ಶಿವಪ್ಪ ಬಂಗಾರ್ಯ ನಾಯ್ಕ(75) ಹಾಗೂ ನಾಗರಾಜ ಶಿವಪ್ಪ ನಾಯ್ಕ(43) ಎಂಬವರೇ ಅರಣ್ಯ ಇಲಾಖೆ ಅಧಿಕಾರಿಗಳು ಬಂಧಿಸಿರುವ ಆರೋಪಿಗಳು. ವನ್ಯಜೀವಿ ಸಂರಕ್ಷಣಾ ಕಾಯ್ದೆ 1972ರ ವಿವಿಧ ಕಾಯ್ದೆಗಳ ಅಡಿ ಬನವಾಸಿ ವಲಯದ ಅರಣ್ಯ ಅಧಿಕಾರಿಗಳು ಪ್ರಕರಣ ದಾಖಲಿಸಿಕೊಂಡು ಹೆಚ್ಚಿನ ತನಿಖೆ ಕೈಗೊಂಡಿದ್ದಾರೆ.
ಶಿರಸಿ: ಜಮೀನಿನಲ್ಲಿ ಅನಧಿಕೃತವಾಗಿ ಅಳವಡಿಸಿದ್ದ ವಿದ್ಯುತ್ ತಂತಿಯ ಸ್ಪರ್ಶದಿಂದ ಅಂದಾಜು 22 ವಯಸ್ಸಿನ ಗಂಡು ಕಾಡಾನೆಯೊಂದು ಸಾವಿಗೀಡಾಗಿರುವ ಘಟನೆ ತಾಲೂಕಿನ ಮಳಲಗಾಂವ ಗ್ರಾಮದಲ್ಲಿ ನಡೆದಿದೆ. ಘಟನೆಗೆ ಸಂಬಂಧಿಸಿದಂತೆ ಇಬ್ಬರು ಆರೋಪಿಗಳನ್ನು ಬಂಧಿಸಿ ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿದೆ.
ಶಿವಪ್ಪ ಬಂಗಾರ್ಯ ನಾಯ್ಕ(75) ಹಾಗೂ ನಾಗರಾಜ ಶಿವಪ್ಪ ನಾಯ್ಕ(43) ಎಂಬವರೇ ಅರಣ್ಯ ಇಲಾಖೆ ಅಧಿಕಾರಿಗಳು ಬಂಧಿಸಿರುವ ಆರೋಪಿಗಳು. ವನ್ಯಜೀವಿ ಸಂರಕ್ಷಣಾ ಕಾಯ್ದೆ 1972ರ ವಿವಿಧ ಕಾಯ್ದೆಗಳ ಅಡಿ ಬನವಾಸಿ ವಲಯದ ಅರಣ್ಯ ಅಧಿಕಾರಿಗಳು ಪ್ರಕರಣ ದಾಖಲಿಸಿಕೊಂಡು ಹೆಚ್ಚಿನ ತನಿಖೆ ಕೈಗೊಂಡಿದ್ದಾರೆ.ಘಟನೆಯ ಹಿನ್ನೆಲೆ: ತಾಲೂಕಿನ ಮಳಲಗಾಂವ್ ಗ್ರಾಮದ ಶಿವಪ್ಪ ಬಂಗಾರ್ಯ ನಾಯ್ಕ ಹಾಗೂ ನಾಗರಾಜ ಶಿವಪ್ಪ ನಾಯ್ಕ ಎಂಬವರ ಜಮೀನಿನಲ್ಲಿ ಭಾನುವಾರ ರಾತ್ರಿ ಕಾಡಾನೆಯೊಂದು ಅನುಮಾನಾಸ್ಪದವಾಗಿ ಮೃತಪಟ್ಟಿದೆ. ಸುದ್ದಿ ತಿಳಿಯುತ್ತಿದ್ದಂತೆ ಅರಣ್ಯ ಇಲಾಖೆಯ ಅಧಿಕಾರಿಗಳು ಮತ್ತು ತಜ್ಞ ಪಶುವೈದ್ಯರ ತಂಡವು ಭಾನುವಾರ ರಾತ್ರಿಯಿಂದಲೇ ಸ್ಥಳದಲ್ಲಿ ಬೀಡು ಬಿಟ್ಟು ಆನೆಯ ಮರಣೋತ್ತರ ಪರೀಕ್ಷೆ ಆರಂಭಿಸಿದ್ದರು. ಅರಣ್ಯ ಇಲಾಖೆಯ ಹಿರಿಯ ಅಧಿಕಾರಿಗಳು ಘಟನಾ ಸ್ಥಳವನ್ನು ಪರಿಶೀಲಿಸಿ ಆನೆಯ ಸಾವಿಗೆ ನಿಖರ ಕಾರಣವನ್ನು ಪತ್ತೆ ಹಚ್ಚಲು ಹೆಚ್ಚಿನ ತನಿಖೆ ಕೈಗೊಂಡಿದ್ದರು.
ಅಲ್ಲದೆ ಘಟನೆಯ ಸುದ್ದಿ ವ್ಯಾಪಕವಾಗಿ ಹರಡುತ್ತಿದ್ದಂತೆ ಶಾಸಕ ಭೀಮಣ್ಣ ನಾಯ್ಕ ಅವರು ಸೋಮವಾರ ಬೆಳಗ್ಗೆ ಸ್ಥಳಕ್ಕೆ ಭೇಟಿ ನೀಡಿ ಅರಣ್ಯ ಇಲಾಖೆಯ ಹಿರಿಯ ಅಧಿಕಾರಿಗಳು ಮತ್ತು ಪಶು ವೈದ್ಯರಿಂದ ಆನೆಯ ಸಾವಿನ ಕುರಿತು ಸಮಗ್ರ ಮಾಹಿತಿ ಪಡೆದುಕೊಂಡು ಆನೆಯ ಸಾವಿಗೆ ನಿಖರ ಕಾರಣವನ್ನು ಪತ್ತೆ ಹಚ್ಚಬೇಕೆಂದು ಕಟ್ಟುನಿಟ್ಟಿನ ಸೂಚನೆ ನೀಡಿದ್ದರು. ಪಶು ವೈದ್ಯರು ಮರಣೋತ್ತರ ಪರೀಕ್ಷೆ ನಡೆಸಿದ್ದು, ಆನೆಯು ಅಕ್ರಮವಾಗಿ ಅಳವಡಿಸಿದ್ದ ವಿದ್ಯುತ್ ತಂತಿ ಸ್ಪರ್ಶದಿಂದ ಸಾವಿಗೀಡಾಗಿದೆ ದೃಢಪಡಿಸಿದ್ದರು.ಈ ಸಂದರ್ಭದಲ್ಲಿ ಸಿಸಿಎಫ್ ಟಿ. ಹೀರಾಲಾಲ್, ಡಿಸಿಎಫ್ ಸಂದೀಪ ಸೂರ್ಯವಂಶಿ ಹಾಗೂ ಎಸಿಎಫ್ ಅಮಿತ ಚವ್ಹಾಣ ಅವರ ಮಾರ್ಗದರ್ಶನದಲ್ಲಿ ಬನವಾಸಿ ವಲಯ ಅರಣ್ಯಾಧಿಕಾರಿ ಕಾರ್ತಿಕ ಕಂಬಳಿ ಅವರ ನೇತೃತ್ವದಲ್ಲಿ ಅರಣ್ಯ ಇಲಾಖೆ ಸಿಬ್ಬಂದಿ ಪಾಲ್ಗೊಂಡಿದ್ದರು.ಸಾರ್ವಜನಿಕರಲ್ಲಿ ಆತಂಕಮಾನವ ಮತ್ತು ಕಾಡುಪ್ರಾಣಿ ಸಂಘರ್ಷದಿಂದಾಗಿ ಒಂದೆಡೆ ಪ್ರಾಣಿಗಳು ಬಲಿಯಾಗುತ್ತಿದ್ದರೆ ಇನ್ನೊಂದೆಡೆ ಕಾಡುಪ್ರಾಣಿಗಳಿಂದ ಸಾರ್ವಜನಿಕರು ಮತ್ತು ರೈತರು ಬಲಿಯಾಗುತ್ತಿರುವುದು ದುರ್ದೈವದ ಸಂಗತಿ ಎಂದು ಸಾರ್ವಜನಿಕರು ಆತಂಕ ವ್ಯಕ್ತಪಡಿಸಿದ್ದಾರೆ.ಜಿಲ್ಲೆಯಲ್ಲಿ ಕಳೆದ 15 ದಿನಗಳ ಅವಧಿಯಲ್ಲಿ ಚಿರತೆ, ಜಿಂಕೆ ಮತ್ತು ಕರಿಚಿರತೆ ಇದೀಗ ಕಾಡಾನೆ ಸಾವಿಗೀಡಾಗುತ್ತಿರುವುದು ಅರಣ್ಯ ಅಧಿಕಾರಿಗಳ ಹಾಗೂ ಹೆಸ್ಕಾಂ ಅಧಿಕಾರಿಗಳ ನಿರ್ಲಕ್ಷ್ಯ ಮತ್ತು ಬೇಜವಾಬ್ದಾರಿಯೇ ಕಾರಣ ಎಂದು ಸಾರ್ವಜನಿಕರು ಕಳವಳ ವ್ಯಕ್ತಪಡಿಸಿದ್ದಾರೆ.