ಸಾರಾಂಶ
ರಾಜ್ಯದಲ್ಲಿ ಒಂದೇ ಒಂದು ಅಭಿವೃದ್ಧಿ ಕೆಲಸಗಳಾಗುತ್ತಿಲ್ಲ. ಕಾಂಗ್ರೆಸ್ ಶಾಸಕರೇ ಅಭಿವೃದ್ಧಿಗೆ ಸರ್ಕಾರದ ಬಳಿ ಹಣವೇ ಇಲ್ಲ ಎಂದು ಹೇಳುತ್ತಿದ್ದಾರೆ. ಇಂಥ ಸಮಯದಲ್ಲಿ 2 ವರ್ಷವಾಗಿದೆ ಎಂದು ಸಾಧನಾ ಸಮಾವೇಶ ಮಾಡಲು ಮುಂದಾಗಿದ್ದಾರೆ. ಯಾವ ಪುರುಷಾರ್ಥಕ್ಕೆ ಈ ಸಮಾವೇಶ? ಜಾಹೀರಾತಿಗಾಗಿ ಹಣ ಪೋಲು ಮಾಡುತ್ತಿದ್ದಾರೆ.
ಹುಬ್ಬಳ್ಳಿ: ಯಾವ ಪುರುಷಾರ್ಥಕ್ಕೆ 2 ವರ್ಷದ ಸಾಧನಾ ಸಮಾವೇಶವನ್ನು ಕಾಂಗ್ರೆಸ್ ಸರ್ಕಾರ ಮಾಡುತ್ತಿದೆ ಎಂದು ಪ್ರಶ್ನಿಸಿರುವ ಮಾಜಿ ಸಿಎಂ, ಸಂಸದ ಜಗದೀಶ ಶೆಟ್ಟರ್, ರಾಜ್ಯದಲ್ಲಿ ಒಂದೇ ಒಂದು ಅಭಿವೃದ್ಧಿ ಕೆಲಸಗಳಾಗುತ್ತಿಲ್ಲ ಎಂದು ಕಿಡಿಕಾರಿದ್ದಾರೆ.
ಇದೇ ವೇಳೆ ಸಿದ್ದರಾಮಯ್ಯ ಮುಖ್ಯಮಂತ್ರಿ ಸ್ಥಾನದಿಂದ ಕೆಳಕ್ಕಿಳಿಯುತ್ತಾರೆ. ಡಿ.ಕೆ. ಶಿವಕುಮಾರ ಮುಖ್ಯಮಂತ್ರಿಯಾಗುತ್ತಾರೆ ಎಂದು ಭವಿಷ್ಯ ನುಡಿದರು.ಶನಿವಾರ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ರಾಜ್ಯದಲ್ಲಿ ಒಂದೇ ಒಂದು ಅಭಿವೃದ್ಧಿ ಕೆಲಸಗಳಾಗುತ್ತಿಲ್ಲ. ಕಾಂಗ್ರೆಸ್ ಶಾಸಕರೇ ಅಭಿವೃದ್ಧಿಗೆ ಸರ್ಕಾರದ ಬಳಿ ಹಣವೇ ಇಲ್ಲ ಎಂದು ಹೇಳುತ್ತಿದ್ದಾರೆ. ಇಂಥ ಸಮಯದಲ್ಲಿ 2 ವರ್ಷವಾಗಿದೆ ಎಂದು ಸಾಧನಾ ಸಮಾವೇಶ ಮಾಡಲು ಮುಂದಾಗಿದ್ದಾರೆ. ಯಾವ ಪುರುಷಾರ್ಥಕ್ಕೆ ಈ ಸಮಾವೇಶ? ಜಾಹೀರಾತಿಗಾಗಿ ಹಣ ಪೋಲು ಮಾಡುತ್ತಿದ್ದಾರೆ ಎಂದರು. ಅಲ್ಲದೇ, ಗ್ಯಾರಂಟಿ ಹಣವನ್ನು ಅಪ್ಪರ್ ಕೃಷ್ಣಾ ಯೋಜನೆಗೆ ಬಳಸಿಕೊಳ್ಳಲಿ ಎಂದರು.
ಮೋದಿ ಅವರ ಪ್ರತಿ ಹೆಜ್ಜೆ ಟೀಕೆ ಮಾಡುತ್ತಲೇ ಇರುತ್ತಾರೆ. ಮೋದಿ ಅವರು ಗಡಿಗೆ ಹೋಗಿ ಜನರಿಗೆ ಸಮಾಧಾನ ಮಾಡುತ್ತಿದ್ದಾರೆ. ರಾಹುಲ್ ಗಾಂಧಿ ಅವರು ದೇಶದ ಗಡಿಗೆ ಹೋಗಲಿ ನೋಡೋಣ. ನ್ಯಾಷನಲ್ ಲೀಡರ್ ಚಿದಂಬರಂ, ಮನೀಶ್ ತಿವಾರಿ ಸೇರಿ ಹಲವು ಹಿರಿಯ ನಾಯಕರ ಹೇಳಿಕೆ ಹೇಗಿದೆ ನೋಡಿ ಎಂದರು.ಬೆಳಗಾವಿಯಲ್ಲಿ ಕುರಾನ್ ಸುಟ್ಟು ಹಾಕಿದ ಪ್ರಕರಣಕ್ಕೆ ಪ್ರತಿಕ್ರಿಯೆ ನೀಡಿದ ಅವರು, ಯಾರೇ ತಪ್ಪು ಮಾಡಿದರೂ ಅವರ ಮೇಲೆ ಕ್ರಮ ಆಗುತ್ತದೆ. ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಹದಗೆಟ್ಟು ಹೋಗಿದೆ ಎಂದರು.
)
;Resize=(128,128))
;Resize=(128,128))
;Resize=(128,128))
;Resize=(128,128))