ ರಂಜಿತ ಸಾಂಸ್ಕೃತಿಕ ಕಾರ್ಯಕ್ರಮದಲ್ಲಿ ವಿದ್ಯಾರ್ಥಿಗಳು ಪಾಲ್ಗೊಂಡರು .ಕಾರ್ಯಕ್ರಮದಲ್ಲಿ ಸಂಸ್ಥೆಯ ಖಜಾಂಚಿ ನಂಜಪ್ಪ ಹಾಗೂ ಆಡಳಿತಾಧಿಕಾರಿ ಮಹೇಶ್, ಉಪನ್ಯಾಸಕ ವೃಂದ, ಪೋಷಕರು, ಉಪಸ್ಥಿತರಿದ್ದರು.