ಸಾರಾಂಶ
ಕನಕಪುರ: ತಾಲೂಕಿನ ಕೂನೂರು ಗ್ರಾಮದಲ್ಲಿ ರೈತ ವೀರಪ್ಪ ಭತ್ತದ ಬೆಳೆ ನಾಶ. ತಡರಾತ್ರಿ ಜಮೀನಿಗೆ ನುಗ್ಗಿ ಬೆಳೆ ತಿಂದು ನಾಶ ಮಾಡಿರುವ ಘಟನೆ ಭಾನುವಾರ ರಾತ್ರಿ ನಡೆದಿದೆ.
ಕನಕಪುರ: ತಾಲೂಕಿನ ಕೂನೂರು ಗ್ರಾಮದಲ್ಲಿ ರೈತ ವೀರಪ್ಪ ಭತ್ತದ ಬೆಳೆ ನಾಶ. ತಡರಾತ್ರಿ ಜಮೀನಿಗೆ ನುಗ್ಗಿ ಬೆಳೆ ತಿಂದು ನಾಶ ಮಾಡಿರುವ ಘಟನೆ ಭಾನುವಾರ ರಾತ್ರಿ ನಡೆದಿದೆ. ಭಾನುವಾರ ರಾತ್ರಿ ದಾಳಿ ನಡೆಸಿರುವ ಕಾಡಾನೆ ತೋಟದ ಮನೆ ಗೋಡೆ ಕೆಡವಿ, ಭತ್ತದ ಮೂಟೆಗಳ ತುಳಿದು ದಾಂಧಲೆ ಮಾಡಿದೆ. ಅಪಾರ ಪ್ರಮಾಣದ ನಷ್ಟವನ್ನುಂಟು ಮಾಡಿದೆ. ಕಳೆದ ಮೂರ್ನಾಲ್ಕು ದಿನಗಳಿಂದ ಗ್ರಾಮದ ಸುತ್ತ- ಮುತ್ತ ನಿರಂತರವಾಗಿ ರೈತರ ಜಮೀನುಗಳಿಗೆ ನುಗ್ಗಿ ಬೆಳೆ ನಾಶ ಮಾಡುತ್ತಿರುವ ಕಾಡಾನೆ ಹಾವಳಿಗೆ ಗ್ರಾಮಸ್ಥರು ಕಂಗಲಾಗಿದ್ದು ಅರಣ್ಯ ಇಲಾಖೆಯ ವಿರುದ್ಧ ಆಕ್ರೋಶ ವ್ಯಕ್ತಪಡಿಸಿ ಕಾಡಾನೆಗಳ ದಾಳಿಯಿಂದ ಆಗುತ್ತಿರುವ ನಷ್ಟಕ್ಕೆ ಶಾಶ್ವತ ಪರಿಹಾರ ಒದಗಿಸುವಂತೆ ಆಗ್ರಹಿಸಿದ್ದಾರೆ. ಘಟನೆ ನಡೆದ ಸ್ಥಳಕ್ಕೆ ಅರಣ್ಯ ಇಲಾಖೆ ಎಸಿಎಫ್ ಜಗದೀಶ್ ಸೇರಿದಂತೆ ಹಲವು ಅರಣ್ಯ ಅಧಿಕಾರಿಗಳು ಭೇಟಿ ನೀಡಿ ಪರಿಶೀಲನೆ ನಡೆಸಿ ಮಾಹಿತಿ ಪಡೆದು ಸೂಕ್ತ ಪರಿಹಾರ ನೀಡುವ ಭರವಸೆ ನೀಡಿದ್ದಾರೆ.
;Resize=(128,128))
;Resize=(128,128))
;Resize=(128,128))