ಸಾರಾಂಶ
ಕಾಡಾನೆ ದಾಳಿ ನಡೆಸಿದ ಪರಿಣಾಮ ಮಹಿಳೆ ಗಾಯಗೊಂಡ ಘಟನೆ ನಡೆದಿದೆ. ಮತ್ತಿಕಾಡುವಿನ ಕಾಫಿ ತೋಟದಲ್ಲಿ ಕೆಲಸ ನಿರ್ವಹಿಸುತ್ತಿದ್ದ ಸುನಿತಾ ಎಂಬಾಕೆ ಮೇಲೆ ಕಾಡಾನೆ ದಾಳಿ ನಡೆಸಿದೆ.
ಕನ್ನಡಪ್ರಭ ವಾರ್ತೆ ಸುಂಟಿಕೊಪ್ಪ
ಮತ್ತಿಕಾಡುವಿನ ಕಾಫಿ ತೋಟವೊಂದರಲ್ಲಿ ಕೆಲಸ ನಿರ್ವಹಿಸುತ್ತಿದ್ದ ಸುನಿತಾ ಎಂಬಾಕೆ ಮೇಲೆ ಕಾಡಾನೆ ದಾಳಿ ನಡೆಸಿದ್ದು ಗಾಯಗೊಂಡ ಘಟನೆ ನಡೆದಿದೆ.ಶನಿವಾರ ಬೆಳಗ್ಗೆ 10.30 ರ ಸಂದರ್ಭದಲ್ಲಿ ಮತ್ತಿಕಾಡುವಿನ ಮುನ್ಸಿಪ್ ತೋಟದಲ್ಲಿ 5 ಜನ ಕಾರ್ಮಿಕರು ಎಂದಿನಂತೆ ತೋಟದ ಕೆಲಸದಲ್ಲಿ ನಿರತರಾಗಿದ್ದರು. ಈ ಸಂದರ್ಭ ಏಕಾಏಕಿ ಕಾಡಾನೆ ಪ್ರತ್ಯಕ್ಷಗೊಂಡಿದೆ. ಇದರಿಂದ ಗಾಬರಿಗೊಂಡ 4 ಮಂದಿ ಕಾರ್ಮಿಕರು ಓಡಿ ತಪ್ಪಿಸಿಕೊಂಡಿದ್ದಾರೆ. ಅನತಿ ದೂರದಲ್ಲಿದ್ದ ಸುನಿತಾ (32) ಎಂಬಾಕೆ ಮೇಲೆ ದಾಳಿ ನಡೆಸಿದ್ದು ಪ್ರಾಣಾಪಾಯದಿಂದ ಪಾರಗಿದ್ದಾರೆ. ಗಾಯಗೊಂಡ ಮಹಿಳೆಯನ್ನು ಅರಣ್ಯ ಇಲಾಖೆ ಸಿಬ್ಬಂದಿ ಸುಂಟಿಕೊಪ್ಪ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ಪ್ರಥಮ ಚಿಕಿತ್ಸೆ ನೀಡಿ ಹೆಚ್ಚಿನ ಚಿಕಿತ್ಸೆಗಾಗಿ ಮಡಿಕೇರಿ ಜಿಲ್ಲಾಸ್ಪತ್ರೆಗೆ ಸಾಗಿಸಿದೆ.
ಘಟನೆ ವಿಚಾರ ತಿಳಿಯುತ್ತಿದ್ದಂತೆ ಸ್ಥಳಕ್ಕೆ ಅರಣ್ಯ ಇಲಾಖೆ ಅರಣ್ಯಾಧಿಕಾರಿಗಳು ಹಾಗೂ ಆರ್‌ಆರ್ ಟಿ ತಂಡ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿ ಕಾಡಾನೆಗಳನ್ನು ಕಾಡಿಗೆ ಅಟ್ಟುವ ಕಾರ್ಯಾಚರಣೆಯಲ್ಲಿ ತೊಡಗಿಸಿಕೊಂಡಿದ್ದಾರೆ.ಈ ಸಂದರ್ಭ ಸುಂಟಿಕೊಪ್ಪ ಗ್ರಾ.ಪಂ.ಅಧ್ಯಕ್ಷ ಪಿ.ಆರ್.ಸುನಿಲ್ ಕುಮಾರ್, ದಾದಿಯರು, ಡಿ ಗ್ರೂಫ್, ಆಶಾ ಕಾರ್ಯಕರ್ತೆಯರು ಇದ್ದರು.