ಚಿಕ್ಕಮಗಳೂರುತೋಟದಲ್ಲಿ ಕೆಲಸ ನಿರತರಾಗಿದ್ದ ವೃದ್ಧ ರೈತನ ಮೇಲೆ ಕಾಡುಕೋಣ ಭೀಕರ ದಾಳಿ ನಡೆಸಿ ತೀವ್ರವಾಗಿ ಗಾಯ ಗೊಳಿಸಿರುವ ಘಟನೆ ಚಿಕ್ಕಮಗಳೂರು ಜಿಲ್ಲೆಯ ಮೂಡಿಗೆರೆ ತಾಲೂಕಿನ ಮಧುಗುಂಡಿ ಗ್ರಾಮದಲ್ಲಿ ಮಂಗಳವಾರ ನಡೆದಿದೆ.ಮಧುಗುಂಡಿ ಗ್ರಾಮದ ನಂಜೇಗೌಡ (72) ಕಾಡುಕೋಣದ ದಾಳಿಯಲ್ಲಿ ಗಂಭೀರವಾಗಿ ಗಾಯಗೊಂಡ ರೈತ.
ಕನ್ನಡಪ್ರಭ ವಾರ್ತೆ ಚಿಕ್ಕಮಗಳೂರು
ತೋಟದಲ್ಲಿ ಕೆಲಸ ನಿರತರಾಗಿದ್ದ ವೃದ್ಧ ರೈತನ ಮೇಲೆ ಕಾಡುಕೋಣ ಭೀಕರ ದಾಳಿ ನಡೆಸಿ ತೀವ್ರವಾಗಿ ಗಾಯ ಗೊಳಿಸಿರುವ ಘಟನೆ ಚಿಕ್ಕಮಗಳೂರು ಜಿಲ್ಲೆಯ ಮೂಡಿಗೆರೆ ತಾಲೂಕಿನ ಮಧುಗುಂಡಿ ಗ್ರಾಮದಲ್ಲಿ ಮಂಗಳವಾರ ನಡೆದಿದೆ.ಮಧುಗುಂಡಿ ಗ್ರಾಮದ ನಂಜೇಗೌಡ (72) ಕಾಡುಕೋಣದ ದಾಳಿಯಲ್ಲಿ ಗಂಭೀರವಾಗಿ ಗಾಯಗೊಂಡ ರೈತ.ಪ್ರತಿದಿನದಂತೆ ನಂಜೇಗೌಡ ಮಂಗಳವಾರ ಬೆಳಗ್ಗೆ ತಮ್ಮ ತೋಟದಲ್ಲಿ ಕೆಲಸ ಮಾಡುವಾಗ ದಿಢೀರ್ ಪ್ರತ್ಯಕ್ಷವಾದ ಕಾಡುಕೋಣ ಅವರ ಮೇಲೆ ಎರಗಿದೆ. ಕೋಣದ ತೀವ್ರ ಸ್ವರೂಪದ ದಾಳಿಯಿಂದ ಅವರ ದೇಹದ ವಿವಿಧ ಭಾಗಗಳಿಗೆ ತೀವ್ರ ಸ್ವರೂಪದ ಪೆಟ್ಟು ಬಿದ್ದು, ಸ್ಥಳದಲ್ಲೇ ಕುಸಿದು ಬಿದ್ದಿದ್ದರು.ಕೂಡಲೇ ಸ್ಥಳೀಯರು ಹಾಗೂ ಕುಟುಂಬಸ್ಥರು ಅವರನ್ನು ರಕ್ಷಿಸಿ, ಬಣಕಲ್ ಖಾಸಗಿ ಆಸ್ಪತ್ರೆಯಲ್ಲಿ ಪ್ರಾಥಮಿಕ ಚಿಕಿತ್ಸೆ ಕೊಡಿಸಿ ದ್ದಾರೆ. ಆದರೆ, ಆರೋಗ್ಯ ಸ್ಥಿತಿ ಚಿಂತಾಜನಕವಾಗಿದ್ದರಿಂದ ಹೆಚ್ಚಿನ ಚಿಕಿತ್ಸೆಗೆ ಮಂಗಳೂರಿನ ಆಸ್ಪತ್ರೆಗೆ ರವಾನಿಸಲಾಗಿದೆ.ಮೂಡಿಗೆರೆ ಮತ್ತು ಸುತ್ತಮುತ್ತಲಿನ ಮಲೆನಾಡು ಭಾಗಗಳಲ್ಲಿ ಇತ್ತೀಚಿನ ದಿನಗಳಲ್ಲಿ ವನ್ಯಜೀವಿಗಳ ಹಾವಳಿ ಮಿತಿಮೀರಿದ್ದು, ತೋಟಕ್ಕೆ ತೆರಳಲು ರೈತರು ಹಾಗೂ ಕಾರ್ಮಿಕರು ಭೀತಿ ಅನುಭವಿಸುವಂತಾಗಿದೆ. ಅರಣ್ಯ ಇಲಾಖೆ ಅಧಿಕಾರಿಗಳು ತಕ್ಷಣ ಜಾಗೃತರಾಗಿ ಕಾಡುಕೋಣಗಳ ಹಾವಳಿಗೆ ಶಾಶ್ವತ ಪರಿಹಾರ ಒದಗಿಸಬೇಕು ಮತ್ತು ಗಾಯಾಳು ರೈತನಿಗೆ ಸೂಕ್ತ ಪರಿಹಾರ ನೀಡಬೇಕೆಂದು ಗ್ರಾಮಸ್ಥರು ಆಕ್ರೋಶದೊಂದಿಗೆ ಒತ್ತಾಯಿಸಿದ್ದಾರೆ.