ಸಾರಾಂಶ
ಬಾಳೆಹೊನ್ನೂರು, ಕಾಡಾನೆ ದಾಳಿಯಿಂದ ಮೃತಪಟ್ಟ ಅಂಡವಾನೆ ಗ್ರಾಮದ ಜಾಗ್ರ ಸುಬ್ಬೇಗೌಡರ ಮನೆಗೆ ಅನಿವಾಸಿ ಭಾರತೀಯ ಕೋಶದ ಉಪಾಧ್ಯಕ್ಷೆ ಡಾ.ಆರತಿ ಕೃಷ್ಣ ಭೇಟಿ ನೀಡಿ ಕುಟುಂಬದವರಿಗೆ ಸಾಂತ್ವನ ಹೇಳಿದರು.
ಸರ್ಕಾರ ನಿಮ್ಮ ಜೊತೆಗಿದೆ । ಕುಟುಂಬದ ಓರ್ವ ಸದಸ್ಯರಿಗೆ ನೌಕರಿ
ಕನ್ನಡಪ್ರಭ ವಾರ್ತೆ, ಬಾಳೆಹೊನ್ನೂರುಕಾಡಾನೆ ದಾಳಿಯಿಂದ ಮೃತಪಟ್ಟ ಅಂಡವಾನೆ ಗ್ರಾಮದ ಜಾಗ್ರ ಸುಬ್ಬೇಗೌಡರ ಮನೆಗೆ ಅನಿವಾಸಿ ಭಾರತೀಯ ಕೋಶದ ಉಪಾಧ್ಯಕ್ಷೆ ಡಾ.ಆರತಿ ಕೃಷ್ಣ ಭೇಟಿ ನೀಡಿ ಕುಟುಂಬದವರಿಗೆ ಸಾಂತ್ವನ ಹೇಳಿದರು.
ಮೃತರ ಪತ್ನಿ, ಮಗನೊಂದಿಗೆ ಆನೆ ದಾಳಿಯ ಮಾಹಿತಿ ಪಡೆದು, ಸರ್ಕಾರ ನಿಮ್ಮ ಜೊತೆಗಿದೆ. ಈಗಾಗಲೇ ₹20 ಲಕ್ಷ ಪರಿಹಾರ ವಿತರಣೆ ಮಾಡಲಾಗಿದೆ. ಮುಂದಿನ ದಿನಗಳಲ್ಲಿ ಕುಟುಂಬದ ಓರ್ವ ಸದಸ್ಯರಿಗೆ ಸರ್ಕಾರದ ಇಲಾಖೆಯಲ್ಲಿ ತಾತ್ಕಾಲಿಕ ನೆಲೆಗಟ್ಟಿನಲ್ಲಿ ನೌಕರಿ ನೀಡಲಾಗುತ್ತದೆ. ಮಲೆನಾಡಿನಲ್ಲಿ ಕೃಷಿ ಜಮೀನಿನ ಮೇಲೆ ಆನೆ, ಕಾಡುಕೋಣ ಹಾಗೂ ಇತರ ಕಾಡು ಪ್ರಾಣಿಗಳ ಹಾವಳಿ ಕುರಿತು ಅರಣ್ಯ ಸಚಿವರಿಗೆ ಮನವರಿಕೆ ಮಾಡಿಕೊಡುತ್ತೇನೆ. ಈ ಬಗ್ಗೆ ಕೈಗೊಳ್ಳಬಹುದಾದ ಕ್ರಮಗಳ ಕುರಿತು ಅವರೊಂದಿಗೆ ಚರ್ಚಿಸಿ ಶೀಘ್ರ ಅನುಷ್ಠಾನಗೊಳಿಸಲು ಯತ್ನಿಸುತ್ತೇನೆ ಎಂದು ಡಾ. ಆರತಿ ಕೃಷ್ಣ ಆಶ್ವಾಸನೆ ನೀಡಿದರು.ಮೃತ ಸುಬ್ಬೇಗೌಡ ಕುಟುಂಬದ ಸದಸ್ಯರು ಮಾತನಾಡಿ, ನೆಮ್ಮದಿಯಿಂದ ಬದುಕು ಸಾಗಿಸಲು ಕಾಡಾನೆಗಳು ಬಿಡುತ್ತಿಲ್ಲ. ಬೆಳೆ ನಾಶ ಮಾಡುತ್ತಿದ್ದ ಅವುಗಳು ಇದೀಗ ಮನುಷ್ಯರ ಮೇಲೆ ದಾಳಿ ಮಾಡುತ್ತಿವೆ. ಹೀಗಾದರೆ ನಾವುಗಳು ಬದುಕುವುದು ಹೇಗೆ ಎಂದು ಪ್ರಶ್ನಿಸಿದರು.ಡಾ. ಆರತಿ ಕೃಷ್ಣ ಆಪ್ತ ಸಹಾಯಕ ಪ್ರಕಾಶ್ ಬೇಗಾನೆ, ವಾಣಿಜ್ಯ ತೆರಿಗೆ ಇಲಾಖೆಯ ಕಾಳಿಪ್ರಸಾದ್ ಮತ್ತಿತರರು ಹಾಜರಿದ್ದರು. ೦೨ಬಿಹೆಚ್‌ಆರ್ ೧:ಬಾಳೆಹೊನ್ನೂರು ಸಮೀಪದ ಅಂಡವಾನೆಯಲ್ಲಿ ಕಾಡಾನೆ ದಾಳಿಯಿಂದ ಮೃತಪಟ್ಟ ಸುಬ್ಬೇಗೌಡ ಅವರ ಮನೆಗೆ ಅನಿವಾಸಿ ಭಾರತೀಯ ಕೋಶದ ಉಪಾಧ್ಯಕ್ಷೆ ಡಾ.ಆರತಿ ಕೃಷ್ಣ ಭೇಟಿ ನೀಡಿ ಕುಟುಂಬದ ಸದಸ್ಯರಿಗೆ ಸಾಂತ್ವನ ಹೇಳಿದರು.