ಕಾಡಾನೆ ಹಾವಳಿ: ಶಾಶ್ವತ ಪರಿಹಾರಕ್ಕೆ ಆರತಿಕೃಷ್ಣ ಮನವಿ

| Published : Aug 07 2025, 12:45 AM IST

ಕಾಡಾನೆ ಹಾವಳಿ: ಶಾಶ್ವತ ಪರಿಹಾರಕ್ಕೆ ಆರತಿಕೃಷ್ಣ ಮನವಿ
Share this Article
  • FB
  • TW
  • Linkdin
  • Email

ಸಾರಾಂಶ

ಬಾಳೆಹೊನ್ನೂರು, ಶೃಂಗೇರಿ ಕ್ಷೇತ್ರದ ವಿವಿಧೆಡೆ ಕಾಡಾನೆಗಳು ಮಿತಿಮೀರಿದ ಹಾವಳಿ ಉಂಟು ಮಾಡುತ್ತಿದ್ದು, ಇತ್ತೀಚಿನ ದಿನಗಳಲ್ಲಿ ಐದು ಜನರ ಪ್ರಾಣ ಹಾನಿಯನ್ನೂ ಮಾಡಿದೆ. ಈ ಹಿನ್ನೆಲೆಯಲ್ಲಿ ಈ ಸಮಸ್ಯೆಗೆ ಶಾಶ್ವತ ಪರಿಹಾರ ಕಂಡುಕೊಳ್ಳಬೇಕು ಎಂದು ಕೋರಿ ಅನಿವಾಸಿ ಭಾರತೀಯ ಕೋಶದ ಉಪಾಧ್ಯಕ್ಷೆ ಡಾ.ಆರತಿ ಕೃಷ್ಣ ಅರಣ್ಯ ಸಚಿವ ಈಶ್ವರ್ ಬಿ.ಖಂಡ್ರೆ ಅವರಿಗೆ ಮನವಿ ಸಲ್ಲಿಸಿದ್ದಾರೆ.

ಅರಣ್ಯ ಸಚಿವ ಈಶ್ವರ್ ಬಿ.ಖಂಡ್ರೆ ಅವರಿಗೆ ಮನವಿ

ಕನ್ನಡಪ್ರಭ ವಾರ್ತೆ, ಬಾಳೆಹೊನ್ನೂರು

ಶೃಂಗೇರಿ ಕ್ಷೇತ್ರದ ವಿವಿಧೆಡೆ ಕಾಡಾನೆಗಳು ಮಿತಿಮೀರಿದ ಹಾವಳಿ ಉಂಟು ಮಾಡುತ್ತಿದ್ದು, ಇತ್ತೀಚಿನ ದಿನಗಳಲ್ಲಿ ಐದು ಜನರ ಪ್ರಾಣ ಹಾನಿಯನ್ನೂ ಮಾಡಿದೆ. ಈ ಹಿನ್ನೆಲೆಯಲ್ಲಿ ಈ ಸಮಸ್ಯೆಗೆ ಶಾಶ್ವತ ಪರಿಹಾರ ಕಂಡುಕೊಳ್ಳಬೇಕು ಎಂದು ಕೋರಿ ಅನಿವಾಸಿ ಭಾರತೀಯ ಕೋಶದ ಉಪಾಧ್ಯಕ್ಷೆ ಡಾ.ಆರತಿ ಕೃಷ್ಣ ಅರಣ್ಯ ಸಚಿವ ಈಶ್ವರ್ ಬಿ.ಖಂಡ್ರೆ ಅವರಿಗೆ ಮನವಿ ಸಲ್ಲಿಸಿದ್ದಾರೆ.

ಆನೆ ದಾಳಿಯಿಂದ ಜನ ಆತಂತಕಕ್ಕೆ ಒಳಗಾಗಿದ್ದಾರೆ. ರಾಜ್ಯದ ಬೇರೆ ಭಾಗಗಳಳ್ಲಿ ಸೆರೆ ಹಿಡಿಯಲಾದ ಆನೆಗಳನ್ನು ಮಲೆನಾಡಿನ ಅರಣ್ಯ ಪ್ರದೇಶಗಳಿಗೆ ತಂದು ಬಿಡಲಾಗುತ್ತಿದೆ ಎಂಬ ಭಾವನೆ ಮೂಡಿದೆ. ಕಾಡಿನ ನಡುವೆ ವಾಸಿಸುವ ನಾಗರಿಕರಿಗೆ ಆನೆಗಳಿಂದ ಅಪಾಯ ಎದುರಾಗುತ್ತಿದೆ. ಸೆರೆ ಹಿಡಿಯುವ ಆನೆಗಳನ್ನು ಅರಣ್ಯ ಪ್ರದೇಶದಲ್ಲಿ ಲಭ್ಯವಿರುವ ಬೃಹತ್ ಜಾಗ ಗುರುತಿಸಿ ಸುತ್ತ ರೇಲ್ವೇ ಬ್ಯಾರಿಕೇಡ್ ನಿರ್ಮಿಸಿ ಅಲ್ಲಿ ಬಿಡುವುದು ಸೂಕ್ತ ಎಂದು ಮನವಿಯಲ್ಲಿ ತಿಳಿಸಿದ್ದಾರೆ.

ಜಮೀನುಗಳಿಗೆ ದಾಳಿ ತಪ್ಪಿಸಲು ಅರಣ್ಯ ಪ್ರದೇಶದಲ್ಲಿ ಫಲ ನೀಡುವ ಹಲಸು, ಮಾವು ಇತರ ಗಿಡಗಳನ್ನು ಬೆಳೆಸ ಬೇಕು. ಆನೆ ದಾಳಿಯಿಂದ ಮೃತಪಟ್ಟ ಕುಟುಂಬಗಳಿಗೆ ಕೇರಳದಲ್ಲಿ ನೀಡುವಂತೆ ₹25 ಲಕ್ಷ ಪರಿಹಾರ ನೀಡಬೇಕು ಎಂದೂ ಮನವಿಯಲ್ಲಿ ಒತ್ತಾಯಿಸಿದ್ದಾರೆ.

ಮನವಿಗೆ ಸಚಿವರು ಸಕಾರಾತ್ಮಕವಾಗಿ ಸ್ಪಂದಿಸಿದ್ದು ಅಧಿಕಾರಿಗಳ ಜೊತೆಗೆ ಚರ್ಚಿಸಿ ಕ್ರಮ ಕೈಗೊಳ್ಳಲಾಗುವುದು ಎಂದು ಭರವಸೆ ನೀಡಿದ್ದಾರೆ ಎಂದು ಡಾ.ಆರತಿ ಕೃಷ್ಣ ಪತ್ರಿಕೆಗೆ ತಿಳಿಸಿದ್ದಾರೆ.೦೬ಬಿಹೆಚ್‌ಆರ್ ೩:

ಶೃಂಗೇರಿ ಕ್ಷೇತ್ರದ ವಿವಿಧೆಡೆ ನಡೆಯುತ್ತಿರುವ ಕಾಡಾನೆ ಹಾವಳಿ ಸಮಸ್ಯೆಯನ್ನು ಬಗೆಹರಿಸುವಂತೆ ಕೋರಿ ಅನಿವಾಸಿ ಭಾರತೀಯ ಕೋಶದ ಉಪಾಧ್ಯಕ್ಷೆ ಡಾ.ಆರತಿ ಕೃಷ್ಣ ಅರಣ್ಯ ಸಚಿವ ಈಶ್ವರ್ ಬಿ.ಖಂಡ್ರೆ ಅವರಿಗೆ ಮನವಿ ಸಲ್ಲಿಸಿದರು.