ಸಾರಾಂಶ
ಮನೆಯಿಂದ ಸ್ವಲ್ಪ ದೂರದಲ್ಲಿದ್ದ ಅಂಗಡಿಯಿಂದ ಸಾಮಗ್ರಿ ತರಲು ತೆರಳುತ್ತಿದ್ದ ವೇಳೆ ವ್ಯಕ್ತಿ ಮೇಲೆ ಏಕಾಏಕಿ ದಾಳಿ ಮಾಡಿದ ಕಾಡಾನೆ ಸೊಂಡಲಿನಿಂದ ಎತ್ತಿ ಬಿಸಾಡಿ ಗಾಯಗೊಳಿಸಿದ ಘಟನೆ ಸಕಲೇಶಪುರ ತಾಲೂಕಿನ ವಡೂರು ಗ್ರಾಮದಲ್ಲಿ ನಡೆದಿದೆ. ಗಾಯಾಳು ಮಹೇಶ್‌ಗೆ ಸಕಲೇಶಪುರದ ಕ್ರಾಫರ್ಡ್ ಆಸ್ಪತ್ರೆಯಲ್ಲಿ ಪ್ರಾಥಮಿಕ ಚಿಕಿತ್ಸೆ ನೀಡಿ ಹೆಚ್ಚಿನ ಚಿಕಿತ್ಸೆಗಾಗಿ ಜಿಲ್ಲಾಸ್ಪತ್ರೆಗೆ ದಾಖಲು ಮಾಡಲಾಗಿದೆ.
ಕನ್ನಡಪ್ರಭ ವಾರ್ತೆ ಹಾಸನ
ಅಂಗಡಿಗೆ ತೆರಳುತ್ತಿದ್ದ ವ್ಯಕ್ತಿ ಮೇಲೆ ಕಾಡಾನೆ ದಾಳಿ ಮಾಡಿ ಗಾಯಗೊಳಿಸಿರುವ ಘಟನೆ ಸಕಲೇಶಪುರ ತಾಲೂಕಿನ ವಡೂರು ಗ್ರಾಮದಲ್ಲಿ ಮಂಗಳವಾರ ಬೆಳಗ್ಗೆ ನಡೆದಿದೆ.ಘಟನೆಯಲ್ಲಿ ಗ್ರಾಮದ ಮಹೇಶ್ (47) ಎಂಬುವವರು ಗಾಯಗೊಂಡು ಆಸ್ಪತ್ರೆ ಸೇರಿದ್ದಾರೆ. ಮನೆಯಿಂದ ಸ್ವಲ್ಪ ದೂರದಲ್ಲಿದ್ದ ಅಂಗಡಿಯಿಂದ ಸಾಮಗ್ರಿ ತರಲು ತೆರಳುತ್ತಿದ್ದ ವೇಳೆ ಏಕಾಏಕಿ ದಾಳಿ ಮಾಡಿದ ಕಾಡಾನೆ ವ್ಯಕ್ತಿಯನ್ನು ಸೊಂಡಲಿನಿಂದ ಎತ್ತಿ ಬಿಸಾಡಿದೆ. ಇದರಿಂದ ಮಹೇಶ್ ಕಿರುಚಾಡಿದ್ದರಿಂದ ಗ್ರಾಮಸ್ಥರು ಓಡಿ ಬಂದಿದ್ದರಿಂದ ಕಾಡಾನೆ ಕೂಡಲೇ ಕಾಫಿ ತೋಟದೊಳಗೆ ಓಡಿಹೋಗಿದೆ.
ಗಾಯಾಳು ಮಹೇಶ್‌ಗೆ ಸಕಲೇಶಪುರದ ಕ್ರಾಫರ್ಡ್ ಆಸ್ಪತ್ರೆಯಲ್ಲಿ ಪ್ರಾಥಮಿಕ ಚಿಕಿತ್ಸೆ ನೀಡಿ ಹೆಚ್ಚಿನ ಚಿಕಿತ್ಸೆಗಾಗಿ ಜಿಲ್ಲಾಸ್ಪತ್ರೆಗೆ ದಾಖಲು ಮಾಡಲಾಗಿದೆ.