ಸಾರಾಂಶ
ಚನ್ನಪಟ್ಟಣ: ಮಾಜಿ ಸಚಿವ ಸಿ.ಪಿ.ಯೋಗೇಶ್ವರ್ ಕಾಂಗ್ರೆಸ್ ಸೇರ್ಪಡೆಗೊಂಡ ಬೆನ್ನಲ್ಲೆ ಉಪ ಚುನಾವಣೆಯ ಎನ್‌ಡಿಎ ಅಭ್ಯರ್ಥಿ ಯಾರು ಎಂಬ ಪ್ರಶ್ನೆ ಬಿಜೆಪಿ ಹಾಗೂ ಜೆಡಿಎಸ್ ವಲಯದಲ್ಲಿ ಮೂಡಿದೆ.
ಚನ್ನಪಟ್ಟಣ: ಮಾಜಿ ಸಚಿವ ಸಿ.ಪಿ.ಯೋಗೇಶ್ವರ್ ಕಾಂಗ್ರೆಸ್ ಸೇರ್ಪಡೆಗೊಂಡ ಬೆನ್ನಲ್ಲೆ ಉಪ ಚುನಾವಣೆಯ ಎನ್‌ಡಿಎ ಅಭ್ಯರ್ಥಿ ಯಾರು ಎಂಬ ಪ್ರಶ್ನೆ ಬಿಜೆಪಿ ಹಾಗೂ ಜೆಡಿಎಸ್ ವಲಯದಲ್ಲಿ ಮೂಡಿದೆ.
ಕ್ಷೇತ್ರದ ಎನ್‌ಡಿಎ ಟಿಕೆಟ್‌ಗಾಗಿ ಸಿಪಿವೈ ಮತ್ತು ಜೆಡಿಎಸ್ ಮಧ್ಯೆ ಸಾಕಷ್ಟು ಹಗ್ಗಜಗ್ಗಾಟ ನಡೆದಿತ್ತು. ಇದೀಗ ಯೋಗೇಶ್ವರ್ ಕಾಂಗ್ರೆಸ್ ಸೇರ್ಪಡೆಗೊಂಡಿದ್ದಾರೆ. ಇದೀಗ ಕ್ಷೇತ್ರದಿಂದ ಜೆಡಿಎಸ್ ಯಾರನ್ನು ಕಣಕ್ಕೆ ಇಳಿಸಲಿದೆ ಎಂಬುದು ಇನ್ನೂ ನಿಗೂಢವಾಗಿಯೇ ಉಳಿದಿದೆ.ಹಲವು ಹೆಸರು: ಜೆಡಿಎಸ್ ಯುವಘಟಕದ ರಾಜ್ಯಾಧ್ಯಕ್ಷ ನಿಖಿಲ್ ಕುಮಾರಸ್ವಾಮಿ ಸ್ಪರ್ಧೆಗೆ ಸಾಕಷ್ಟು ಒತ್ತಡ ಇದೆಯಾದರೂ ಅವರು ಆಸಕ್ತಿ ತೋರುತ್ತಿಲ್ಲ. ಇನ್ನು ಇದೀಗ ಸಂಸದ ಡಾ.ಮಂಜುನಾಥ್ ಅವರ ಪತ್ನಿ ಅನುಸೂಯಮ್ಮ ಹೆಸರು ಮುನ್ನೆಲೆಗೆ ಬಂದಿದೆ. ಇದರೊಂದಿಗೆ ಮಾಜಿ ಶಾಸಕಿ ಅನಿತಾ ಕುಮಾರಸ್ವಾಮಿ, ಜೆಡಿಎಸ್ ತಾಲೂಕು ಅಧ್ಯಕ್ಷ ಎಚ್.ಸಿ.ಜಯಮುತ್ತು ಹೆಸರು ಕೂಡ ಹರಿದಾಡುತ್ತಿದೆ. ಆದರೆ ದಳಪತಿ, ಕೇಂದ್ರ ಸಚಿವ ಕುಮಾರಸ್ವಾಮಿ ಯಾವ ನಿರ್ಧಾರ ಕೈಗೊಳ್ಳಲಿದ್ದಾರೆ ಎಂಬುದನ್ನು ಕಾದು ನೋಡಬೇಕಿದೆ.
ಪೊಟೋ೨೩ಸಿಪಿಟಿ೩: ನಿಖಿಲ್ ಕುಮಾರಸ್ವಾಮಿಪೊಟೋ೨೩ಸಿಪಿಟಿ೪: ಅನುಸೂಯ.
ಪೊಟೋ೨೩ಸಿಪಿಟಿ೫: ಜಯಮುತ್ತು.