ಕನಕಪುರ: ನಮ್ಮ ಆಹ್ವಾನದ ಮೇರೆಗೆ ಪ್ರಧಾನಮಂತ್ರಿ ನರೇಂದ್ರ ಮೋದಿಯವರು ಮೆಟ್ರೋ ಗುಲಾಬಿ ಮಾರ್ಗ ಉದ್ಘಾಟಿಸಲು ನವೆಂಬರ್ 13ರಂದು ಬೆಂಗಳೂರಿಗೆ ಆಗಮಿಸಲಿದ್ದಾರೆ. ಕೆಲ ಬಿಜೆಪಿಗರು ಪ್ರಧಾನಿಯನ್ನು ನಾವು ಆಹ್ವಾನಿಸಿದ್ದು ಎಂದು ಪ್ರಚಾರ ಗಿಟ್ಟಿಸಿಕೊಳ್ಳುತ್ತಿದ್ದಾರೆ. ಬಿಜೆಪಿಯವರಿಗೂ ಇದಕ್ಕೂ ಏನು ಸಂಬಂಧ ಎಂದು ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಪ್ರಶ್ನಿಸಿದರು
ಕನಕಪುರ: ನಮ್ಮ ಆಹ್ವಾನದ ಮೇರೆಗೆ ಪ್ರಧಾನಮಂತ್ರಿ ನರೇಂದ್ರ ಮೋದಿಯವರು ಮೆಟ್ರೋ ಗುಲಾಬಿ ಮಾರ್ಗ ಉದ್ಘಾಟಿಸಲು ನವೆಂಬರ್ 13ರಂದು ಬೆಂಗಳೂರಿಗೆ ಆಗಮಿಸಲಿದ್ದಾರೆ. ಕೆಲ ಬಿಜೆಪಿಗರು ಪ್ರಧಾನಿಯನ್ನು ನಾವು ಆಹ್ವಾನಿಸಿದ್ದು ಎಂದು ಪ್ರಚಾರ ಗಿಟ್ಟಿಸಿಕೊಳ್ಳುತ್ತಿದ್ದಾರೆ. ಬಿಜೆಪಿಯವರಿಗೂ ಇದಕ್ಕೂ ಏನು ಸಂಬಂಧ ಎಂದು ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಪ್ರಶ್ನಿಸಿದರು.
ರಾಮನಗರದಲ್ಲಿ ಗುರುವಾರ ರಾತ್ರಿ ಕಾರ್ಯಕ್ರಮ ಮುಗಿಸಿ ನಗರದ ನಿವಾಸದಲ್ಲಿ ವಾಸ್ತವ್ಯ ಹೂಡಿದ್ದ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಶುಕ್ರವಾರ ಬೆಳಿಗ್ಗೆ ಮಾಧ್ಯಮಗಳ ಜೊತೆ ಮಾತನಾಡಿ, ಇದು ಜನರ ದುಡ್ಡು. ನಾವು ಸಾಲ ಪಡೆದು ಮೆಟ್ರೋ ಅಭಿವೃದ್ಧಿ ಮಾಡುತ್ತಿದ್ದೇವೆ. ಇನ್ನೂ ಕೆಲವು ವಿಚಾರಗಳನ್ನು ಮೆಟ್ರೋ ಉದ್ಘಾಟನೆಗೆ ಬರುವ ಪ್ರಧಾನಮಂತ್ರಿಗಳ ಮುಂದೆ ಮಂಡಿಸುವುದಾಗಿ ತಿಳಿಸಿದರು.ದೆಹಲಿಯಲ್ಲಿ ರಾಹುಲ್ ಗಾಂಧಿಯವರು ಶುಕ್ರವಾರ ಸಂಜೆ ಕೆಪಿಸಿಸಿ ಅಧ್ಯಕ್ಷರು ಹಾಗೂ ಸಿಎಲ್ಪಿ ನಾಯಕರ ಸಭೆ ಕರೆದಿದ್ದಾರೆ. ಹಾಗಾಗಿ ದೆಹಲಿಗೆ ತೆರಳುತ್ತಿದ್ದು, ದೀಪಾವಳಿ ಹಬ್ಬವಿರುವ ಹಿನ್ನೆಲೆಯಲ್ಲಿ ದೆಹಲಿಯಲ್ಲಿ ಯಾರನ್ನು ಭೇಟಿ ಮಾಡುತ್ತಿಲ್ಲ ಎಂದು ಸ್ಪಷ್ಟಪಡಿಸಿದರು.
ಕಬ್ಬು ಬೆಳೆಗಾರರು ಹೋರಾಟ ಕೈ ಬಿಟ್ಟಿರುವ ಬಗ್ಗೆ ಮಾತನಾಡಿ, ನಾವು ರೈತರಿಗೆ ಮನವಿ ಮಾಡಿದ್ದೆವು. ಇದರಲ್ಲಿ ಪ್ರತಿಷ್ಠೆ ಬೇಡ ಇಂದು ಸಕ್ಕರೆ ಕಾರ್ಖಾನೆಗಳು ಹಾಗೂ ನಮ್ಮ ಸಚಿವರು ಕುಳಿತು ಚರ್ಚಿಸಿದ್ದು ಕೆಲವರು ಕಬ್ಬು ಅರೆಯಲು ಅನುಮತಿ ನೀಡಿ ರಕ್ಷಣೆ ಕೊಡಿ ಎಂದು ನ್ಯಾಯಾಲಯದ ಮೊರೆ ಹೋಗಿದ್ದು ಅದಕ್ಕೂ ಇಂದು ಅಫಿಡವಿಟ್ ಹಾಕಲಾಗುವುದು. ಕೇಂದ್ರ ಸರ್ಕಾರ ಸಕ್ಕರೆ ಬೆಲೆಯನ್ನು ನಿಗದಿ ಮಾಡಬೇಕಾಗಿದೆ. ಈಗಾಗಲೇ ಈ ಬಗ್ಗೆಯೂ ಪ್ರಧಾನಿಗಳ ಬಳಿ ಪ್ರಸ್ತಾಪಿಸಿ ಪತ್ರವನ್ನು ಬರೆಯಲಾಗಿದೆ. ಕೇಂದ್ರ ಸಚಿವ ಪ್ರಲ್ಹಾದ ಜೋಶಿ ಅವರು ಈ ಬಗ್ಗೆ ಪ್ರಯತ್ನ ಮಾಡುತ್ತಿರುವುದಾಗಿ ತಿಳಿಸಿದ್ದಾರೆಂದು ಹೇಳಿದರು.ಕಬ್ಬು ಬೆಳೆಗಾರರು ಸಮಸ್ಯೆ ಇತ್ಯರ್ಥವಾಗದಿದ್ದರೆ ಬೆಳಗಾವಿ ನಗರದಲ್ಲಿ ಚಳಿಗಾಲದ ಅಧಿವೇಶನ ನಡೆಸಲು ಬಿಡುವುದಿಲ್ಲ ಎಂದು ಸರ್ಕಾರವನ್ನ ಹೆದರಿಸುವುದು ಸರಿಯಲ್ಲ. ಸ್ವಲ್ಪ ಸೌಜನ್ಯ ಮತ್ತು ತಾಳ್ಮೆ ಇರಬೇಕು. ಏ ಬಾರೋ ಇಲ್ಲಿ ಎಂದು ಕರೆಯುವುದು, ರೈತರಿಗೆ ಅಗೌರವವಾದಂತೆ ಯಾರು ನಡೆದುಕೊಳ್ಳಬಾರದು ಎಂದು ಮನವಿ ಮಾಡಿದರು.
ತಾಲೂಕಿನ ಜನರ ಕಷ್ಟ-ಸುಖಗಳನ್ನು ತಿಳಿಯಲು ಹಾಗೂ ಮುಂದಿನ ದಿನಗಳಲ್ಲಿ ಆಗಬೇಕಾಗಿರುವ ಅಭಿವೃದ್ಧಿ ಕೆಲಸಗಳ ಬಗ್ಗೆ ಚರ್ಚೆ ನಡೆಸಲು ಇನ್ನು ಮೂರು ನಾಲ್ಕು ದಿನಗಳು ಬಿಟ್ಟು ಬರುವುದಾಗಿ ಇದೇ ವೇಳೆ ತಿಳಿಸಿದರು.ಕೆ ಕೆ ಪಿ ಸುದ್ದಿ 01:
ಕನಕಪುರದಲ್ಲಿ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಶುಕ್ರವಾರ ಬೆಳಗ್ಗೆ ಮಾಧ್ಯಮಗಳೊಂದಿಗೆ ಮಾತನಾಡಿದರು.