ಸಾರಾಂಶ
ಕಾಲೇಜಿನ ಪ್ರಾಂಶುಪಾಲೆ ಡಾ.ಮಮತಾ ಕೆ. ವಿ. ಅವರು ಹೊಸ ವಿದ್ಯಾರ್ಥಿಗಳಿಗೆ ಕ್ವಾಲಿಟಿ ಕೌನ್ಸಿಲ್ ಆಫ್ ಇಂಡಿಯಾದಿಂದ ಖಾಸಗಿ ಆಯುರ್ವೇದ ಕಾಲೇಜುಗಳಲ್ಲಿ ದೇಶದಲ್ಲೇ ಮೊದಲ ಸ್ಥಾನ ಗಳಿಸಿದ ಈ ಕಾಲೇಜಿನ ಗುಣಮಟ್ಟ ಉಳಿಸಿ ಬೆಳೆಸುವಲ್ಲಿ ನಿಮ್ಮ ಪಾತ್ರ ಮಹತ್ತರವಾದುದು ಎಂದರು.
ಕನ್ನಡಪ್ರಭ ವಾರ್ತೆ ಉಡುಪಿ
ಇಲ್ಲಿನ ಕುತ್ಪಾಡಿಯ ಎಸ್.ಡಿ.ಎಂ. ಆಯುರ್ವೇದ ಕಾಲೇಜು, ಆಸ್ಪತ್ರೆ ಮತ್ತು ಸಂಶೋಧನಾ ಕೇಂದ್ರದಲ್ಲಿ ಆಂತರಿಕ ಗುಣಮಟ್ಟದ ಭರವಸೆಯ ಕೋಶ ಹಾಗೂ ಪಿ.ಜಿ ಮತ್ತು ಪಿಎಚ್. ಡಿ. ವಿಭಾಗದ ವತಿಯಿಂದ ‘ಸಂಸ್ಕಾರ’ ಸ್ವಾಗತ ಸಮಾರಂಭ ಹಮ್ಮಿಕೊಳ್ಳಲಾಯಿತು.ಈ ಕಾರ್ಯಕ್ರಮದಲ್ಲಿ 2024-25ರ ಹೊಸ ಸ್ನಾತಕೋತ್ತರ ವಿದ್ಯಾರ್ಥಿಗಳನ್ನು ಸ್ವಾಗತಿಸಿ ಕಾಲೇಜಿನ ವಿವಿಧ ಸೌಲಭ್ಯಗಳನ್ನು ಹಾಗೂ ಸ್ನಾತಕೋತ್ತರ ವಿದ್ಯಾರ್ಜನೆಯ ಸಮಯದಲ್ಲಿ ನಡೆಯುವ ವಿವಿಧ ಚಟುವಟಿಕೆಗಳ ಬಗ್ಗೆ ಪರಿಚಯಿಸಲಾಯಿತು.
ಅಧ್ಯಕ್ಷತೆ ವಹಿಸಿದ್ದ ಕಾಲೇಜಿನ ಪ್ರಾಂಶುಪಾಲೆ ಡಾ.ಮಮತಾ ಕೆ. ವಿ. ಅವರು ಹೊಸ ವಿದ್ಯಾರ್ಥಿಗಳಿಗೆ ಕ್ವಾಲಿಟಿ ಕೌನ್ಸಿಲ್ ಆಫ್ ಇಂಡಿಯಾದಿಂದ ಖಾಸಗಿ ಆಯುರ್ವೇದ ಕಾಲೇಜುಗಳಲ್ಲಿ ದೇಶದಲ್ಲೇ ಮೊದಲ ಸ್ಥಾನ ಗಳಿಸಿದ ಈ ಕಾಲೇಜಿನ ಗುಣಮಟ್ಟ ಉಳಿಸಿ ಬೆಳೆಸುವಲ್ಲಿ ನಿಮ್ಮ ಪಾತ್ರ ಮಹತ್ತರವಾದದ್ದು, ಹಾಗಾಗಿ ಕಾಲೇಜಿನ ಎಲ್ಲ ಮೂಲ ಸೌಕರ್ಯಗಳನ್ನು ಚೆನ್ನಾಗಿ ಉಪಯೋಗಿಸಿ ಮುಂಬರುವ ದಿನಗಳಲ್ಲಿ ಉತ್ತಮ ಗುಣಮಟ್ಟದ ತಜ್ಞ ವೈದ್ಯರಾಗಿ, ಸಂಶೋಧಕರಾಗಿ, ವಾಣಿಜ್ಯೋದ್ಯಮಿಗಳಾಗಿ, ಸಮಾಜದ ವಿವಿಧ ಕ್ಷೇತ್ರಗಳಲ್ಲಿ ಸೇವೆಯನ್ನು ನೀಡುವಂತವರಾಗಬೇಕು ಎಂದು ಕರೆ ನೀಡಿದರು.ಆಸ್ಪತ್ರೆಯ ವೈದ್ಯಕೀಯ ಅಧೀಕ್ಷಕ ಡಾ.ನಾಗರಾಜ್ .ಎಸ್., ಆಡಳಿತ ವಿಭಾಗದ ಮುಖ್ಯಸ್ಥ ಡಾ.ವೀರಕುಮಾರ್ ಹಾಗೂ ಪಿ.ಜಿ ಮತ್ತು ಪಿಎಚ್‌ಡಿ ವಿಭಾಗದ ಡೀನ್ ಡಾ.ಆಶೊಕ್ ಕುಮಾರ್ ಬಿ.ಎನ್. ಹಾಜರಿದ್ದರು.
ರೋಗನಿಧಾನ ವಿಭಾಗದ ಸಹಪ್ರಾಧ್ಯಾಪಕ ಡಾ.ಅರುಣ್ ಕುಮಾರ್ ಸ್ವಾಗತಿಸಿದರು. ಕಾರ್ಯಕ್ರಮದ ಸಂಯೋಜಕಿ ಬಾಲರೋಗ ವಿಭಾಗದ ಸಹಪ್ರಾಧ್ಯಾಪಕಿ ಡಾ.ಸಹನಾ ಶಂಕರಿ ಅವರು ವಂದಿಸಿದರು. ಸ್ವಸ್ಥವೃತ್ತ ವಿಭಾಗದ ಸಹಾಯಕ ಪ್ರಾಧ್ಯಾಪಕಿ ಡಾ.ಸೌಮ್ಯ ಭಟ್ ನಿರೂಪಿಸಿದರು.;Resize=(128,128))
;Resize=(128,128))
;Resize=(128,128))
;Resize=(128,128))
;Resize=(128,128))