ಸಾರಾಂಶ
ಸಂವಿಧಾನ ಶಿಲ್ಪಿ ಡಾ.ಬಿ.ಆರ್.ಅಂಬೇಡ್ಕರ್ ನಿಪ್ಪಾಣಿಗೆ ಭೇಟಿ ಕೊಟ್ಟು 100 ವರ್ಷ ತುಂಬುತ್ತಿರುವ ಹಿನ್ನೆಲೆಯಲ್ಲಿ ಬೆಂಗಳೂರಿನಿಂದ ನಿಪ್ಪಾಣಿವರೆಗೆ ತೆರಳುತ್ತಿರುವ ರಥಯಾತ್ರೆಗೆ ಶನಿವಾರ ನಗರದ ಹೊರವಲಯದಲ್ಲಿ ಭವ್ಯ ಸ್ವಾಗತ ಕೋರಲಾಯಿತು.
ರಾಣಿಬೆನ್ನೂರು: ಸಂವಿಧಾನ ಶಿಲ್ಪಿ ಡಾ.ಬಿ.ಆರ್.ಅಂಬೇಡ್ಕರ್ ನಿಪ್ಪಾಣಿಗೆ ಭೇಟಿ ಕೊಟ್ಟು 100 ವರ್ಷ ತುಂಬುತ್ತಿರುವ ಹಿನ್ನೆಲೆಯಲ್ಲಿ ಬೆಂಗಳೂರಿನಿಂದ ನಿಪ್ಪಾಣಿವರೆಗೆ ತೆರಳುತ್ತಿರುವ ರಥಯಾತ್ರೆಗೆ ಶನಿವಾರ ನಗರದ ಹೊರವಲಯದಲ್ಲಿ ಭವ್ಯ ಸ್ವಾಗತ ಕೋರಲಾಯಿತು.
ನಂತರ ರಥಯಾತ್ರೆಯೊಂದಿಗೆ ನಗರದ ಸ್ಟೇಷನ್ ರಸ್ತೆಯ ಭಾರತೀಯ ಜನತಾ ಪಕ್ಷದ ಕಚೇರಿವರೆಗೆ ಬೈಕ್ ರ‍್ಯಾಲಿ ನಡೆಸಲಾಯಿತು.
ಈ ಸಮಯದಲ್ಲಿ ಬಿಜೆಪಿ ಜಿಲ್ಲಾಧ್ಯಕ್ಷ ಹಾಗೂ ಮಾಜಿ ಶಾಸಕ ಅರುಣಕುಮಾರ ಪೂಜಾರ ಮಾತನಾಡಿ, ಡಾ. ಬಾಬಾ ಸಾಹೇಬ ಅಂಬೇಡ್ಕರ್ ಶೋಷಿತ ವರ್ಗಗಳ ಧ್ವನಿಯಾಗಿದ್ದರು. ಭಾರತೀಯ ಜನತಾ ಪಕ್ಷ ಕೇಂದ್ರದಲ್ಲಿ ಅಧಿಕಾರಕ್ಕೆ ಬಂದ ನಂತರ ಅಂಬೇಡ್ಕರ್ ಅವರಿಗೆ ಭಾರತ ರತ್ನ ಪ್ರಶಸ್ತಿ ನೀಡಿತು ಎಂದರು.
ಕೋಲಾರದ ಮಾಜಿ ಸಂಸದ ಮುನಿಯಪ್ಪ, ನವೀನ ಕೋಟಗಿ, ಬಿಜೆಪಿ ರಾಜ್ಯ ಉಪಾಧ್ಯಕ್ಷ ಡಾ. ಬಸವರಾಜ ಕೇಲಗಾರ, ಗ್ರಾಮೀಣ ಘಟಕದ ಅಧ್ಯಕ್ಷ ಪರಮೇಶ ಗೂಳಣ್ಣನವರ, ಶಹರ ಘಟಕದ ಅಧ್ಯಕ್ಷ ರಮೇಶ ಗುತ್ತಲ, ನಗರಸಭೆ ಸದಸ್ಯರುಗಳಾದ ಪ್ರಕಾಶ ಪೂಜಾರ, ಗಂಗಮ್ಮ ಹಾವನೂರ, ಮಂಜುಳಾ ಹತ್ತಿ, ಜಿಪಂ ಮಾಜಿ ಅಧ್ಯಕ್ಷ ಮಂಜುನಾಥ ಓಲೇಕಾರ, ಮಾಜಿ ಸದಸ್ಯೆ ಮಂಗಳಗೌರಿ ಪೂಜಾರ, ಮೈಲಪ್ಪ ಗೋಣಿಬಸಮ್ಮನವರ, ಗೀತಾ ಜಂಬಗಿ, ಗದಿಗೆಪ್ಪ ಹೊಟ್ಟಿಗೌಡ್ರ, ಎ.ಬಿ. ಪಾಟೀಲ, ಅಮೋಘ ಬದಾಮಿ ಸೇರಿದಂತೆ ಪಕ್ಷದ ಮುಖಂಡರುಗಳು, ಕಾರ್ಯಕರ್ತರು ರಥಯಾತ್ರೆಯಲ್ಲಿ ಪಾಲ್ಗೊಂಡಿದ್ದರು.