ಮಂಗಳೂರಿನಲ್ಲಿ ನಾವು ಎರಡು ಕಡೆ ಪ್ರತಿಭಟನೆಗೆ ಮುಂದಾಗಿದ್ದೆವು. ಆದರೆ ಕಮಿಷನರ್ ಅವರ ಮಾತಿಗೆ ಬೆಲೆ ನೀಡಿ ನಿಲ್ಲಿಸಿದ್ದೇವೆ. ಸರ್ಕಾರ ಶಾಂತಿ ಸುವ್ಯವಸ್ಥೆಗೆ ಹಾನಿಯಾಗುತ್ತದೆ ಎಂದು ಪ್ರಭಾಕರ್ ಭಟ್ ಅವರನ್ನು ಬಂಧಿಸದಿರುವುದು ಸರಿಯಲ್ಲ. ಶಾಂತಿ ಸುವ್ಯವಸ್ಥೆ ಎಂದು ಏನು ಮಾಡಿದರೂ ಸರಿನಾ? ಎಂದು ಮಂಗಳೂರು ಉತ್ತರ ಮಾಜಿ ಶಾಸಕ ಮೊಯಿದ್ದೀನ್ ಬಾವಾ ಪ್ರಶ್ನಿಸಿದರು.

ಕನ್ನಡಪ್ರಭ ವಾರ್ತೆ ಮಂಗಳೂರುದೇಶದಲ್ಲಿ ಭಾರತಮಾತೆ ಮತ್ತು ಮಹಿಳೆಯರಿಗೆ ಆರ್‌ಎಸ್‌ಎಸ್‌ನವರು ವಿಶೇಷ ಗೌರವ ಮತ್ತು ಸ್ಥಾನಮಾನ ನೀಡುತ್ತಾರೆ. ಆದರೆ, ಅದೇ ಆರ್‌ಎಸ್‌ಎಸ್‌ ಮುಖಂಡ ಡಾ. ಕಲ್ಲಡ್ಕ ಪ್ರಭಾಕರ್ ಭಟ್ ಅವರು ಮುಸ್ಲಿಂ ಮಹಿಳೆಯರ ಬಗ್ಗೆ ತೀವ್ರ ಅವಹೇಳನ ಮಾಡಿದ್ದಾರೆ. ಆದರೂ ಅವರ ಮೇಲೆ ಸರ್ಕಾರ ಯಾವುದೇ ಕ್ರಮವನ್ನು ಕೈಗೊಂಡಿಲ್ಲ. ಒಂದು ವೇಳೆ ಇದೇ ಮಾತನ್ನು ನಾನು ಹೇಳಿದ್ದರೆ ನನ್ನ ಮನೆಯನ್ನೇ ಸುಟ್ಟು ಹಾಕುತ್ತಿದ್ದರು ಎಂದು ಮಂಗಳೂರು ಉತ್ತರ ಮಾಜಿ ಶಾಸಕ ಮೊಯ್ದಿನ್‌ ಬಾವಾ ಹೇಳಿದ್ದಾರೆ.

ಡಾ.ಪ್ರಭಾಕರ ಭಟ್‌ ಅವರನ್ನು ಬಂಧಿಸುವಂತೆ ಆಗ್ರಹಿಸಿ ಶುಕ್ರವಾರ ಮಂಗಳೂರು ಪೊಲೀಸ್‌ ಕಮಿಷನರ್‌ಗೆ ಮೊಯ್ದಿನ್‌ ಬಾವಾ ತನ್ನ ಬೆಂಬಲಿಗರ ಜತೆ ತೆರಳಿ ಮನವಿ ಸಲ್ಲಿಸಿದ ಬಳಿಕ ಸುದ್ದಿಗಾರರಲ್ಲಿ ಮಾತನಾಡಿದರು. ಮಂಗಳೂರಿನಲ್ಲಿ ನಾವು ಎರಡು ಕಡೆ ಪ್ರತಿಭಟನೆಗೆ ಮುಂದಾಗಿದ್ದೆವು. ಆದರೆ ಕಮಿಷನರ್ ಅವರ ಮಾತಿಗೆ ಬೆಲೆ ನೀಡಿ ನಿಲ್ಲಿಸಿದ್ದೇವೆ. ಸರ್ಕಾರ ಶಾಂತಿ ಸುವ್ಯವಸ್ಥೆಗೆ ಹಾನಿಯಾಗುತ್ತದೆ ಎಂದು ಪ್ರಭಾಕರ್ ಭಟ್ ಅವರನ್ನು ಬಂಧಿಸದಿರುವುದು ಸರಿಯಲ್ಲ. ಶಾಂತಿ ಸುವ್ಯವಸ್ಥೆ ಎಂದು ಏನು ಮಾಡಿದರೂ ಸರಿನಾ? ಮುಲಾಜಿಲ್ಲದೆ ಹೇಳುತ್ತೇನೆ. ಸರ್ಕಾರವನ್ನು ನಂಬಿ ಶೇ.98 ಮಂದಿ ಅಲ್ಪಸಂಖ್ಯಾತರು ಕಾಂಗ್ರೆಸ್‌ಗೆ ಮತ ಹಾಕಿದ್ದಾರೆ. ಉಚಿತ ಕೊಡಿ, ಅದು ಕೊಡಿ ಇದು ಕೊಡಿ ಎಂದಲ್ಲ. ಶಾಂತಿ ನೆಮ್ಮದಿ ಕೊಡಿ ಎಂದು ಮತ ಹಾಕಿದ್ದಾರೆ. ಯಾರು ಭಯೋತ್ಪಾದನೆ ಮಾಡುತ್ತಾರೆ, ತೊಂದರೆ ಕೊಡುತ್ತಾರೆ, ಅವರನ್ನು ಸರ್ಕಾರ ಮುಲಾಜಿಲ್ಲದೆ ಬಂಧಿಸಬೇಕು ಎಂದು ಅವರು ಆಗ್ರಹಿಸಿದರು.