ಹುಬ್ಬಳ್ಳಿಯ ವಿಮಾಣ ನಿಲ್ದಾಣ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ ಆಗಲಿ: ನೀರಲಕೇರಿ

| Published : Aug 03 2024, 12:42 AM IST

ಹುಬ್ಬಳ್ಳಿಯ ವಿಮಾಣ ನಿಲ್ದಾಣ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ ಆಗಲಿ: ನೀರಲಕೇರಿ
Share this Article
  • FB
  • TW
  • Linkdin
  • Email

ಸಾರಾಂಶ

ಹುಬ್ಬಳ್ಳಿಯಲ್ಲಿ ಕಾರ್ಯನಿರ್ವಹಿಸುತ್ತಿರುವ ಸುಸಜ್ಜಿತ ದೇಶಿಯ ವಿಮಾನ ನಿಲ್ದಾಣ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣವಾಗಲು ಎಲ್ಲ ಅರ್ಹತೆ ಹೊಂದಿದೆ. ಈ ನಿಲ್ದಾಣಕ್ಕೆ ಭೂಸ್ವಾಧೀನ ಮಾಡಿಕೊಳ್ಳುವ ಸಂದರ್ಭದಲ್ಲಿಯೇ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ ಎಂದೇ ಹೇಳಲಾಗಿತ್ತು.

ಧಾರವಾಡ:

ಬೆಂಗಳೂರು ಸಮೀಪ ಮತ್ತೊಂದು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ ನಿರ್ಮಾಣಕ್ಕೆ ರಾಜ್ಯ ಸರ್ಕಾರ ಚಿಂತಿಸುತ್ತಿದೆ. ಆದರೆ, ಹುಬ್ಬಳ್ಳಿಯನ್ನು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣವನ್ನಾಗಿ ಮಾಡಿ ಉತ್ತರ ಕರ್ನಾಟಕವನ್ನು ಯಾವಾಗ ಉದ್ಧಾರ ಮಾಡುವುದು ಎಂದು ಬಿಜೆಪಿ ಮುಖಂಡ ಪಿ.ಎಚ್. ನೀರಲಕೇರಿ ರಾಜ್ಯ ಸರ್ಕಾರಕ್ಕೆ ಪ್ರಶ್ನಿಸಿದ್ದಾರೆ.

ಈ ಕುರಿತು ಪತ್ರಿಕಾ ಪ್ರಕಟಣೆ ನೀಡಿರುವ ಅವರು, ಈಗಾಗಲೇ ಹುಬ್ಬಳ್ಳಿಯಲ್ಲಿ ಕಾರ್ಯನಿರ್ವಹಿಸುತ್ತಿರುವ ಸುಸಜ್ಜಿತ ದೇಶಿಯ ವಿಮಾನ ನಿಲ್ದಾಣ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣವಾಗಲು ಎಲ್ಲ ಅರ್ಹತೆ ಹೊಂದಿದೆ. ಈ ನಿಲ್ದಾಣಕ್ಕೆ ಭೂಸ್ವಾಧೀನ ಮಾಡಿಕೊಳ್ಳುವ ಸಂದರ್ಭದಲ್ಲಿಯೇ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ ಎಂದೇ ಹೇಳಲಾಗಿತ್ತು. ಆದರೆ, ಆ ಭರವಸೆ ಈಡೇರದಿರುವುದು ಈ ಭಾಗದ ಜನತೆಯ ದುರ್ದೈವವೇ ಸರಿ ಎಂದು ಬೇಸರ ವ್ಯಕ್ತಪಡಿಸಿದ್ದಾರೆ.

ಈಗಾಗಲೇ ನಾಗರಿಕರ ಒತ್ತಾಯದ ಮೇಲೆ ಹು–ಧಾ ಬೈಪಾಸ್ ಅಗಲೀಕರಣ ಆಗುತ್ತಿದೆ. ಹುಬ್ಬಳ್ಳಿ ಕೇಂದ್ರವಾಗಿ ಬೆಳಗಾವಿ, ಗೋವಾ, ಧಾರವಾಡ, ಬಾಗಲಕೋಟೆ, ವಿಜಯಪುರ, ಹಾವೇರಿ ವೇಗವಾಗಿ ಬೆಳೆಯುತ್ತಿವೆ. ಈ ನಿಟ್ಟಿನಲ್ಲಿ ಬೆಂಗಳೂರು ಸಮೀಪ ಬದಲು ಹುಬ್ಬಳ್ಳಿಯಲ್ಲೇ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣವನ್ನು ಮೊದಲು ಮಾಡುವುದು ಸೂಕ್ತ. ಇದರಿಂದ ಅಭಿವೃದ್ಧಿ ವೇಗವಾಗುವುದಲ್ಲದೇ ಉತ್ತರ ಕರ್ನಾಟಕ ಅಂತಾರಾಷ್ಟ್ರೀಯವಾಗಿ ಗುರುತಿಸಲ್ಪಡುತ್ತದೆ. ಕೂಡಲೇ ಈ ವಿಚಾರವನ್ನು ಗಂಭೀರವಾಗಿ ಪರಿಗಣಿಸಿ ಉತ್ತರ ಕರ್ನಾಟಕದವರೇ ಆದ ಎಂ.ಬಿ. ಪಾಟೀಲ ಅವರು ಹುಬ್ಬಳ್ಳಿ ವಿಮಾನ ನಿಲ್ದಾಣವನ್ನು ಅಂತಾರಾಷ್ಟ್ರೀಯ ನಿಲ್ದಾಣವನ್ನಾಗಿ ಮೇಲ್ದರ್ಜೆಗೇರಿಸಲು ಕೆಲಸ ಮಾಡಬೇಕು. ಇಲ್ಲದಿದ್ದರೇ ಈ ಭಾಗದ ನಾಗರಿಕರ ಜನಾಂದೋಲನ ರೂಪಿಸಬೇಕಾಗುವುದು ಎಂದು ಎಚ್ಚರಿಸಿದ್ದಾರೆ.