ಸಾರಾಂಶ
ಚುನಾವಣಾ ನೀತಿ ಸಂಹಿತೆ ಹಿನ್ನೆಲೆಯಲ್ಲಿ ಸರಳವಾಗಿ ಅಧಿಕಾರಿಗಳು ರಥವನ್ನು ಸ್ವಾಗತಿಸಿದರು.
ಕನ್ನಡಪ್ರಭ ವಾರ್ತೆ ಮಂಗಳೂರು
ರಾಜ್ಯಕ್ಕೆ ಕರ್ನಾಟಕ ಹೆಸರು ನಾಮಕರಣವಾಗಿ 50 ವರ್ಷ ಪೂರೈಸಿದ ಹಿನ್ನೆಲೆಯಲ್ಲಿ ಸುವರ್ಣ ಕರ್ನಾಟಕ ಸಂಭ್ರಮದ ಸಲುವಾಗಿ ರಥಯಾತ್ರೆ ಕಳೆದ ನವೆಂಬರ್ 1ರಿಂದ ರಾಜ್ಯಾದ್ಯಂತ ಪ್ರತಿ ಜಿಲ್ಲೆ ಹಾಗೂ ತಾಲೂಕುಗಳಲ್ಲಿ ಸಂಚರಿಸುತ್ತಿದ್ದು, ಗುರುವಾರ ಈ ರಥವು ನಗರದ ಕುದ್ಮುಲ್ ರಂಗರಾವ್ ಪುರಭವನಕ್ಕೆ ಆಗಮಿಸಿತು.ಚುನಾವಣಾ ನೀತಿ ಸಂಹಿತೆ ಹಿನ್ನೆಲೆಯಲ್ಲಿ ಸರಳವಾಗಿ ಅಧಿಕಾರಿಗಳು ರಥವನ್ನು ಸ್ವಾಗತಿಸಿದರು.
ಮಹಾನಗರ ಪಾಲಿಕೆ ಆಯುಕ್ತ ಸಿ.ಎಲ್. ಆನಂದ್, ಮಂಗಳೂರು ನಗರ ಪೊಲೀಸ್ ಅಧೀಕ್ಷಕ ಯತೀಶ್, ಮಂಗಳೂರು ಉಪವಿಭಾಗಾಧಿಕಾರಿ ಹರ್ಷವರ್ಧನ್, ತಹಸೀಲ್ದಾರ್ ಪ್ರಶಾಂತ್ ಪಾಟೀಲ್, ತಾಲೂಕು ಆರೋಗ್ಯಾಧಿಕಾರಿ ಸುಜಯ್ ಭಂಡಾರಿ, ಮಂಗಳೂರು ತಾಲೂಕು ಪಂಚಾಯ್ತಿ ಕಾರ್ಯ ನಿರ್ವಹಣಾಧಿಕಾರಿ ಮಹೇಶ್, ಕನ್ನಡ ಸಾಹಿತ್ಯ ಪರಿಷತ್ ಮಂಗಳೂರು ತಾಲೂಕು ಅಧ್ಯಕ್ಷ ರೇವಣ್ಕರ್, ರಾಜ್ಯ ಕನ್ನಡ ಸಾಹಿತ್ಯ ಪರಿಷತ್ತು ಮಾಜಿ ಅಧ್ಯಕ್ಷ ಹರಿಕೃಷ್ಣ ಪುನರೂರು, ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಾಯಕ ನಿರ್ದೇಶಕ ರಾಜೇಶ್ ಜಿ., ಸಾಹಿತಿಗಳು, ವಿವಿಧ ಇಲಾಖೆಯ ಅಧಿಕಾರಿಗಳು ರಥವನ್ನು ಸ್ವಾಗತಿಸಿದರು.;Resize=(128,128))
;Resize=(128,128))