ಕೆಲ ರಾಜಕಾರಣಿಗಳ ವಿರುದ್ಧ ಪ್ರಾಸಿಕ್ಯೂಷನ್ ಗೆ ಏಕೆ ಅನುಮತಿ ನೀಡಿಲ್ಲ: ಶಾಸಕ ಕೆ.ಎಂ.ಉದಯ್

| Published : Aug 21 2024, 12:35 AM IST

ಕೆಲ ರಾಜಕಾರಣಿಗಳ ವಿರುದ್ಧ ಪ್ರಾಸಿಕ್ಯೂಷನ್ ಗೆ ಏಕೆ ಅನುಮತಿ ನೀಡಿಲ್ಲ: ಶಾಸಕ ಕೆ.ಎಂ.ಉದಯ್
Share this Article
  • FB
  • TW
  • Linkdin
  • Email

ಸಾರಾಂಶ

ರೋಲ್ ಕಾಲ್ ಮಾಡುವ ಗಿರಾಕಿ ದೂರು ಸಲ್ಲಿಸಿದ ತಕ್ಷಣ ಪ್ರಾಸಿಕ್ಯೂಷನ್ ಅನುಮತಿ ನೀಡಿರುವುದರ ಹಿಂದಿನ ಉದ್ದೇಶ ಏನು. ಆ ವ್ಯಕ್ತಿಗೆ ಹಣ ಕೊಟ್ಟು ಪೂರ್ವಯೋಜಿತ ದೂರ ದಾಖಲಿಸಿದ್ದಾರೆ. ಆ ಮೂಲಕ ಕಾಂಗ್ರೆಸ್ ಸರ್ಕಾರವನ್ನು ಅಸ್ಥಿರಗೊಳಿಸುವ ಕೆಲಸಕ್ಕೆ ಬಿಜೆಪಿ - ಜೆಡಿಎಸ್ ನವರು ಹೊರಟಿದ್ದಾರೆ.

ಕನ್ನಡಪ್ರಭ ವಾರ್ತೆ ಮದ್ದೂರು

ಖಾಸಗಿ ವ್ಯಕ್ತಿ ನೀಡಿದ ದೂರನ್ನು ಆಧರಿಸಿ ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ಧ ಪ್ರಾಸಿಕ್ಯುಷನ್‌ಗೆ ರಾಜ್ಯಪಾಲರು ಅನುಮತಿ ನೀಡಿದ್ದಾರೆ. ಆರೇಳು ತಿಂಗಳ ಹಿಂದೆ ಲೋಕಾಯುಕ್ತ, ಸಿಬಿಐ, ಸಿಐಡಿಯವರು ಕೆಲ ರಾಜಕಾರಣಿಗಳ ವಿರುದ್ಧ ಪ್ರಾಸಿಕ್ಯೂಷನ್‌ಗೆ ಅನುಮತಿ ಕೊಡುವಂತೆ ಮನವಿ ಮಾಡಿದ್ದರೂ ಏಕೆ ನೀಡಿಲ್ಲ ಎಂದು ಶಾಸಕ ಕೆ.ಎಂ.ಉದಯ್ ಪ್ರಶ್ನಿಸಿದರು.ಪ್ರತಿಭಟನೆ ನಡೆಸಿದ ನಂತರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ರೋಲ್ ಕಾಲ್ ಮಾಡುವ ಗಿರಾಕಿ ದೂರು ಸಲ್ಲಿಸಿದ ತಕ್ಷಣ ಪ್ರಾಸಿಕ್ಯೂಷನ್ ಅನುಮತಿ ನೀಡಿರುವುದರ ಹಿಂದಿನ ಉದ್ದೇಶ ಏನು. ಆ ವ್ಯಕ್ತಿಗೆ ಹಣ ಕೊಟ್ಟು ಪೂರ್ವಯೋಜಿತ ದೂರ ದಾಖಲಿಸಿದ್ದಾರೆ. ಆ ಮೂಲಕ ಕಾಂಗ್ರೆಸ್ ಸರ್ಕಾರವನ್ನು ಅಸ್ಥಿರಗೊಳಿಸುವ ಕೆಲಸಕ್ಕೆ ಬಿಜೆಪಿ - ಜೆಡಿಎಸ್ ನವರು ಹೊರಟಿದ್ದಾರೆ ಎಂದು ಆರೋಪಿಸಿದರು.

ರಾಜ್ಯ ಜನರು ಸಿದ್ದರಾಮಯ್ಯ ಹಾಗೂ ಕಾಂಗ್ರೆಸ್ ಸರ್ಕಾರದ ಪರವಾಗಿದ್ದಾರೆ. ಯಾರ ಆಟವೂ ನಡೆಯುವುದಿಲ್ಲ.

ಕುಮಾರಸ್ವಾಮಿ ನಿರುದ್ಯೋಗಿ ಆಗಿ ಮೂಲೆಯಲ್ಲಿದ್ದರು. ಅವರ ಪಕ್ಷ ಮುಳಗುವ ಹಂತದಲ್ಲಿತ್ತು. ಅದೇನು ಅದೃಷ್ಟ ಎಂಬಂತೆ ಅಧಿಕಾರ ಸಿಕ್ಕಿ ಬಿಟ್ಟಿದೆ. ಎಷ್ಟು ದಿನ ಅಧಿಕಾರದಲ್ಲಿ ಇರುತ್ತಾರೊ ಗೊತ್ತಿಲ್ಲ ಎಂದು ವ್ಯಂಗ್ಯವಾಡಿದರು.

ಕಾಂಗ್ರೆಸ್ ಸರ್ಕಾರದ ಏಳಿಗೆ ಸಹಿಸದ ಬಿಜೆಪಿ- ಜೆಡಿಎಸ್ ನವರು ಕುತಂತ್ರ ರಾಜಕಾರಣದಲ್ಲಿ ತೊಡಗಿದ್ದಾರೆ. ಇಡಿ, ಐಟಿ, ಸಿಬಿಐ ತನಿಖಾ ಸಂಸ್ಥೆಗಳನ್ನು ದುರ್ಬಳಕೆ ಮಾಡಿಕೊಳ್ಳುತ್ತಿದ್ದ ಕೇಂದ್ರ ಸರ್ಕಾರ ಈಗ ರಾಜಭವನ ದುರ್ಬಳಕೆ ಮಾಡಿಕೊಳ್ಳುತ್ತಿದೆ ಎಂದು ದೂರಿದರು.

ಮುಂಬರುವ ಚುನಾವಣೆಯಲ್ಲಿ ಜನರು ಬಿಜೆಪಿ- ಜೆಡಿಎಸ್ ಪಕ್ಷಗಳಿಗೆ ಪಾಠ ಕಲಿಸಲಿದ್ದಾರೆ. ಕಾಂಗ್ರೆಸ್ ನೇತೃತ್ವದ ಇಂಡಿಯಾ ಒಕ್ಕೂಟ ದೇಶಧಲ್ಲಿ ಬಲಿಷ್ಟವಾಗಿದೆ. ಮುಂದಿನ ದಿನಗಳಲ್ಲಿ ಬಿಜೆಪಿ ದೊಂಬರಾಟಕ್ಕೆ ಅಂತ್ಯ ಹಾಡಲಿದ್ದಾರೆ. ಜನರು ಬಿಜೆಪಿ ಆಟಕ್ಕೆ ಬ್ರೇಕ್ ಹಾಕಲಿದ್ದಾರೆ.ಮೈಷುಗರ್‌ನಲ್ಲಿ ಕಬ್ಬು ಅರೆಯುವಿಕೆ ಪುನಾರಂಭ

ಮಂಡ್ಯ: ಮೈಷುಗರ್ ಸಕ್ಕರೆ ಕಾರ್ಖಾನೆಯಲ್ಲಿ ಟ್ರಾನ್ಸ್ ಫಾರ್ಮರ್ ತೊಂದರೆಯಿಂದ ಕಾರ್ಯನಿರ್ವಹಣೆಯಲ್ಲಿ ವ್ಯತ್ಯಯವಾಗಿತ್ತು. ಸೋಮವಾರ ಹೊಸ ಟ್ರಾನ್ಸ್ ಫಾರ್ಮರ್ ಅಳವಡಿಸಿದ್ದು, ಕಬ್ಬು ಅರೆಯುವಿಕೆಯ ಕೆಲಸ ಪ್ರಾರಂಭವಾಗಿದೆ ಎಂದು ಅಪರ ಜಿಲ್ಲಾಧಿಕಾರಿ ಡಾ.ಎಚ್.ಎಲ್ ನಾಗರಾಜು ಅವರು ತಿಳಿಸಿದ್ದಾರೆ. ಕಾರ್ಖಾನೆಯಲ್ಲಿ ರೈತರೊಂದಿಗೆ ಒಪ್ಪಂದ ಮಾಡಿಕೊಂಡಿರುವ ಕಬ್ಬನ್ನು ಅರೆಯಲಾಗುವುದು. ಈ ಬಗ್ಗೆ ರೈತರಿಗೆ ಯಾವುದೇ ಆತಂಕ ಬೇಡ. ಕಬ್ಬು ಕಟಾವು ಕೆಲಸ ಸಹ ಯಾವುದೇ ತೊಂದರೆ ಇಲ್ಲದೆ ನಡೆಯಲಿದೆ ಎಂದು ತಿಳಿಸಿದ್ದಾರೆ.