ರಾಮನಗರ: ಕಾಂಗ್ರೆಸ್ ಪಕ್ಷ ಹಿಂದುಳಿದ ವರ್ಗ ಮತ್ತು ಅಲ್ಪಸಂಖ್ಯಾತರ ಪರವಾಗಿಯೇ ಇರೋದು. ಪಕ್ಷದೊಳಗೆ ಯಾವ ಅಲ್ಪಸಂಖ್ಯಾತ ನಾಯಕರನ್ನು ಟಾರ್ಗೆಟ್ ಮಾಡುತ್ತಿಲ್ಲ. ಕೆಲವರ ಮೇಲೆ ಕ್ರಮ ಕೈಗೊಂಡಿರುವುದು ಮುಖ್ಯಮಂತ್ರಿ ಮತ್ತು ಉಪಮುಖ್ಯಮಂತ್ರಿಗಳಿಗೆ ಮಾತ್ರ ಗೊತ್ತಿದೆ ಎಂದು ಜಿಲ್ಲಾ ಉಸ್ತುವಾರಿ ಸಚಿವ ರಾಮಲಿಂಗಾರೆಡ್ಡಿ ತಿಳಿಸಿದರು.
ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ದಾವಣಗೆರೆ ಕ್ಷೇತ್ರ ಉಪಚುನಾವಣೆಯಲ್ಲಿ ಸೀಟು ಕೊಡದ ಕಾರಣಕ್ಕೆ ತಪ್ಪು ಅಭಿಪ್ರಾಯಕ್ಕೆ ಬರುವುದು ಸರಿಯಲ್ಲ. ಕಾಂಗ್ರೆಸ್ ಪಕ್ಷವೇ ಅಲ್ಪಸಂಖ್ಯಾತರಿಗೆ ಹೆಚ್ಚಿನ ಸ್ಥಾನಗಳನ್ನು ನೀಡಿದೆ. ಬಿಜೆಪಿ ಅಲ್ಪಸಂಖ್ಯಾತರಿಗೆ ಒಂದೂ ಸೀಟ್ ಕೊಟ್ಟಿಲ್ಲ ಎಂದರು.ಪ್ರಧಾನಿ ಮೋದಿ ವಿರುದ್ಧ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ವಿವಾದಾತ್ಮಕ ಹೇಳಿಕೆ ನೀಡಿದ್ದಾರಲ್ಲ ಎಂಬ ಪ್ರಶ್ನೆಗೆ ಆ ಬಗ್ಗೆ ಮಲ್ಲಿಕಾರ್ಜುನ ಖರ್ಗೆಯವರೇ ನಾನು ಆ ದಾಟಿಯಲ್ಲಿ ಹೇಳಿಲ್ಲ ಅಂತ ಸ್ಪಷ್ಟನೆ ಕೊಟ್ಟಿದ್ದಾರೆ. ಪದಬಳಕೆ ಬಗ್ಗೆ ಅವರೇ ಸ್ಪಷ್ಟನೆ ನೀಡಿರುವಾಗ ಇದನ್ನು ಮುಂದುವರಿಸುವುದರಲ್ಲಿ ಅರ್ಥವಿಲ್ಲ ಎಂದು ಹೇಳಿದರು.
ಮಹಿಳಾ ಮೀಸಲಾತಿ ಮಸೂದೆ ಕುರಿತು ಕಾಂಗ್ರೆಸ್ ವಿರುದ್ಧ ಬಿಜೆಪಿ-ಜೆಡಿಎಸ್ ಮೈತ್ರಿ ಪಕ್ಷ ಪ್ರತಿಭಟನೆ ನಡೆಸುತ್ತಿವೆಯಲ್ಲ ಎಂಬ ಪ್ರಶ್ನೆಗೆ ಬಿಜೆಪಿ-ಜೆಡಿಎಸ್‌ನವರೇ ಮಹಿಳಾ ವಿರೋಧಿಗಳು. 2023ರಲ್ಲಿಯೇ ಮಹಿಳಾ ಮೀಸಲಾತಿ ಮಸೂದೆ ಅಂಗೀಕಾರಗೊಂಡಿದೆ. ಎಲ್ಲಾ ಪಕ್ಷಗಳು ಇದಕ್ಕೆ ಸಹಕಾರ ಕೊಟ್ಟಿತ್ತು. ಅದನ್ನು ಜಾರಿ ಮಾಡಿಲ್ಲ ಏಕೆಂದು ಪ್ರಶ್ನಿಸಿದರು.ಈಗ ಮಹಿಳಾ ಮೀಸಲಾತಿ ಮಸೂದೆ ಜೊತೆಗೆ ಕ್ಷೇತ್ರ ಮರು ವಿಂಗಡಣೆಯನ್ನು ಸೇರಿಸಿ ಸಂವಿಧಾನ ತಿದ್ದುಪಡಿಗೆ ಮುಂದಾಗಿದ್ದರು. ಕಾಂಗ್ರೆಸ್ ನೇತೃತ್ವದ ಇಂಡಿಯಾ ಕೂಟ ಕ್ಷೇತ್ರ ಮರು ವಿಂಗಡಣೆಯನ್ನು ವಿರೋಧಿಸಿದಿಯೇ ಹೊರತು ಮಹಿಳಾ ಮೀಸಲಾತಿ ಮಸೂದೆಯನ್ನಲ್ಲ. ಬಿಜೆಪಿ-ಜೆಡಿಎಸ್ ನವರು ಹುಟ್ಟು ಸುಳ್ಳುಗಾರರು.
ಮೋದಿಯಿಂದ ಹಿಡಿದು ಕಾರ್ಯಕರ್ತರವರೆಗೂ ಸುಳ್ಳು ಹೇಳುವವರೇ ಹೆಚ್ಚಾಗಿದ್ದಾರೆ. ಸುಳ್ಳು ಹೇಳಲಿಲ್ಲ ಅಂದರೆ ಅವರಿಗೆ ನಿದ್ದೆನೇ ಬರುವುದಿಲ್ಲ. ಬಿಜೆಪಿಯವರಿಗೆ ನಾಚಿಕೆಯೇ ಇಲ್ಲ ಎಂದು ರಾಮಲಿಂಗಾರೆಡ್ಡಿ ವಾಗ್ದಾಳಿ ನಡೆಸಿದರು.
ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ಧ ಮಾಟಮಂತ್ರ ಮಾಡಲಾಗಿದೆ ಎಂಬ ಮಾಜಿ ಸಚಿವ ಕೆ.ಎನ್.ರಾಜಣ್ಣ ಆರೋಪಕ್ಕೆ ಪ್ರತಿಕ್ರಿಯಿಸಿದ ಅವರು, ರಾಜಣ್ಣರವರು ಆ ರೀತಿ ಹೇಳಿದ್ದಾರೆ ಅಂತ ಗಮನಿಸಿದ್ದೇನೆ. ಇದರ ಬಗ್ಗೆ ರಾಜಣ್ಣ ಅವರನ್ನೇ ಕೇಳಬೇಕು. ನನಗೆ ಮಾಟ-ಮಂತ್ರ, ಮೂಢನಂಬಿಕೆಗಳ ಬಗ್ಗೆ ನನಗೆ ನಂಬಿಕೆ ಇಲ್ಲ. ನಮ್ಮ ಮುಖ್ಯಮಂತ್ರಿಗಳು ಅಸಹಾಯಕರು ಅಂತ ಹೇಳುವವರೇ ಅಸಹಾಯಕರು. ರಾಜಕಾರಣಿಗಳ ಮೇಲೆ ಮಾಟ-ಮಂತ್ರಗಳ ಬಗ್ಗೆ ಕೇಳಿಲ್ಲ. ಈ ಬಗ್ಗೆ ಹಿಂದೆಮುಂದೆ ಮಾತನಾಡುವುದನ್ನು ಕೇಳಿದ್ದೇನೆ ಎಂದು ರಾಮಲಿಂಗಾರೆಡ್ಡಿ ತಿಳಿಸಿದರು.
ಕೋಟ್ ............ಮೊನ್ನೆ ತಾನೆ ಬಜೆಟ್ ಆಗಿದೆ, ಹಣ ಬಿಡುಗಡೆ ಆಗಬೇಕಿದೆ. ಮುಖ್ಯಮಂತ್ರಿಗಳು ಹಣ ಕೊಟ್ಟರೆ ಅರಣ್ಯ ಸಚಿವರು ಖರ್ಚು ಮಾಡುತ್ತಾರೆ. ಇದರಲ್ಲಿ ಸಚಿವರನ್ನು ದೂರುವುದು ಸರಿಯಲ್ಲ. ನಾವು ಅನುದಾನಕ್ಕೆ ಮುಖ್ಯಮಂತ್ರಿ ಬಳಿ ಮನವಿ ಮಾಡಬೇಕು. ಕಾಡಾನೆ ಹಾವಳಿ ತಡೆಗೆ ರೈಲ್ವೆ ಬ್ಯಾರಿಕೇಡ್ ಅಳವಡಿಸುವುದೇ ಶಾಶ್ವತ ಪರಿಹಾರ. ಈ ಬಗ್ಗೆ ವಿಧಾನಸಭೆಯಲ್ಲಿ ಚರ್ಚೆ ಮಾಡಲಾಗಿದೆ. ಅರಣ್ಯ ಸಚಿವರು ಇದಕ್ಕೆ ಆದ್ಯತೆ ಕೊಡುವುದಾಗಿ ಹೇಳಿದ್ದಾರೆ.
-ರಾಮಲಿಂಗಾರೆಡ್ಡಿ, ಜಿಲ್ಲಾ ಉಸ್ತುವಾರಿ ಸಚಿವರು, ಬೆಂಗಳೂರು ದಕ್ಷಿಣ23ಕೆಆರ್ ಎಂಎನ್ 1.ಜೆಪಿಜಿ
ಸಚಿವ ರಾಮಲಿಂಗಾರೆಡ್ಡಿ.