ಕ್ರಿಯೇಟಿವ್ ಕಾಲೇಜಿನಲ್ಲಿ ಸ್ವಾಸ್ಥ್ಯ ಸಂಕಲ್ಪ ಕಾರ್ಯಕ್ರಮ

| Published : Sep 15 2025, 01:01 AM IST

ಕ್ರಿಯೇಟಿವ್ ಕಾಲೇಜಿನಲ್ಲಿ ಸ್ವಾಸ್ಥ್ಯ ಸಂಕಲ್ಪ ಕಾರ್ಯಕ್ರಮ
Share this Article
  • FB
  • TW
  • Linkdin
  • Email

ಸಾರಾಂಶ

ಕಾರ್ಕಳ ಕ್ರಿಯೇಟಿವ್ ಪದವಿ ಪೂರ್ವ ಕಾಲೇಜು ಹಾಗೂ ಅಖಿಲ ಕರ್ನಾಟಕ ಜನಜಾಗೃತಿ ವೇದಿಕೆ ಕಾರ್ಕಳ ತಾಲೂಕು ಸಂಯುಕ್ತ ಆಶ್ರಯದಲ್ಲಿ ಕಾಲೇಜಿನ ಸಪ್ತಸ್ವರ ವೇದಿಕೆಯಲ್ಲಿ ಶುಕ್ರವಾರ ‘ಸ್ವಾಸ್ಥ್ಯ ಸಂಕಲ್ಪ ಕಾರ್ಯಕ್ರಮ’ ನಡೆಯಿತು.

ಕನ್ನಡಪ್ರಭ ವಾರ್ತೆ ಕಾರ್ಕಳ

ಇಲ್ಲಿನ ಕ್ರಿಯೇಟಿವ್ ಪದವಿ ಪೂರ್ವ ಕಾಲೇಜು ಹಾಗೂ ಅಖಿಲ ಕರ್ನಾಟಕ ಜನಜಾಗೃತಿ ವೇದಿಕೆ ಕಾರ್ಕಳ ತಾಲೂಕು ಸಂಯುಕ್ತ ಆಶ್ರಯದಲ್ಲಿ ಕಾಲೇಜಿನ ಸಪ್ತಸ್ವರ ವೇದಿಕೆಯಲ್ಲಿ ಶುಕ್ರವಾರ ‘ಸ್ವಾಸ್ಥ್ಯ ಸಂಕಲ್ಪ ಕಾರ್ಯಕ್ರಮ’ ನಡೆಯಿತು.ತಾಲೂಕು ಜನಜಾಗೃತಿ ವೇದಿಕೆ ಸದಸ್ಯ ಸಂತೋಷ್ ಶೆಟ್ಟಿ ಉದ್ಘಾಟಿಸಿ ಮಾತನಾಡಿ, ಸಮಾಜದ ಪ್ರಗತಿ ಆರೋಗ್ಯದಲ್ಲಿ ಅಡಗಿದೆ. ಆರೋಗ್ಯದ ಅರಿವು ಬೆಳೆಯಲು ಜಾಗೃತಿ ಅತ್ಯವಶ್ಯಕ ಎಂದರು.ಸಂಪನ್ಮೂಲ ವ್ಯಕ್ತಿಗಳಾಗಿ ಆಗಮಿಸಿದ ಅಖಿಲ ಕರ್ನಾಟಕ ಜನಜಾಗೃತಿ ವೇದಿಕೆ ಉಡುಪಿಯ ಯೋಜನಾಧಿಕಾರಿ ಗಣೇಶ್ ಆಚಾರ್ಯ ಮಾತನಾಡಿ, ಆರೋಗ್ಯದ ಅರಿವು ಮೂಡಿದಾಗ ಮಾತ್ರ ಸಮಾಜ ಶ್ರೇಯೋಭಿವೃದ್ಧಿಯ ಹಾದಿ ಹಿಡಿಯುತ್ತದೆ ಎಂದು ತಿಳಿಸಿ, ಪ್ರತಿಜ್ಞಾವಿಧಿ ಬೋಧಿಸಿದರು.ಕ್ರಿಯೇಟಿವ್ ಶಿಕ್ಷಣ ಪ್ರತಿಷ್ಠಾನದ ಸಹ ಸಂಸ್ಥಾಪಕ ಡಾ. ಬಿ.ಗಣನಾಥ ಶೆಟ್ಟಿ ಅಧ್ಯಕ್ಷತೆ ವಹಿಸಿ ಮಾತನಾಡಿದರು.ಈ ಸಂದರ್ಭ ತಾಲೂಕು ಜನಜಾಗೃತಿ ವೇದಿಕೆ ಸದಸ್ಯ ಕರುಣಾಕರ ಕಡಂಬ, ವಾಸು ಶೆಟ್ಟಿ, ಹಿರ್ಗಾನ ಒಕ್ಕೂಟ ಅಧ್ಯಕ್ಷ ಸುಭಾಷ್, ಉಪಸ್ಥಿತರಿದ್ದರು.ಬೋಧಕ-ಬೋಧಕೇತರ ವರ್ಗದವರು, ವಿದ್ಯಾರ್ಥಿ-ವಿದ್ಯಾರ್ಥಿನಿಯರು ಕಾರ್ಯಕ್ರಮದಲ್ಲಿ ಪಾಲ್ಗೊಂಡಿದ್ದರು. ಕನ್ನಡ ಉಪನ್ಯಾಸಕಿ ಪ್ರಿಯಾಂಕಾ ತೀರ್ಥರಾಮ ಕಾರ್ಯಕ್ರಮ ನಿರೂಪಿಸಿದರು. ವಾಸು ಶೆಟ್ಟಿ ವಂದಿಸಿದರು.