ಅರಣ್ಯಾಧಿಕಾರಿಗಳ ನಿರ್ಲಕ್ಷತನದಿಂದ ಕ್ರೂರ ಪ್ರಾಣಿಗಳ ಹಾವಳಿ ಹೆಚ್ಚಾಗಿದ್ದು, ತಡೆಗಟ್ಟಲು ವಿಫಲರಾಗಿದ್ದಾರೆ ಎಂದು ಕರ್ನಾಟಕ ರಾಜ್ಯ ರೈತ ಸಂಘ ಜಿಲ್ಲಾ ಉಪಾಧ್ಯಕ್ಷ ಗೌಡೆಗೌಡ ಆಕ್ರೋಶ ವ್ಯಕ್ತಪಡಿಸಿದರು.ಪಟ್ಟಣದಲ್ಲಿ ಹಮ್ಮಿಕೊಂಡಿದ್ದ ಪ್ರತಿಭಟನೆಯಲ್ಲಿ ಮಾತನಾಡಿ, ಮೆರವಣಿಗೆ ಬಸ್ ನಿಲ್ದಾಣದ ಮೂಲಕ ಸಾಗಿ ತಾಲೂಕು ದಂಡಾಧಿಕಾರಿಗಳ ಕಚೇರಿ ಮುಂಭಾಗ ಪ್ರತಿಭಟನಾಕಾರರು ಜಮಾವಣೆಗೊಂಡು ಸಂಬಂಧಪಟ್ಟ ಇಲಾಖೆ ಅಧಿಕಾರಿಗಳು ಸ್ಥಳಕ್ಕಾಗಿ ಸಮಸ್ಯೆಗೆ ಪರಿಹಾರ ನೀಡಬೇಕು ಎಂದು ಒತ್ತಾಯಿಸಿದರು.
ಕನ್ನಡಪ್ರಭ ವಾರ್ತೆ, ಹನೂರು
ಅರಣ್ಯಾಧಿಕಾರಿಗಳ ನಿರ್ಲಕ್ಷತನದಿಂದ ಕ್ರೂರ ಪ್ರಾಣಿಗಳ ಹಾವಳಿ ಹೆಚ್ಚಾಗಿದ್ದು, ತಡೆಗಟ್ಟಲು ವಿಫಲರಾಗಿದ್ದಾರೆ ಎಂದು ಕರ್ನಾಟಕ ರಾಜ್ಯ ರೈತ ಸಂಘ ಜಿಲ್ಲಾ ಉಪಾಧ್ಯಕ್ಷ ಗೌಡೆಗೌಡ ಆಕ್ರೋಶ ವ್ಯಕ್ತಪಡಿಸಿದರು.ಪಟ್ಟಣದಲ್ಲಿ ಹಮ್ಮಿಕೊಂಡಿದ್ದ ಪ್ರತಿಭಟನೆಯಲ್ಲಿ ಮಾತನಾಡಿ, ಮೆರವಣಿಗೆ ಬಸ್ ನಿಲ್ದಾಣದ ಮೂಲಕ ಸಾಗಿ ತಾಲೂಕು ದಂಡಾಧಿಕಾರಿಗಳ ಕಚೇರಿ ಮುಂಭಾಗ ಪ್ರತಿಭಟನಾಕಾರರು ಜಮಾವಣೆಗೊಂಡು ಸಂಬಂಧಪಟ್ಟ ಇಲಾಖೆ ಅಧಿಕಾರಿಗಳು ಸ್ಥಳಕ್ಕಾಗಿ ಸಮಸ್ಯೆಗೆ ಪರಿಹಾರ ನೀಡಬೇಕು ಎಂದು ಒತ್ತಾಯಿಸಿದರು.ತಾಲೂಕಿನ ಅರಣ್ಯದಂಚಿನಲ್ಲಿ ಬರುವ ಗ್ರಾಮಗಳಲ್ಲಿ ರೈತರು ಹಾಗೂ ಜನಸಾಮಾನ್ಯರು ಕ್ರೂರ ಪ್ರಾಣಿಗಳ ಉಪಟಳದಿಂದ ಬೇಸತ್ತಿದ್ದಾರೆ. ಸಾಕು ಪ್ರಾಣಿಗಳನ್ನು ಕಳೆದುಕೊಂಡು ನಷ್ಟ ಉಂಟಾಗಿದೆ. ಸಂಬಂಧ ಪಟ್ಟ ಅರಣ್ಯಾಧಿಕಾರಿಗಳ ನಿರ್ಲಕ್ಷತನದಿಂದ ರೈತರು ದಿನ ನಿತ್ಯ ಹೈರಾಣರಾಗಿದ್ದಾರೆ. ಅರಣ್ಯ ಉಳಿಸುವ ನೆಪದಲ್ಲಿ ಅರಣ್ಯ ಅಧಿಕಾರಿಗಳು ಕಾಡಿನಲ್ಲಿ ಭ್ರಷ್ಟಾಚಾರ ಮಾಡುವ ಮೂಲಕ ರೈತರಿಗೆ ಜನಸಾಮಾನ್ಯರಿಗೆ ತೊಂದರೆ ಕೊಡುವ ನಿಟ್ಟಿನಲ್ಲಿ ಮುಂದಾಗಿದ್ದಾರೆ. ತಪ್ಪಿಸಲು ಅರಣ್ಯಾಧಿಕಾರಿಗಳು ಕ್ರಮ ಕೈಗೊಳ್ಳಬೇಕು ಎಂದು ಒತ್ತಾಯಿಸಿದರು.
ಸಫಾರಿ ನಿಲ್ಲಿಸಿ ಸಾಕು ಪ್ರಾಣಿಗಳ ಉಳಿಸಿ:ಮಲೆ ಮಹದೇಶ್ವರ ವನ್ಯಧಾಮ, ಬಪ್ಪರ್ ಜೋನ್ ವಲಯದ ಅಜ್ಜಿಪುರ ಸಫಾರಿ ಕೇಂದ್ರ ತೆರದ ಮೇಲೆ ಕಾಡುಪ್ರಾಣಿಗಳಾದ ಹುಲಿ, ಚಿರತೆ, ಕಾಡಾನೆಗಳು ಹಂದಿಗಳು ಸೇರಿದಂತೆ ಪ್ರಾಣಿಗಳು ಹೆಚ್ಚಾಗಿದೆ ಇದರಿಂದಾಗಿ ಜನಸಾಮಾನ್ಯರಿಗೆ ಅರಣ್ಯದಂಚಿನ ರೈತರಿಗೆ ತೊಂದರೆಯಾಗಿದೆ. ಸಫಾರಿ ಕೇಂದ್ರವನ್ನು ಸಂಪೂರ್ಣವಾಗಿ ನಿಷೇಧಿಸಬೇಕು ಎಂದು ಒತ್ತಾಯಿಸಿದರು.
ತಾಲೂಕು ಅಧ್ಯಕ್ಷ ಅಮ್ಜದ್ ಖಾನ್ ಮಾತನಾಡಿ, ಪಟ್ಟಣದಲ್ಲಿ ನಡೆಯುತ್ತಿದ್ದ ನ್ಯಾಯಾಲಯ ಕೊಳ್ಳೇಗಾಲಕ್ಕೆ ವರ್ಗಾವಣೆ ಆಗಿದೆ. ಹೀಗಾಗಿ ಮತ್ತೆ ಪುನರ್ ಆರಂಭ ಮಾಡಲು ಸಂಬಂಧಪಟ್ಟವರು ಕೂಡಲೇ ಕ್ರಮ ಕೈಗೊಳ್ಳಬೇಕು. ಗೋಪಿನಾಥಂ ಹಾಗೂ ಪಾಲಾರ್ ಸೇರಿದಂತೆ ತಾಲೂಕಿನಿಂದ ಮತ್ತೊಂದು ತಾಲೂಕಿಗೆ ನ್ಯಾಯಕ್ಕಾಗಿ ಹೋಗಿಬರುವುದು ಜನಸಾಮಾನ್ಯರಿಗೆ ತೊಂದರೆಯಾಗಿದೆ. ಪಟ್ಟಣದಲ್ಲಿಯೇ ನ್ಯಾಯಾಲಯ ತೆರೆಯಲು ಕ್ರಮ ಕೈಗೊಳ್ಳಬೇಕು ಎಂದು ಒತ್ತಾಯಿಸಿದರು.ಬಡವರಿಗೆ ನಿವೇಶನ ನೀಡಿ:
ತಾಲೂಕಿನಲ್ಲಿಯೇ ಹೆಚ್ಚು ಸದಸ್ಯರನ್ನು ಹೊಂದಿರುವ ಮಾರ್ಟಳ್ಳಿ ಗ್ರಾಪಂ ವ್ಯಾಪ್ತಿಯ ವಿವಿಧ ಗ್ರಾಮಗಳಲ್ಲಿ ಇರುವ ಕಡು ಬಡವರಿಗೆ ನಿವೇಶನ ನೀಡಲು ಸರ್ಕಾರ ಜಿಲ್ಲಾಡಳಿತ ಮತ್ತು ಗ್ರಾಮ ಪಂಚಾಯಿತಿ ನಿರ್ಲಕ್ಷತನದ ತೋರಿದೆ. ಜೊತೆಗೆ ಸುಳ್ವಾಡಿ ಕಿಚ್ಚುಗುತ್ತಿ ಮಾರಮ್ಮನ ದೇವಾಲಯದಲ್ಲಿ ಕಳೆದ ಏಳು ವರ್ಷಗಳ ಹಿಂದೆ ವಿಷ ಪ್ರಸಾದ ತಿಂದಂತ ಭಕ್ತರು 17 ಜನ ಸಾವನ್ನಪ್ಪಿದ್ದು, 150ಕ್ಕೂ ಹೆಚ್ಚು ಜನರು ವಿವಿಧ ನೂನ್ಯತೆಗಳಿಂದ ಬಳಲುತ್ತಿದ್ದಾರೆ. ಹೀಗಾಗಿ ಕಡು ಬಡವರಿಗೆ ನೀಡಬೇಕಾಗಿದ್ದ ನಿವೇಶನ ಹಂಚಿಕೆ ಇನ್ನು ಸಹ ಮಾಡದೆ ಇರುವುದರಿಂದ ಜಿಲ್ಲಾಡಳಿತ ಇತ್ತ ಗಮನ ಹರಿಸಿ ಸೂಕ್ತ ಕ್ರಮ ಕೈಗೊಳ್ಳಬೇಕು ಎಂದು ಒತ್ತಾಯಿಸಿದರು.ರೈತ ಮುಖಂಡ ವೆಂಕಟೇಶ್ ಮಾತನಾಡಿ, ಕೂಡ್ಲೂರು, ಹೂಗ್ಯಂ ಸೇರಿದಂತೆ ಗಡಿ ಗ್ರಾಮಗಳಲ್ಲಿ ಮೂಲಭೂತ ಸೌಲಭ್ಯಗಳ ಮರಿಚಿಕೆಯಾಗಿದೆ. ಸಂಬಂಧ ಪಟ್ಟ ಇಲಾಖೆ ಅಧಿಕಾರಿಗಳು ಇತ್ತ ಗಮನ ಹರಿಸುವುದಿಲ್ಲ, ಕಾಡುಪ್ರಾಣಿಗಳ ಹಾವಳಿ ಸೇರಿದಂತೆ ಶಾಲಾ-ಕಾಲೇಜಿನ ವಿದ್ಯಾರ್ಥಿಗಳಿಗೆ ಸಾರಿಗೆ ವ್ಯವಸ್ಥೆ ಇಲ್ಲದೆ ಸರ್ಕಾರಿ ಆಸ್ಪತ್ರೆಯಲ್ಲಿ ಸೂಕ್ತ ಚಿಕಿತ್ಸೆ ಇಲ್ಲದೆ ಜನಸಾಮಾನ್ಯರು ಪರದಾಡುವಂಥ ಪರಿಸ್ಥಿತಿ ನಿರ್ಮಾಣವಾಗಿದೆ.
ರೈತ ಸಂಘದವರ ಒತ್ತಾಯಕ್ಕೆ ಮಣಿದ ಅರಣ್ಯ ಇಲಾಖೆಯ ಎಸಿಎಫ್ ವಿರಾಜ್ ಶ್ರೀಕಾಂತ್ ಹೊಸೂರ್ ಭೇಟಿ ನೀಡಿ ರೈತರಿಂದ ಮನವಿಯನ್ನು ಸ್ವೀಕರಿಸಿ ಹಿರಿಯ ಅಧಿಕಾರಿಗಳ ಗಮನಕ್ಕೆ ತಂದು ಕ್ರಮ ಕೈಗೊಳ್ಳುವ ಭರವಸೆ ನೀಡಿದರು.ಸ15 ದಿನದಲ್ಲಿ ವಿವಿಧ ಬೇಡಿಕೆಗಳನ್ನು ಈಡೇರಿಸಲು ಅರಣ್ಯ ಅಧಿಕಾರಿಗಳು ಕ್ರಮ ಕೈಗೊಳ್ಳದಿದ್ದಲ್ಲಿ ಕರ್ನಾಟಕ ರಾಜ್ಯ ರೈತ ಸಂಘದ ವತಿಯಿಂದ ಉಗ್ರವಾದ ಪ್ರತಿಭಟನೆಯನ್ನು ಹಮ್ಮಿಕೊಳ್ಳಲಾಗುತ್ತದೆ ಎಂದು ಎಚ್ಚರಿಕೆ ನೀಡಿದರು.
ತಾಲೂಕಿನ ವಿವಿಧ ಗ್ರಾಮಗಳಿಂದ ಆಗಮಿಸಿದ್ದ ರೈತ ಮುಖಂಡರು, ರೈತ ಮಹಿಳೆಯರು ಉಪಸ್ಥಿತರಿದ್ದರು.