ಈ ಸಂದರ್ಭದಲ್ಲಿ ಮಾತನಾಡಿದ ವೀಣಾ ಸುರೇಶ್ ಅವರು, ನನ್ನ ಪತಿ ಎನ್‌ಡಿಎ ಅಭ್ಯರ್ಥಿ ಕೆ.ಎಂ. ಸುರೇಶ್ ಅವರು ಕಳೆದ ಮೂರು ದಶಕಗಳಿಂದಲೂ ಸಾಮಾಜಿಕ, ಶೈಕ್ಷಣಿಕ ಹಾಗೂ ರಾಜಕೀಯ ಕ್ಷೇತ್ರದಲ್ಲಿ ಸಕ್ರಿಯವಾಗಿ ಸೇವೆ ಸಲ್ಲಿಸುತ್ತಾ ಬಂದಿದ್ದಾರೆ. ಭಾರತೀಯ ಜನತಾ ಪಾರ್ಟಿಯಲ್ಲಿ ಯುವ ಮೋರ್ಚಾ ಅಧ್ಯಕ್ಷರಾಗಿ, ಮಂಡಲ, ಜಿಲ್ಲಾ ಮಟ್ಟದಲ್ಲಿ ಅನೇಕ ಜವಾಬ್ದಾರಿ ಹಾಗೂ ರಾಜ್ಯಮಟ್ಟದಲ್ಲೂ ಶಿಕ್ಷಕರ ಪ್ರಕೋಷ್ಠದ ರಾಜ್ಯ ಸಂಚಾಲಕರಾಗಿ ಕಾರ್ಯನಿರ್ವಹಿಸಿದ್ದಾರೆ ಎಂದರು.

ಕನ್ನಡಪ್ರಭ ವಾರ್ತೆ, ತುಮಕೂರು

ಈ ತಿಂಗಳ 23ರಂದು ನಡೆಯಲಿರುವ ಆಗ್ನೇಯ ಪದವೀಧರರ ಕ್ಷೇತ್ರದ ಚುನಾವಣೆಗೆ ಎನ್‌ಡಿಎ ಅಭ್ಯರ್ಥಿಯಾಗಿ ಸ್ಪರ್ಧಿಸಿರುವ ಕೆ.ಎಂ. ಸುರೇಶ್ ಪರ ಅವರ ಪತ್ನಿ ವೀಣಾ ಅವರು ನಗರದ ವಿವಿಧೆಡೆ ವ್ಯಾಪಕ ಪ್ರಚಾರ ನಡೆಸಿ ಮತಯಾಚಿಸಿದರು.

ನಗರದ ಮಹೇಶ್ ಪಿಯು ಕಾಲೇಜು, ಶಾರದಾ ಪಿಯು ಕಾಲೇಜು, ವಿಜಯ ಪಿಯು ಕಾಲೇಜು, ವೀರಶೈವ ಬ್ಯಾಂಕ್, ಸಿದ್ದರಾಮೇಶ್ವರ ಬ್ಯಾಂಕ್, ಟಿಜಿಎಂಸಿ ಬ್ಯಾಂಕ್ ಹಾಗೂ ಶಿವಶ್ರೀ ಸಹಕಾರ ಸಂಘ ಸೇರಿದಂತೆ ವಿವಿಧ ಕಾಲೇಜು, ಬ್ಯಾಂಕ್‌ಗಳಿಗೆ ಭೇಟಿ ನೀಡಿದ ಎನ್‌ಡಿಎ ಅಭ್ಯರ್ಥಿ ಕೆ.ಎಂ. ಸುರೇಶ್ ಅವರ ಪತ್ನಿ ವೀಣಾ ಅವರು ತಮ್ಮ ಪತಿ ಪರವಾಗಿ ಮತಯಾಚಿಸಿ, ಚುನಾವಣೆಯಲ್ಲಿ ಮೊದಲ ಪ್ರಾಶಸ್ತ್ಯದ ಮತ ನೀಡಿ ಬೆಂಬಲಿಸುವಂತೆ ಮನವಿ ಮಾಡಿದರು.

ಮಹೇಶ್ ಪಿಯು ಕಾಲೇಜಿನಲ್ಲಿ ಪ್ರಾಂಶುಪಾಲರು ಹಾಗೂ ಉಪನ್ಯಾಸಕರನ್ನು ಭೇಟಿ ಮಾಡಿದ ವೀಣಾ ಸುರೇಶ್ ಅವರು ಆಗ್ನೇಯ ಪದವೀಧರ ಕ್ಷೇತ್ರದ ಎನ್‌ಡಿಎ ಅಭ್ಯರ್ಥಿ ಕೆ.ಎಂ. ಸುರೇಶ್‌ರವರನ್ನು ಚುನಾವಣೆಯಲ್ಲಿ ಗೆಲ್ಲಿಸುವಂತೆ ಕೋರಿದರು.

ಈ ಸಂದರ್ಭದಲ್ಲಿ ಮಾತನಾಡಿದ ವೀಣಾ ಸುರೇಶ್ ಅವರು, ನನ್ನ ಪತಿ ಎನ್‌ಡಿಎ ಅಭ್ಯರ್ಥಿ ಕೆ.ಎಂ. ಸುರೇಶ್ ಅವರು ಕಳೆದ ಮೂರು ದಶಕಗಳಿಂದಲೂ ಸಾಮಾಜಿಕ, ಶೈಕ್ಷಣಿಕ ಹಾಗೂ ರಾಜಕೀಯ ಕ್ಷೇತ್ರದಲ್ಲಿ ಸಕ್ರಿಯವಾಗಿ ಸೇವೆ ಸಲ್ಲಿಸುತ್ತಾ ಬಂದಿದ್ದಾರೆ. ಭಾರತೀಯ ಜನತಾ ಪಾರ್ಟಿಯಲ್ಲಿ ಯುವ ಮೋರ್ಚಾ ಅಧ್ಯಕ್ಷರಾಗಿ, ಮಂಡಲ, ಜಿಲ್ಲಾ ಮಟ್ಟದಲ್ಲಿ ಅನೇಕ ಜವಾಬ್ದಾರಿ ಹಾಗೂ ರಾಜ್ಯಮಟ್ಟದಲ್ಲೂ ಶಿಕ್ಷಕರ ಪ್ರಕೋಷ್ಠದ ರಾಜ್ಯ ಸಂಚಾಲಕರಾಗಿ ಕಾರ್ಯನಿರ್ವಹಿಸಿದ್ದಾರೆ ಎಂದರು.

ಕೆ.ಎಂ. ಸುರೇಶ್ ಅವರು ಸೋಮೇಶ್ವರ ವಿದ್ಯಾಲಯ ಸ್ಥಾಪನೆ, ಸೋಮೇಶ್ವರ ಮಲ್ಟಿ ಸ್ಪೆಷಾಲಿಟಿ ಆಸ್ಪತ್ರೆ, ಸಹಕಾರಿ ಸಂಸ್ಥೆಗಳ ಮೂಲಕ ಸಾವಿರಾರು ಮಂದಿ ಉದ್ಯೋಗ ಕಲ್ಪಿಸಿಕೊಟ್ಟಿದ್ದಾರೆ. ಹಾಗಾಗಿ ಇವರಿಗೆ ಶಿಕ್ಷಣ ಕ್ಷೇತ್ರ ಮತ್ತು ಆರೋಗ್ಯ ಕ್ಷೇತ್ರ ಎರಡರ ಬಗ್ಗೆಯೂ ತುಂಬಾ ಚೆನ್ನಾಗಿ ಅರಿವಿದೆ. ಈ ಬಾರಿ ಚುನಾವಣೆಯಲ್ಲಿ ಇವರನ್ನು ಬೆಂಬಲಿಸುವ ಮೂಲಕ ಆಗ್ನೇಯ ಪದವೀಧರ ಕ್ಷೇತ್ರದಲ್ಲಿ ಕೆಲಸ ಮಾಡಲು ಅವಕಾಶ ನೀಡಬೇಕು ಎಂದರು.

ಈ ಸಂದರ್ಭದಲ್ಲಿ ಮಹೇಶ್ ಪಿಯು ಕಾಲೇಜಿನ ಪ್ರಾಂಶುಪಾಲರಾದ ವಿದ್ಯಾಪಾಟೀಲ್, ಶಶಿಧರ್, ಪಾಲಿಕೆ ಮಾಜಿ ಸದಸ್ಯ ಹೆಚ್. ಮಲ್ಲಿಕಾರ್ಜುನಯ್ಯ, ರೇಖಾ, ಮಂಜುಳ, ಯದುರಾಜು ಮತ್ತಿತರರು ಪಾಲ್ಗೊಂಡಿದ್ದರು.