ಅರೇಹಳ್ಳಿ ಹೋಬಳಿಯಲ್ಲಿ ಕಾಡಾನೆಗಳ ಹಿಂಡು

| Published : Aug 19 2024, 12:55 AM IST

ಸಾರಾಂಶ

ಬೇಲೂರು ತಾಲೂಕಿನ ಅರೇಹಳ್ಳಿ ಹೋಬಳಿಯ ವ್ಯಾಪ್ತಿಯಾದ್ಯಂತ ಕಾಡಾನೆಗಳು ನಡು ರಸ್ತೆಯಲ್ಲೆ ಗುಂಪಾಗಿ ಓಡಾಡುತ್ತಿದ್ದು ಸಾರ್ವಜನಿಕರು ಆತಂಕಕ್ಕೀಡಾಗಿದ್ದಾರೆ.ಕಾಫಿ ತೋಟ, ಅಡಿಕೆ, ಬಾಳೆ, ಜೋಳದ ಹೊಲಗಳನ್ನು ಸಂಪೂರ್ಣ ಸರ್ವನಾಶ ಮಾಡುತ್ತಿರುವ ಅಷ್ಟು ಕಾಡಾನೆಗಳನ್ನು ಬೇರೆಡೆಗೆ ಸ್ಥಳಾಂತರಿಸುವುದರ ಮೂಲಕ ಬೆಳೆ ನಷ್ಟದಿಂದ ಉಂಟಾಗುತ್ತಿರುವ ಆರ್ಥಿಕ ನಷ್ಟದಿಂದ ಪಾರು ಮಾಡಿ ಎಂಬುದು ರೈತರ ಒತ್ತಾಯವಾಗಿದೆ.

ಕನ್ನಡಪ್ರಭ ವಾರ್ತೆ ಬೇಲೂರು

ತಾಲೂಕಿನ ಅರೇಹಳ್ಳಿ ಹೋಬಳಿಯ ವ್ಯಾಪ್ತಿಯಾದ್ಯಂತ ಕಾಡಾನೆಗಳು ನಡು ರಸ್ತೆಯಲ್ಲೆ ಗುಂಪಾಗಿ ಓಡಾಡುತ್ತಿದ್ದು ಸಾರ್ವಜನಿಕರು ಆತಂಕಕ್ಕೀಡಾಗಿದ್ದಾರೆ. ತೋಟಗಳಲ್ಲಿ ಬೀಡು ಬಿಟ್ಟಿರುವ ಕಾಡಾನೆಗಳಿಂದ ಬಸವಳಿದ ರೈತರು ಹಾಗೂ ಕಾಫಿ ಬೆಳೆಗಾರರು ಬೇರೆಡೆಗೆ ಆನೆಗಳನ್ನು ಓಡಿಸುವ ಕಾಯಕದಲ್ಲಿ ನಿರತರಾಗಿರುವುದು ಸಾಮಾನ್ಯವಾಗಿದೆ. ಈ ನಡುವೆ ಒಂದು ತೋಟದಿಂದ ಮತ್ತೊಂದು ತೋಟಕ್ಕೆ ದಾಟುವ ಆನೆಗಳನ್ನು ಸಾರ್ವಜನಿಕರು ವಿಡಿಯೋ ಮಾಡಿಕೊಂಡಿದ್ದಾರೆ. ಕಾಫಿ ತೋಟ, ಅಡಿಕೆ, ಬಾಳೆ, ಜೋಳದ ಹೊಲಗಳನ್ನು ಸಂಪೂರ್ಣ ಸರ್ವನಾಶ ಮಾಡುತ್ತಿರುವ ಅಷ್ಟು ಕಾಡಾನೆಗಳನ್ನು ಬೇರೆಡೆಗೆ ಸ್ಥಳಾಂತರಿಸುವುದರ ಮೂಲಕ ಬೆಳೆ ನಷ್ಟದಿಂದ ಉಂಟಾಗುತ್ತಿರುವ ಆರ್ಥಿಕ ನಷ್ಟದಿಂದ ಪಾರು ಮಾಡಿ ಎಂಬುದು ರೈತರ ಒತ್ತಾಯವಾಗಿದೆ.