ಚುನಾವಣಾ ಆಯೋಗ ಕರ್ನಾಟಕ ಪಶ್ಚಿಮ ಪದವೀಧರರ ಮತಕ್ಷೇತ್ರದ ಚುನಾವಣೆ ವೇಳಾಪಟ್ಟಿ ಪ್ರಕಟಿಸಿದ್ದು, ಜಿಲ್ಲಾದ್ಯಂತ ಮಂಗಳವಾರದಿಂದಲೇ ಮಾದರಿ ನೀತಿ ಸಂಹಿತೆ ಜಾರಿಯಲ್ಲಿದೆ ಎಂದು ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ಚುನಾವಣಾಧಿಕಾರಿ ಡಾ. ವಿಜಯಮಹಾಂತೇಶ ದಾನಮ್ಮನವರ ತಿಳಿಸಿದ್ದಾರೆ.

ಹಾವೇರಿ: ಚುನಾವಣಾ ಆಯೋಗ ಕರ್ನಾಟಕ ಪಶ್ಚಿಮ ಪದವೀಧರರ ಮತಕ್ಷೇತ್ರದ ಚುನಾವಣೆ ವೇಳಾಪಟ್ಟಿ ಪ್ರಕಟಿಸಿದ್ದು, ಜಿಲ್ಲಾದ್ಯಂತ ಮಂಗಳವಾರದಿಂದಲೇ ಮಾದರಿ ನೀತಿ ಸಂಹಿತೆ ಜಾರಿಯಲ್ಲಿದೆ ಎಂದು ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ಚುನಾವಣಾಧಿಕಾರಿ ಡಾ. ವಿಜಯಮಹಾಂತೇಶ ದಾನಮ್ಮನವರ ತಿಳಿಸಿದ್ದಾರೆ.

ಸೆ. 29ರಂದು ಅಧಿಸೂಚನೆ ಹೊರಡಿಸಲಾಗುವುದು, ನಾಮಪತ್ರ ಸಲ್ಲಿಕೆಗೆ ಅ. 6 ಕೊನೆಯ ದಿನ, ಅ.7ರಂದು ನಾಮಪತ್ರಗಳ ಪರಿಶೀಲನೆ, ಆ. 9ರಂದು ಉಮೇದುವಾರಿಕೆ ಹಿಂಪಡೆಯಲು ಕೊನೆಯ ದಿನವಾಗಿದೆ. ಅ. 23ರಂದು ಬೆಳಗ್ಗೆ 8 ಗಂಟೆಯಿಂದ ಸಾಯಂಕಾಲ 4 ಗಂಟೆವರೆಗೆ ಮತದಾನ ನಡೆಯಲಿದ್ದು, ಅ. 27ರಂದು ಮತ ಎಣಿಕೆ ಜರುಗಲಿದೆ. ಅ. 31ರಂದು ಚುನಾವಣೆ ಪ್ರಕ್ರಿಯೆ ಪೂರ್ಣಗೊಳ್ಳಲಿದೆ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಬಂಟಿಂಗ್, ಬ್ಯಾನರ್, ಪೋಸ್ಟರ್ ತೆರವಿಗೆ ಡಿಸಿ ಆದೇಶ:

ಪಶ್ಚಿಮ ಪದವೀಧರರ ಮತಕ್ಷೇತ್ರದ ಚುನಾವಣೆ ಘೋಷಣೆಯಾದ ಹಿನ್ನೆಲೆಯಲ್ಲಿ ಇಂದಿನಿಂದಲೇ ಜಿಲ್ಲೆಯಾದ್ಯಂತ ಮಾದರಿ ನೀತಿ ಸಂಹಿತೆ ಜಾರಿಯಲ್ಲಿದೆ. ನಗರ ಸ್ಥಳೀಯ ಸಂಸ್ಥೆಗಳಲ್ಲಿ ಹಾಗೂ ಗ್ರಾಮೀಣ ಪ್ರದೇಶಗಳಲ್ಲಿ ರಾಜಕೀಯ ಪಕ್ಷಗಳ ಮುಖಂಡರ ಭಾವಚಿತ್ರವಿರುವ ಬಂಟಿಂಗ್, ಬ್ಯಾನರ್, ಪೋಸ್ಟರ್ ತೆರವುಗೊಳಿಸಿ, ಗೋಡೆಬರಹ ಮುಚ್ಚಿಡುವ ಕಾರ್ಯವನ್ನು 24 ಗಂಟೆಯೊಳಗೆ ಕೈಗೊಂಡು ಜಿಲ್ಲಾಡಳಿತಕ್ಕೆ ವರದಿ ನೀಡುವಂತೆ ತಹಸೀಲ್ದಾರ್‌, ಪೌರಾಯುಕ್ತರು, ತಾ.ಪಂ. ಕಾರ್ಯನಿರ್ವಾಹಕರಿಗಳಿಗೆ ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ಚುನಾವಣಾಧಿಕಾರಿ ಡಾ. ವಿಜಯಮಹಾಂತೇಶ ದಾನಮ್ಮನವರ ಅವರು ಆದೇಶ ಹೊರಡಿಸಿದ್ದಾರೆ.