ಸಾರಾಂಶ
ಭಾಲ್ಕಿ ತಾಲೂಕಿನ ಹಲಬರ್ಗಾ ಗ್ರಾಮದ ರಾಚೋಟೇಶ್ವರ ಸಂಸ್ಥಾನ ಮಠದಲ್ಲಿ ನಡೆದ ಧರ್ಮಸಭೆಯಲ್ಲಿ ನಾಣ್ಯಗಳಿಂದ ಹವಾ ಮಲ್ಲಿನಾಥ ಮಹಾರಾಜರ ತುಲಾಭಾರ ಮಾಡಲಾಯಿತು.
ಕನ್ನಡಪ್ರಭ ವಾರ್ತೆ ಬೀದರ್
ಜೀವನದಲ್ಲಿ ಯಾವತ್ತೂ ಅಹಂಕಾರಕ್ಕೆ ಅವಕಾಶ ಕೊಡಬಾರದು ಎಂದು ಹಲಬರ್ಗಾದ ಹಾವಗಿಲಿಂಗೇಶ್ವರ ಸಂಸ್ಥಾನ ಮಠದ ಪೀಠಾಧಿಪತಿ ಹಾವಗಿಲಿಂಗೇಶ್ವರ ಶಿವಾಚಾರ್ಯರು ನುಡಿದರು.ಭಾಲ್ಕಿ ತಾಲೂಕಿನ ಹಲಬರ್ಗಾ ಗ್ರಾಮದ ರಾಚೋಟೇಶ್ವರ ಸಂಸ್ಥಾನ ಮಠದಲ್ಲಿ ಸಿದ್ಧರಾಮೇಶ್ವರ ನಮ್ಮೂರ 11ನೇ ಜಾತ್ರಾ ಮಹೋತ್ಸವ ಪ್ರಯುಕ್ತ ಆಯೋಜಿಸಿದ್ದ ಧರ್ಮಸಭೆಯಲ್ಲಿ ಮಾತನಾಡಿದ ಅವರು, ಅಹಂಕಾರ ಮನುಷ್ಯನ ಅವನತಿಗೆ ಕಾರಣವಾಗುತ್ತದೆ ಎಂದು ತಿಳಿಸಿದರು.
ಪ್ರೀತಿಯಿಂದ ಇಡೀ ವಿಶ್ವವನ್ನು ಗೆಲ್ಲಬಹುದು. ಹೀಗಾಗಿ ಜೀವನದಲ್ಲಿ ಪರಸ್ಪರರನ್ನು ಪ್ರೀತಿಸಬೇಕು. ಯಾರಿಗೂ ತೊಂದರೆ ಆಗದ ರೀತಿಯಲ್ಲಿ ಬದುಕಬೇಕು. ಗುರು, ಹಿರಿಯರನ್ನು ಗೌರವಿಸಬೇಕು. ನಯ, ವಿನಯ ಮೈಗೂಡಿಸಿಕೊಳ್ಳಬೇಕು ಎಂದು ತಿಳಿಸಿದರು.ಜೀವನ ಸಾರ್ಥಕಕ್ಕೆ ಗುರು ತೋರಿದ ಮಾರ್ಗದಲ್ಲಿ ನಡೆಯಬೇಕು. ದೇವರ ಸ್ಮರಣೆ ಮಾಡಬೇಕು. ಸತ್ಕಾರ್ಯಗಳಲ್ಲಿ ತೊಡಗಿಸಿಕೊಳ್ಳಬೇಕು ಎಂದು ಹೇಳಿದರು.
ಕಾರ್ಯಕ್ರಮ ಉದ್ಘಾಟಿಸಿದ ಜೈ ಭಾರತ ಮಾತಾ ರಾಷ್ಟ್ರೀಯ ಸೇವಾ ಸಮಿತಿಯ ರಾಷ್ಟ್ರೀಯ ಅಧ್ಯಕ್ಷ ಹವಾ ಮಲ್ಲಿನಾಥ ಮಹಾರಾಜರ ಅವರನ್ನು ಭಕ್ತರು ನಾಣ್ಯಗಳಿಂದ ತುಲಾಭಾರ ಮಾಡಿದರು.ಅಬ್ಬೆ ತುಮಕೂರಿನ ತೋಟಯ್ಯ ಶಾಸ್ತ್ರಿ ಪ್ರವಚನ ನೀಡಿದರು. ಚಿದಾನಂದ ಝಳಕಿ ಸಂಗೀತ ನಡೆಸಿಕೊಟ್ಟರು. ವಿಶ್ವನಾಥ ಐನೋಳಿ ತಬಲಾ ಸಾಥ್ ನೀಡಿದರು.
ಜೈ ಭಾರತ ಮಾತಾ ರಾಷ್ಟ್ರೀಯ ಸೇವಾ ಸಮಿತಿಯ ಭಾಲ್ಕಿ ತಾಲೂಕು ಅಧ್ಯಕ್ಷ ಪಪ್ಪು ಪಾಟೀಲ ಖಾನಾಪುರ, ಮಠದ ಸದ್ಭಕ್ತರು ಇದ್ದರು.