ಬಿಜೆಪಿ ಪ್ರಣಾಳಿಕೆಯಲ್ಲಿ ಯಾಕೆ ಗ್ಯಾರಂಟಿ ಯೋಜನೆ ಘೋಷಿಸಿದೆ: ಕೃಷ್ಣಮೂರ್ತಿ ಆಚಾರ್ಯ

| Published : Jul 17 2025, 12:30 AM IST

ಬಿಜೆಪಿ ಪ್ರಣಾಳಿಕೆಯಲ್ಲಿ ಯಾಕೆ ಗ್ಯಾರಂಟಿ ಯೋಜನೆ ಘೋಷಿಸಿದೆ: ಕೃಷ್ಣಮೂರ್ತಿ ಆಚಾರ್ಯ
Share this Article
  • FB
  • TW
  • Linkdin
  • Email

ಸಾರಾಂಶ

ಉಡುಪಿ ಬ್ಲಾಕ್ ಕಾಂಗ್ರೆಸ್ ಸಮಿತಿ ಅಧ್ಯಕ್ಷ ರಮೇಶ್ ಕಾಂಚನ್ ಅವರ ನೇತೃತ್ವದಲ್ಲಿ ಬಡಾನಿಡಿಯೂರು ಗ್ರಾಮ ಪಂಚಾಯಿತಿ ಮುಂಭಾಗದಲ್ಲಿ ಬಿಜೆಪಿಯ ಸುಳ್ಳಿನ ಪ್ರತಿಭಟನೆಯ ವಿರುದ್ಧ ಕಾಂಗ್ರೆಸ್ ಪಕ್ಷದ ಸತ್ಯದರ್ಶನ ಪ್ರತಿಭಟನೆಯನ್ನು ಹಮ್ಮಿಕೊಳ್ಳಲಾಗಿತ್ತು.

ಕನ್ನಡಪ್ರಭ ವಾರ್ತೆ ಉಡುಪಿ

ಉಡುಪಿ ಬ್ಲಾಕ್ ಕಾಂಗ್ರೆಸ್ ಸಮಿತಿ ಅಧ್ಯಕ್ಷ ರಮೇಶ್ ಕಾಂಚನ್ ಅವರ ನೇತೃತ್ವದಲ್ಲಿ ಬಡಾನಿಡಿಯೂರು ಗ್ರಾಮ ಪಂಚಾಯಿತಿ ಮುಂಭಾಗದಲ್ಲಿ ಬಿಜೆಪಿಯ ಸುಳ್ಳಿನ ಪ್ರತಿಭಟನೆಯ ವಿರುದ್ಧ ಕಾಂಗ್ರೆಸ್ ಪಕ್ಷದ ಸತ್ಯದರ್ಶನ ಪ್ರತಿಭಟನೆಯನ್ನು ಹಮ್ಮಿಕೊಳ್ಳಲಾಗಿತ್ತು.

ಈ ಸಂದರ್ಭ ಪಕ್ಷದ ಪ್ರಚಾರ ಸಮಿತಿ ಅಧ್ಯಕ್ಷ ಕೃಷ್ಣಮೂರ್ತಿ ಆಚಾರ್ಯ ಮಾತನಾಡಿ, ಪಂಚ ಗ್ಯಾರಂಟಿ ಯೋಜನೆಗಳ ಬಗ್ಗೆ ಮಾಹಿತಿ ನೀಡಿ ಜನಸಾಮಾನ್ಯರಿಗೆ ಈ ಯೋಜನೆಗಳಿಂದ ಬಹಳ ಪ್ರಯೋಜನೆಯಾಗಿದೆ. ಕರ್ನಾಟಕ ರಾಜ್ಯದ ಜನಪ್ರಿಯ ಮುಖ್ಯಮಂತ್ರಿಗಳಾದ ಸಿದ್ದರಾಮಯ್ಯ ಅವರು ಆರ್ಥಿಕ ತಜ್ಞರು. ದಾಖಲೆಯ ಬಜೆಟ್ ಮಂಡಿಸಿರುವ ಸಿದ್ದರಾಮಯ್ಯ ಅವರ ಬಗ್ಗೆ ಮಾತನಾಡಲು ಬಿಜೆಪಿಗರಿಗೆ‌ಯಾವ ನೈತಿಕತೆ ಇಲ್ಲ. ಗ್ಯಾರಂಟಿ ಯೋಜನೆಗಳನ್ನು ಟೀಕಿಸುವ ಬಿಜೆಪಿ ತಮ್ಮ ಚುನಾವಣಾ ಪ್ರಣಾಳಿಕೆಯಲ್ಲಿ ಗ್ಯಾರಂಟಿ ಯೋಜನೆಗಳನ್ನು ನೀಡುವುದಾಗಿ ಯಾಕೆ ಎಂದು ಪ್ರಶ್ನಿಸಿದರು.ಈ ಪ್ರತಿಭಟನಾ ಸಭೆಯಲ್ಲಿ ಜಿಲ್ಲಾ ಕಾಂಗ್ರೆಸ್ ಪ್ರಚಾರ ಸಮಿತಿಯ ಅಧ್ಯಕ್ಷ ಹರೀಶ್ ಕಿಣಿ, ಜಿಲ್ಲಾ ಕಾಂಗ್ರೆಸ್ ಉಪಾಧ್ಯಕ್ಷ ಪ್ರಖ್ಯಾತ್ ಶೆಟ್ಟಿ, ಮಹಾಬಲ ಕುಂದರ್, ಉಡುಪಿ ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ದಿನಕರ್ ಹೇರೂರು, ಪಕ್ಷದ ನಾಯಕರಾದ ಸುರೇಶ್ ಶೆಟ್ಟಿ ಬಡಾನಿಡಿಯೂರು, ಯುವರಾಜ್ ಪುತ್ತೂರು, ಕಿರಣ್ ಕುಂದರ್, ರಾಮಪ್ಪ ಸಾಲ್ಯಾನ್, ಬಂಧು ಕಾಂಚನ್, ಜಗದೀಶ್ ಸುವರ್ಣ, ವನಿತಾ ಫೆರ್ನಾಂಡೀಸ್, ಪುಷ್ಪಾ ಕುಂದರ್, ವಿಲ್ಮಾ ಫೆರ್ನಾಂಡೀಸ್, ಆನಂದ್ ಪೂಜಾರಿ, ಸದಾನಂದ್ ಕುಲಾಲ್, ಸುರೇಶ್ ಶೆಟ್ಟಿ, ಗಣೇಶ್ ನೆರ್ಗಿ, ಸಂಧ್ಯಾ ತಿಲಕ್‌ರಾಜ್, ಸತೀಶ್ ಕೊಡವೂರು, ಸತೀಶ್ ಮಂಚಿ, ಶರತ್ ಶೆಟ್ಟಿ, ಜಿಲ್ಲಾ ಹಾಗೂ ಬ್ಲಾಕ್ ಕಾಂಗ್ರೆಸ್ ಸಮಿತಿಯ ಪದಾಧಿಕಾರಿಗಳು, ಬೂತ್ ಸಮಿತಿಯ ಅಧ್ಯಕ್ಷರು, ಬಿ.ಎಲ್.ಎ., ಹಾಗೂ ಕಾರ್ಯಕರ್ತರು ಉಪಸ್ಥಿತರಿದ್ದರು.