ಸಾರಾಂಶ
ಬಿಹಾರ ಚುನಾವಣೆಗೆ ಒಂದು ದಿನದ ಹಿಂದೆ ಕೃತ್ಯ ನಡೆದಿದ್ದು ಯಾಕೆ?’ ಎಂದು ಸಚಿವ ಜಮೀರ್ ಅಹ್ಮದ್ ಖಾನ್ ಪ್ರಶ್ನೆ ಮಾಡಿದ್ದಾರೆ.
ಕನ್ನಡಪ್ರಭ ವಾರ್ತೆ ಬೆಂಗಳೂರು
‘ಇಸ್ಲಾಂ ಧರ್ಮದಲ್ಲಿ ಭಯೋತ್ಪಾದನೆಗೆ ಅವಕಾಶ ಇಲ್ಲ. ಹಾಗಾಗಿ ಭಯೋತ್ಪಾದಕರು ಮುಸ್ಲಿಮರಾಗಲು ಸಾಧ್ಯವಿಲ್ಲ. ಈಗ ಎದ್ದಿರುವ ಪ್ರಶ್ನೆ ಬಿಹಾರ ಚುನಾವಣೆಗೆ ಒಂದು ದಿನದ ಹಿಂದೆ ಕೃತ್ಯ ನಡೆದಿದ್ದು ಯಾಕೆ?’ ಎಂದು ಸಚಿವ ಜಮೀರ್ ಅಹ್ಮದ್ ಖಾನ್ ಪ್ರಶ್ನೆ ಮಾಡಿದ್ದಾರೆ.ಬುಧವಾರ ಸುದ್ದಿಗಾರರೊಂದಿಗೆ ಮಾತನಾಡಿ ದೆಹಲಿ ಕಾರ್ ಸ್ಫೋಟ ಪ್ರಕರಣ ಹಾಗೂ ಶಂಕಿತ ಉಗ್ರರ ಕುರಿತ ಪ್ರಶ್ನೆಗೆ ಉತ್ತರಿಸಿದರು.
ಸ್ಫೋಟದ ಬಗ್ಗೆ ಹಲವು ಪ್ರಶ್ನೆಗಳು ಎದ್ದಿವೆ. ಭಯೋತ್ಪಾದಕರಿಗೆ ರಾಜಕೀಯ ಸಂಪರ್ಕ ಇತ್ತು ಎಂದು ಅಲ್ಲಿ ಇಲ್ಲಿ ಮಾತುಗಳು ಹರಿದಾಡುತ್ತಿವೆ. ಬಿಹಾರ ಚುನಾವಣೆ ಒಂದು ದಿನದ ಹಿಂದೆ ಬಾಂಬ್ ಸ್ಫೋಟ ಹೇಗಾಯಿತು? ಹಾಗೇನಾದರೂ ಚುನಾವಣೆ ಕಾರಣಗಳಿಗಾಗಿ ಆಗಿದ್ದರೆ ಒಳ್ಳೆಯದಾಗಲ್ಲ. ಪ್ರಧಾನಮಂತ್ರಿಯೇ ಆಗಲಿ ಮುಖ್ಯಮಂತ್ರಿಯೇ ಆಗಲಿ ಯಾರೂ ಇಲ್ಲಿಯೇ ಗೂಟ ಹೊಡೆದುಕೊಂಡು ಇರುವುದಿಲ್ಲ ಎಂದು ಹೇಳಿದರು.ಸ್ಫೋಟದ ಬಗ್ಗೆ ಅನುಮಾನ ಇದೆಯೇ ಎಂಬ ಪ್ರಶ್ನೆಗೆ, ‘ಬ್ಲಾಸ್ಟ್ ಕುರಿತಾಗಿ ನನಗೆ ಅನುಮಾನ ಇಲ್ಲ. ಆದರೆ ಭಯೋತ್ಪಾದನೆಗೆ ಮುಸ್ಲಿಮರನ್ನು ದೂರುವುದು ಸರಿಯಲ್ಲ. ಭಯೋತ್ಪಾದಕರಿಗೆ ಜಾತಿಯೇ ಇಲ್ಲ. ಇಸ್ಲಾಂ ಧರ್ಮದಲ್ಲಿ ಭಯೋತ್ಪಾದನೆಗೆ ಯಾರೂ ಅವಕಾಶವೇ ನೀಡಿಲ್ಲ. ಭಯೋತ್ಪಾದಕರು ಮುಸ್ಲಿಮರೇ ಅಲ್ಲ ಎಂದು ಹೇಳಿದರು.
ಹಾಗೇನಾದರೂ ಇಂತಹ ಕೃತ್ಯ ಎಸಗಿದರೆ ಹುಳ ಬಿದ್ದು ಸಾಯ್ತಾರೆ. ಆದರೆ ಕಾರ್ ಸ್ಫೋಟ ಪ್ರಕರಣದ ಬಗ್ಗೆ ಒಂದಿಷ್ಟು ಪ್ರಶ್ನೆಗಳು ಇವೆ. ನವೆಂಬರ್ 11 ಕ್ಕೆ ಬಿಹಾರ ಚುನಾವಣೆ ನಡೆಯಿತು. ಒಂದು ದಿನದ ಮೊದಲು ಬ್ಲಾಸ್ಟ್ ಆಗಿದೆ. ಅದು ಹೇಗೆ? ಎಂದು ಸುದ್ದಿಗಾರರಿಗೆ ಪ್ರಶ್ನಿಸಿದರು.;Resize=(128,128))
;Resize=(128,128))
;Resize=(128,128))
;Resize=(128,128))