ಸಾರಾಂಶ
ಜಿಎಂಎಸ್ ಅಕಾಡೆಮಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಬಿಸಿಎ ಪ್ರಥಮ ವರ್ಷಕ್ಕೆ ಪಾದಾರ್ಪಣೆ ಮಾಡಿರುವ ವಿದ್ಯಾರ್ಥಿಗಳನ್ನು ಅಂತಿಮ ವರ್ಷದ ವಿದ್ಯಾರ್ಥಿಗಳು ಕ್ರೀಡಾ ಚಟುವಟಿಕೆ, ವಿವಿಧ ಸ್ಪರ್ಧೆ, ಪ್ರತಿಭಾ ಪ್ರದರ್ಶನ, ಮಾದರಿ ಪ್ರದರ್ಶನ, ಹಾಡು, ನೃತ್ಯಗಳ ಮೂಲಕ ಮನರಂಜಿಸಿ, ಸಂಭ್ರಮದಿಂದ ಸ್ವಾಗತಿಸಿದ್ದಾರೆ.
- ಜಿಎಂಎಸ್ ಅಕಾಡೆಮಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಸಂಭ್ರಮ - - - ಕನ್ನಡಪ್ರಭ ವಾರ್ತೆ ದಾವಣಗೆರೆ ಜಿಎಂಎಸ್ ಅಕಾಡೆಮಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಬಿಸಿಎ ಪ್ರಥಮ ವರ್ಷಕ್ಕೆ ಪಾದಾರ್ಪಣೆ ಮಾಡಿರುವ ವಿದ್ಯಾರ್ಥಿಗಳನ್ನು ಅಂತಿಮ ವರ್ಷದ ವಿದ್ಯಾರ್ಥಿಗಳು ಕ್ರೀಡಾ ಚಟುವಟಿಕೆ, ವಿವಿಧ ಸ್ಪರ್ಧೆ, ಪ್ರತಿಭಾ ಪ್ರದರ್ಶನ, ಮಾದರಿ ಪ್ರದರ್ಶನ, ಹಾಡು, ನೃತ್ಯಗಳ ಮೂಲಕ ಮನರಂಜಿಸಿ, ಸಂಭ್ರಮದಿಂದ ಸ್ವಾಗತಿಸಿದರು.
ಮಂಗಳವಾರ ಪರಿಚಯ-4.0 ಹೆಸರಿನ ವಿಶೇಷ ಕಾರ್ಯಕ್ರಮ ಮುಖಾಂತರ ಪ್ರಥಮ ವರ್ಷದ ವಿದ್ಯಾರ್ಥಿಗಳನ್ನು ಅಂತಿಮ ವರ್ಷದ ವಿದ್ಯಾರ್ಥಿಗಳು ಪರಿಚಯ ಮಾಡಿಕೊಂಡರು. ಅಲ್ಲದೇ, ಪ್ರಥಮ ವರ್ಷದ ವಿದ್ಯಾರ್ಥಿಗಳಿಗೂ ಹಾಡು, ನೃತ್ಯದ ಕಲೆ ಪ್ರದರ್ಶನ, ಫ್ಯಾಷನ್ ಶೋಗೆ ವೇದಿಕೆ ಕೊಟ್ಟಿದ್ದರು. ಅಂತಿಮ ವರ್ಷದ ವಿದ್ಯಾರ್ಥಿಗಳು ತಾವು ಸಹ ಹಾಡು, ನೃತ್ಯದ ಮೂಲಕ ಫ್ರೆಷರ್ಸ್ ಅನ್ನು ಮನರಂಜಿಸಿ ಸ್ವಾಗತಿಸಿದರು.ಇದಕ್ಕೂ ಮುನ್ನ ಬಿಸಿಎ ವ್ಯಾಸಂಗಕ್ಕೆ ಸಂಬಂಧಿಸಿದ ಮಾದರಿಗಳ ಪ್ರದರ್ಶನ ಹಮ್ಮಿಕೊಳ್ಳಲಾಗಿತ್ತು. ಮಿಸ್ಟರ್ ಅಂಡ್ ಮಿಸ್ಟರ್ಸ್ ಫ್ರೆಷರ್ಸ್ ಸ್ಪರ್ಧೆ ಸೇರಿದಂತೆ ವಿವಿಧ ಸ್ಪರ್ಧೆ ಮತ್ತು ಕ್ರೀಡೆಗಳನ್ನು ನಡೆಸಲಾಯಿತು.
ಫ್ಯಾಕಲ್ಟಿ ಆಫ್ ಕಂಪ್ಯೂಟಿಂಗ್ ಅಂಡ್ ಐಟಿ ವಿಭಾಗದ ಡೀನ್ ಡಾ.ಶ್ವೇತಾ ಮರಿಗೌಡರ್ ಮಾತನಾಡಿ, ಪ್ರತಿ ವರ್ಷದಂತೆ ಈ ವರ್ಷವೂ ಪರಿಚಯ ಹೆಸರಿನ ಕಾರ್ಯಕ್ರಮ ಮೂಲಕ ಅಂತಿಮ ವರ್ಷದ ವಿದ್ಯಾರ್ಥಿಗಳು ಕಿರಿಯ ವಿದ್ಯಾರ್ಥಿಗಳನ್ನು ಸ್ವಾಗತಿಸುವ ಸಂಪ್ರದಾಯ ಹುಟ್ಟುಹಾಕಲಾಗಿದೆ. ವಿದ್ಯಾರ್ಥಿಗಳಿಂದ ವಿದ್ಯಾರ್ಥಿಗಳಿಗಾಗಿ ಇರುವ ಈ ಕಾರ್ಯಕ್ರಮವು ವಿದ್ಯಾರ್ಥಿಗಳ ನಡುವೆ ಸ್ನೇಹ ಸಂಬಂಧ ವೃದ್ಧಿಸಲು ಸಾಧ್ಯವಾಗುತ್ತದೆ ಎಂದರು.ವಿವಿಧ ವಿಷಯಗಳ ಉಪನ್ಯಾಸಕರು, ವಿದ್ಯಾರ್ಥಿಗಳು ಭಾಗವಹಿಸಿದ್ದರು.
- - - -17ಕೆಡಿವಿಜಿ35:ದಾವಣಗೆರೆಯ ಜಿಎಂಎಸ್ ಕಾಡೆಮಿ ಕಾಲೇಜಿನಲ್ಲಿ ಜ್ಯೂನಿಯರ್ ವಿದ್ಯಾರ್ಥಿಗಳಿಗೆ ವಿಶೇಷವಾಗಿ ಸೀನಿಯರ್ ವಿದ್ಯಾರ್ಥಿಗಳಿಂದ ಸ್ವಾಗತ ಕಾರ್ಯಕ್ರಮ ನಡೆಯಿತು.