ಸಂಸದರಾಗಿ ಸಿದ್ದೇಶ್ವರ್ ಸಾಧಿಸಿದ ಅಭಿವೃದ್ಧಿ ಏನು?

| Published : Apr 24 2024, 02:19 AM IST

ಸಂಸದರಾಗಿ ಸಿದ್ದೇಶ್ವರ್ ಸಾಧಿಸಿದ ಅಭಿವೃದ್ಧಿ ಏನು?
Share this Article
  • FB
  • TW
  • Linkdin
  • Email

ಸಾರಾಂಶ

ದಾವಣಗೆರೆ ಜಿಲ್ಲೆಯಲ್ಲಿ 25 ವರ್ಷಗಳ ಕಾಲ ಅಧಿಕಾರ ಚಲಾಯಿಸಿರುವ ಸಂಸದ ಜಿ.ಎಂ. ಸಿದ್ದೇಶ್ವರ್ ಅವರು ಜಿಲ್ಲೆಯಲ್ಲಿ ಏನು ಅಭಿವೃದ್ಧಿ ಮಾಡಿದ್ದಾರೆ ಎಂದು ಮತದಾರ ಪ್ರಭುಗಳು ಪ್ರಶ್ನಿಸಿ, ಅವರಿಂದ ಉತ್ತರ ಪಡೆಯಬೇಕು ಎಂದು ಕಾಂಗ್ರೆಸ್ ಅಭ್ಯರ್ಥಿ ಡಾ.ಪ್ರಭಾ ಮಲ್ಲಿಕಾರ್ಜುನ್ ಹೊನ್ನಾಳಿಯಲ್ಲಿ ಹೇಳಿದ್ದಾರೆ.

- ಸೊರಟೂರಲ್ಲಿ ಆಂಜನೇಯಗೆ ಪೂಜೆ ಮತಯಾಚನೆಯಲ್ಲಿ ಡಾ. ಪ್ರಭಾ ಪ್ರಶ್ನೆ - - - ಕನ್ನಡಪ್ರಭ ವಾರ್ತೆ, ಹೊನ್ನಾಳಿ

ದಾವಣಗೆರೆ ಜಿಲ್ಲೆಯಲ್ಲಿ 25 ವರ್ಷಗಳ ಕಾಲ ಅಧಿಕಾರ ಚಲಾಯಿಸಿರುವ ಸಂಸದ ಜಿ.ಎಂ. ಸಿದ್ದೇಶ್ವರ್ ಅವರು ಜಿಲ್ಲೆಯಲ್ಲಿ ಏನು ಅಭಿವೃದ್ಧಿ ಮಾಡಿದ್ದಾರೆ ಎಂದು ಮತದಾರ ಪ್ರಭುಗಳು ಪ್ರಶ್ನಿಸಿ, ಅವರಿಂದ ಉತ್ತರ ಪಡೆಯಬೇಕು ಎಂದು ಕಾಂಗ್ರೆಸ್ ಅಭ್ಯರ್ಥಿ ಡಾ.ಪ್ರಭಾ ಮಲ್ಲಿಕಾರ್ಜುನ್ ಹೇಳಿದರು.

ಮಂಗಳವಾರ ತಾಲೂಕಿನ ಸೊರಟೂರು ಗ್ರಾಮದಲ್ಲಿ ಶ್ರೀ ಆಂಜನೇಯ ಸ್ವಾಮಿ ದೇವಸ್ಥಾನದಲ್ಲಿ ಪೂಜೆ ಸಲ್ಲಿಸಿದ ಬಳಿಕ ಪ್ರಚಾರ ರಥವನ್ನೇರಿ ಅವರು ಮಾತನಾಡಿದರು. ಹಾಲಿ ಸಂಸದರು ರೈತರ ಪರ ಏನು ಕೆಲಸ ಮಾಡಿದ್ದಾರೆ, ಎಷ್ಟು ಉದ್ಯೋಗ ಕೊಟ್ಟಿದ್ದಾರೆ, ಎಷ್ಟು ಕೈಗಾರಿಕೆಗಳನ್ನು ಸ್ಥಾಪನೆ ಮಾಡಿದ್ದಾರೆ, ಜಿಲ್ಲೆಗೆ ನಿಮ್ಮ ಕೊಡುಗೆ ಏನು ಎಂದರು.

ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ಇದೆ. ಸಿದ್ದರಾಮಯ್ಯ ಪಂಚ ಗ್ಯಾರಂಟಿ ಯೋಜನೆಗಳನ್ನು ಕೊಟ್ಟಿದ್ದಾರೆ. ಕ್ಷೇತ್ರದಲ್ಲಿ 7 ಜನ ಶಾಸಕರ ಬಲ ಇದೆ. ಇದರ ಜೊತೆಗೆ ಸಂಸದೆಯನ್ನಾಗಿ ನನ್ನನ್ನು ಆಯ್ಕೆ ಮಾಡಿದರೆ, ನಮ್ಮ ಬಲ ಹೆಚ್ಚಾಗುತ್ತದೆ. ಆದ್ದರಿಂದ ಕ್ಷೇತ್ರದ ಜನತೆ ಕೇಂದ್ರದಲ್ಲಿ ಕಾಂಗ್ರೆಸ್ ಸರ್ಕಾರ ರಚನೆಗೆ ಆರ್ಶೀವಾದ ಮಾಡಬೇಕು ಎಂದು ಮನವಿ ಮಾಡಿದರು.

ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಎಚ್.ಬಿ. ಮಂಜಪ್ಪ ಮಾತನಾಡಿ, ಸಿದ್ದರಾಮಯ್ಯ ಅವರು ಕೊಟ್ಟ ಕೊಡುಗೆಗಳನ್ನು ನೋಡಿದ ಮತದಾರರು ನಮ್ಮ ಅಭ್ಯರ್ಥಿಗೆ ಮತ ಹಾಕುತ್ತಾರೆ. ಮತದಾರರು ರಾಷ್ಟ್ರೀಯ ಪಕ್ಷ ಕಾಂಗ್ರೆಸ್‌ ಅಭ್ಯರ್ಥಿಗೆ ಆರ್ಶೀವಾದ ಮಾಡಬೇಕು. ಯಾವುದೇ ಪಕ್ಷೇತರ ಅಭ್ಯರ್ಥಿಗೆ ಮತ ನೀಡಬಾರದು ಎಂದು ಮನವಿ ಮಾಡಿದರು.

ಶಾಸಕ ಡಿ.ಜಿ. ಶಾಂತನಗೌಡ, ಜಿ.ಪಂ. ಮಾಜಿ ಸದಸ್ಯ ಡಿ.ಜಿ. ವಿಶ್ವನಾಥ್, ಬ್ಲಾಕ್ ಕಾಂಗ್ರೆಸ್ ನ ಅಧ್ಯಕ್ಷರಾದ ಎಚ್.ಬಿ. ಶಿವಯೋಗಿ, ನುಚ್ಚಿನ್ ವಾಗೀಶ್, ಆರ್. ನಾಗಪ್ಪ, ಮುಖಂಡರಾದ ಎಚ್.ಎ. ಉಮಾಪತಿ, ಬಿ. ಸಿದ್ದಪ್ಪ ಹಲವರು ಉಪಸ್ಥಿತರಿದ್ದರು.

- - -

ಕೋಟ್‌ ಕೇಂದ್ರದಲ್ಲಿಯೂ ಕಾಂಗ್ರೆಸ್ ನೇತೃತ್ವದ ಸರ್ಕಾರ ಬಂದರೆ ಕುಟಂಬದ ಹಿರಿಯ ಮಹಿಳೆಗೆ ₹1 ಲಕ್ಷ, ರೈತರ ಸಾಲ ಮನ್ನಾ, ಮತ್ತು ಶಿಷ್ಯ ವೇತನ ₹1 ಲಕ್ಷ ಕೊಡುವುದಾಗಿ ಗ್ಯಾರಂಟಿ ಕಾರ್ಡ್‍ಗಳನ್ನು ಮುದ್ರಿಸಿ, ಮಲ್ಲಿಕಾರ್ಜುನ್ ಖರ್ಗೆ ಹಾಗೂ ರಾಹುಲ್ ಗಾಂಧಿ ನೀಡಿದ್ದಾರೆ. ಸರ್ಕಾರ ಅಧಿಕಾರಕ್ಕೆ ಬಂದರೆ ನಿಮ್ಮ ಮನೆಬಾಗಿಲಿಗೆ ಗ್ಯಾರಂಟಿಗಳನ್ನು ತಲುಪಿಸುತ್ತೇವೆ

- ಡಾ.ಪ್ರಭಾ ಮಲ್ಲಿಕಾರ್ಜುನ , ಕಾಂಗ್ರೆಸ್‌ ಅಭ್ಯರ್ಥಿ

- - - -23ಎಚ್.ಎಲ್.ಐ5:

ಹೊನ್ನಾಳಿ ತಾಲೂಕಿನ ಸೊರಟೂರು ಗ್ರಾಮದಲ್ಲಿ ಡಾ. ಪ್ರಭಾ ಮಲ್ಲಿಕಾರ್ಜುನ್ ಮತಯಾಚನೆ ಮಾಡಿ ಮಾತನಾಡಿದರು.