ಕಾಂಗ್ರೆಸ್‌ ತತ್ವ, ಸಿದ್ಧಾಂತ ಮೆಚ್ಚಿ ಸೇರಿದವರಗೆ ಸ್ವಾಗತ

| Published : Apr 25 2024, 01:01 AM IST

ಕಾಂಗ್ರೆಸ್‌ ತತ್ವ, ಸಿದ್ಧಾಂತ ಮೆಚ್ಚಿ ಸೇರಿದವರಗೆ ಸ್ವಾಗತ
Share this Article
  • FB
  • TW
  • Linkdin
  • Email

ಸಾರಾಂಶ

ದಾಬಸ್‌ಪೇಟೆ: ಕಾಂಗ್ರೆಸ್ ಪಕ್ಷದಲ್ಲಿ ಎಲ್ಲರಿಗೂ ಸಮಾನ ಅವಕಾಶವಿದ್ದು, ನಮ್ಮ ಶಾಸಕರ ಅಭಿವೃದ್ಧಿ ಕಾರ್ಯಗಳನ್ನು ಮೆಚ್ಚಿ ಪ್ರತಿದಿನ ಅನ್ಯಪಕ್ಷಗಳನ್ನು ತೊರೆದು ಕಾಂಗ್ರೆಸ್ ಪಕ್ಷಕ್ಕೆ ಸೇರ್ಪಡೆಯಾಗುತ್ತಿರುವವರ ಸಂಖ್ಯೆ ಹೆಚ್ಚಾಗುತ್ತಿದೆ ಎಂದು ಗ್ರಾಪಂ ಮಾಜಿ ಅಧ್ಯಕ್ಷ, ಕಾಂಗ್ರೆಸ್ ಮುಖಂಡ ಅಗಳಕುಪ್ಪೆ ಗೋವಿಂದರಾಜು ಹೇಳಿದರು.

ದಾಬಸ್‌ಪೇಟೆ: ಕಾಂಗ್ರೆಸ್ ಪಕ್ಷದಲ್ಲಿ ಎಲ್ಲರಿಗೂ ಸಮಾನ ಅವಕಾಶವಿದ್ದು, ನಮ್ಮ ಶಾಸಕರ ಅಭಿವೃದ್ಧಿ ಕಾರ್ಯಗಳನ್ನು ಮೆಚ್ಚಿ ಪ್ರತಿದಿನ ಅನ್ಯಪಕ್ಷಗಳನ್ನು ತೊರೆದು ಕಾಂಗ್ರೆಸ್ ಪಕ್ಷಕ್ಕೆ ಸೇರ್ಪಡೆಯಾಗುತ್ತಿರುವವರ ಸಂಖ್ಯೆ ಹೆಚ್ಚಾಗುತ್ತಿದೆ ಎಂದು ಗ್ರಾಪಂ ಮಾಜಿ ಅಧ್ಯಕ್ಷ, ಕಾಂಗ್ರೆಸ್ ಮುಖಂಡ ಅಗಳಕುಪ್ಪೆ ಗೋವಿಂದರಾಜು ಹೇಳಿದರು. ಪಕ್ಷ ಸೇರ್ಪಡೆ ಕಾರ್ಯಕ್ರಮದಲ್ಲಿ ಜೆಡಿಎಸ್ ತೊರೆದು ಕಾಂಗ್ರೆಸ್‌ಗೆ ಸೇರ್ಪಡೆಯಾದ ಮುಖಂಡರನ್ನು ಸ್ವಾಗತಿಸಿ ಮಾತನಾಡಿ, ಎಲ್ಲರೂ ತಮ್ಮ ತಮ್ಮ ಬೂತುಗಳಿಗೆ ತಾವೇ ಮುಖಂಡರಾಗಿ ಕಾಂಗ್ರೆಸ್ ಅಭ್ಯರ್ಥಿಯನ್ನು ಗೆಲ್ಲಿಸಬೇಕೆಂದು ಮನವಿ ಮಾಡಿದರು. ಗ್ರಾಪಂ ಅಧ್ಯಕ್ಷ ರಾಮಾಂಜನೇಯ ಹಾಜರಿದ್ದರು. ನರಸೀಪುರ ಗ್ರಾಪಂ ವ್ಯಾಪ್ತಿಯ ಜೆಡಿಎಸ್ ಮುಖಂಡರಾದ ಮಹಮ್ಮದ್ ಮುಸ್ತಫಾ, ಸಾಧಿಕ್ ಪಾಷಾ, ಶಾಜೀದ್, ಮುಸರತ್ ಪಾಷಾ ಸೇರಿ 30ಕ್ಕೂ ಹೆಚ್ಚು ಮುಸ್ಲಿಂ ಮುಖಂಡರು ಕಾಂಗ್ರೆಸ್ ಪಕ್ಷಕ್ಕೆ ಸೇರ್ಪಡೆಯಾದರು.