ಸಾರಾಂಶ
ತೋಟಗಳಲ್ಲಿ ಕಾಡಾನೆಗಳು ದಾಂದಲೆ ನಡೆಸಿ ಅಪಾರ ಕೃಷಿ ಗಿಡಗಳನ್ನು ಧ್ವಂಸ ಮಾಡಿ ನಷ್ಟ ಉಂಟು ಮಾಡಿದೆ.
ಕನ್ನಡಪ್ರಭ ವಾರ್ತೆ ನಾಪೋಕ್ಲುಸಮೀಪದ ಬಲಮಾವಟ್ಟಿ ಗ್ರಾಮ ಪಂಚಾಯಿತಿಯ ವ್ಯಾಪ್ತಿಯಲ್ಲಿ ತೋಟಗಳಲ್ಲಿ ಕಾಡಾನೆಗಳು ದಾಂದಲೆ ನಡೆಸಿ ಅಪಾರ ಕೃಷಿ ಗಿಡಗಳನ್ನು ಧ್ವಂಸ ಮಾಡಿ ನಷ್ಟ ಉಂಟು ಮಾಡಿದೆ.
ಕಳೆದ ಹದಿನೈದು ದಿನಗಳಿಂದ ಪೇರೂರು, ಪುಲಿಕೋಟು, ನೆಲಜಿ, ಪಂದೇಟು ಭಾಗದ ತೋಟಗಳಲ್ಲಿ ಕಾಡಾನೆಗಳ ಹಿಂಡು ದಾಂದಲೆ ನಡೆಸಿದ್ದು ರೈತರು ಅಪಾರ ಸಂಕಷ್ಟಕ್ಕೆ ಒಳಗಾಗಿದ್ದಾರೆ.ಕಾಡಾನೆಗಳ ಉಪಟಳದಿಂದ ಅಪಾರ ಪ್ರಮಾಣದಲ್ಲಿ ಕಾಫಿ, ಬಾಳೆ, ಅಡಿಕೆ ಸೇರಿದಂತೆ ಕೃಷಿ ಗಿಡಗಳು ಹಾನಿಗೊಳಗಾಗಿವೆ. ಕಾಡಾನೆಗಳನ್ನು ಒಂದು ಭಾಗದಿಂದ ಕಾಡಿಗೆ ಅಟ್ಟಿದರೆ ಮತ್ತೊಂದು ಭಾಗದಿಂದ ನುಸುಳುತ್ತವೆ.. ಗ್ರಾಮದ ಜನರು ತೀವ್ರ ಸಂಕಷ್ಟ ಅನುಭವಿಸುತ್ತಿದ್ದಾರೆ.ಅರಣ್ಯ ಇಲಾಖೆ ಅಧಿಕಾರಿಗಳು ಸಿಬ್ಬಂದಿಗಳು ಗ್ರಾಮದಲ್ಲಿರುವ ಕಾಡಾನೆಗಳನ್ನು ಕಾಡಿಗಟ್ಟುವ ಕೆಲಸಮಾಡುತ್ತಿದ್ದಾರೆ. ಆದರೆ ಮತ್ತೆ ರಾತ್ರಿ ಹಿಂತಿರುಗುವ ಕಾಡಾನೆಗಳು ಗಿಡಗಳನ್ನು ಧ್ವಂಸ ಮಾಡುತ್ತಿವೆ ಎಂದು ಮಣವಟ್ಟೀರ ದಯಾ ಚಿಣ್ಣಪ್ಪ ಬೇಸರ ವ್ಯಕ್ತಪಡಿಸಿದ್ದಾರೆ. ಕಾಡಾನೆಗಳನ್ನು ಸೆರೆ ಹಿಡಿಯುವ ಮೂಲಕ ಸ್ಥಳಾಂತರಿಸಲು ಕ್ರಮ ಕೈಗೊಳ್ಳಬೇಕು .ನಷ್ಟ ಸಂಭವಿಸಿದ ಬೆಳೆಗಾರರಿಗೆ ಸೂಕ್ತ ಪರಿಹಾರ ಒದಗಿಸಿಕೊಡಬೇಕೆಂದು ಎಂದು ಅವರು ಹಾಗೂ ಗ್ರಾಮಸ್ಥರು ಒತ್ತಾಯಿಸಿದರು.