ಸಾರಾಂಶ
ಜನತಾ ದರ್ಶನಕ್ಕೆ ಅಧಿಕಾರಿಗಳು ಹೋಗದಂತೆ ರಾಜ್ಯ ಸರ್ಕಾರ ಸುತ್ತೋಲೆ ಹೊರಡಿಸಿರುವ ಕುರಿತು ಸುದ್ದಿಗಾರರ ಪ್ರಶ್ನೆಗೆ ಉತ್ತರಿಸಿ, ಈ ಸರ್ಕಾರ ಚುನಾವಣೆಗೆ ಮುಂಚೆ ರಾಮನಗರದಲ್ಲಿ ಹೇಗೆಲ್ಲಾ ನಡೆದುಕೊಂಡಿತ್ತು ಎನ್ನುವುದು ಗೊತ್ತಿದೆ - ಎಚ್.ಡಿ.ಕುಮಾರಸ್ವಾಮಿ
ಮಂಡ್ಯ : ರಾಮನಗರ ಸಂಸದರಾಗಿದ್ದ ಡಿ.ಕೆ.ಸುರೇಶ್ ಈ ಹಿಂದೆ ಜನಸ್ಪಂದನ ಹೆಸರಿನಲ್ಲಿ ಅಧಿಕಾರಿಗಳನ್ನು ಹಳ್ಳಿ ಹಳ್ಳಿಗೆ ತಿರುಗಿಸಿದರು, ಉಸ್ತುವಾರಿ ಸಚಿವರು ಮಾಡಬೇಕಾದ ಸಭೆಗಳನ್ನೆಲ್ಲಾ ಮಾಡಿದರು. ಜಿಲ್ಲಾಧಿಕಾರಿ ಕಚೇರಿಯಲ್ಲೇ ಸಭೆಗಳನ್ನು ನಡೆಸಿದರು. ಅದಕ್ಕೆಲ್ಲಾ ಅನುಮತಿ ಕೊಟ್ಟವರು ಯಾರು? ಆಗ ಯಾವ ರೂಲ್ಸ್ ಇತ್ತು? ಎಂದು ಕೇಂದ್ರ ಸಚಿವ ಎಚ್.ಡಿ.ಕುಮಾರಸ್ವಾಮಿ ಪ್ರಶ್ನಿಸಿದರು.
ಜನತಾ ದರ್ಶನಕ್ಕೆ ಅಧಿಕಾರಿಗಳು ಹೋಗದಂತೆ ರಾಜ್ಯ ಸರ್ಕಾರ ಸುತ್ತೋಲೆ ಹೊರಡಿಸಿರುವ ಕುರಿತು ಸುದ್ದಿಗಾರರ ಪ್ರಶ್ನೆಗೆ ಉತ್ತರಿಸಿ, ಈ ಸರ್ಕಾರ ಚುನಾವಣೆಗೆ ಮುಂಚೆ ರಾಮನಗರದಲ್ಲಿ ಹೇಗೆಲ್ಲಾ ನಡೆದುಕೊಂಡಿತ್ತು ಎನ್ನುವುದು ಗೊತ್ತಿದೆ. ಇವತ್ತು ಕೇಂದ್ರದ ಒಬ್ಬ ಮಂತ್ರಿ, ಜನರ ಅಹವಾಲು ಸ್ವೀಕರಿಸಲು ಬಂದಿದ್ದೇನೆ ಎಂದರೆ ಹೊಸ ನಿಯಮಾವಳಿ ಮೂಲಕ ತಡೆಯಲು ಮುಂದಾಗಿದ್ದಾರೆ. ಇದರಿಂದ ಅವರಿಗೆ ಏನು ದೊರಕಲ್ಲ ಎಂದು ಟೀಕಿಸಿದರು.
ಮುಖ್ಯಮಂತ್ರಿ, ಸಚಿವರಿಗಷ್ಟೇ ಜನತಾ ದರ್ಶನಕ್ಕೆ ಅವಕಾಶವಿದೆ ಎಂದಿದ್ದರೆ. ಜನತಾದರ್ಶನ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳದಂತೆ ಅಧಿಕಾರಿಗಳಿಗೆ ಈಗಾಗಲೇ ಆ ಕುರಿತು ಸೂಚನೆ ಕೊಟ್ಟಿದ್ದಾರೆ. ಅಧಿಕಾರಿಗಳ ಬಗ್ಗೆ ನನಗೆ ಯಾವುದೇ ಬೇಸರ ಇಲ್ಲ. ಅವರು ಸರ್ಕಾರದ ನಿಯಮ ಪಾಲಿಸುತ್ತಿದ್ದಾರೆ. ಹೊಸ ನಿಯಮಾವಳಿಯೊಂದಿಗೆ ನನ್ನನ್ನು ಕಟ್ಟಿಹಾಕುವುದಕ್ಕೆ ಸಾಧ್ಯವಿಲ್ಲ ಎಂದರು.